ಕೆಎಸ್‌ಆರ್‌ಟಿಸಿ ಮುಚ್ಚುವ ಸ್ಥಿತಿ ನಿರ್ಮಾಣ: ಮಾಜಿ ಸಿಎಂ ಬೊಮ್ಮಾಯಿ

Date:

  • ‘ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಾಯಕರ ಬಣ್ಣ ಬಯಲು ಆಗಲಿದೆ’
  • ‘ಒಂದೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ’

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಂದಾಗಿ ಕೆಎಸ್‌ಆರ್‌ಟಿಸಿ ಮುಚ್ಚುವ ಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ” ಡೀಸೆಲ್ ಇಲ್ಲದೇ ಬಸ್‌ಗಳು ನಿಲ್ಲುವ ಸ್ಥಿತಿ ನಿರ್ಮಾಣ ಆಗಲಿದೆ. ಕರ್ನಾಟಕ ಕತ್ತಲಲ್ಲಿ ಮುಳುಗುವ ಸ್ಥಿತಿ ನಿರ್ಮಾಣ ಆಗಲಿದೆ” ಎಂದರು.

“ಗ್ಯಾರಂಟಿಗೆ ಕಂಡಿಷನ್ ಹಾಕಿದ್ದು ಯಾಕೆ? ಒಂದೇ ತಿಂಗಳಲ್ಲಿ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದ್ದು ಇದೇ ಮೊದಲು. ಮಳೆ ಇಲ್ಲ, ಜಲಾಶಯಗಳಲ್ಲಿ ನೀರು ಇಲ್ಲ. ಈ ಬಗ್ಗೆ ಇವರಿಗೆ ಚಿಂತನೆ ಇಲ್ಲ. ಅಕ್ಕಿ ಕೊಟ್ಟಿಲ್ಲ ಎಂದು ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ” ಎಂದು ಹರಿಹಾಯ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸರ್ಕಾರದಲ್ಲಿದ್ದುಕೊಂಡು ಇವರು ಪ್ರತಿಭಟನೆ ಮಾಡುತ್ತಿದ್ದಾರೆ. ಅಕ್ಕಿ ಖರೀದಿಯಲ್ಲಿ ಏನಾಗಿದೆ ಎಂಬುದು ನನಗೆ ಗೊತ್ತು. ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಾಯಕರ ಬಣ್ಣ ಬಯಲು ಆಗಲಿದೆ. ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಈಗ ಪರ್ಸೆಂಟೇಜ್ ಫಿಕ್ಸ್ ಆಗುತ್ತಿದೆ. ಯಾವ ಯಾವ ಮಂತ್ರಿ ಗುತ್ತಿಗೆದಾರನಿಗೆ ಕರೆದು ಏನ್ ಹೇಳಿದ್ದಾರೆ ಗೊತ್ತು” ಎಂದರು.

ಸಾರಿಗೆ ಇಲಾಖೆಗೆ ಯಾವುದೇ ನಷ್ಟ ಆಗಿಲ್ಲ: ರಾಮಲಿಂಗಾರೆಡ್ಡಿ

ಸಾರಿಗೆ ಇಲಾಖೆಗೆ ಯಾವುದೇ ನಷ್ಟ ಆಗಿಲ್ಲ, ಶಕ್ತಿಯುತವಾಗಿದೆ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಶಕ್ತಿ ಯೋಜನೆಯಲ್ಲಿ ಕೆಲ ಸಣ್ಣಪುಟ್ಟ ದೋಷಗಳಿವೆ. ಆದರೆ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಒಮ್ಮೆ ಹೋದವರು ಮತ್ತೆ ಹೋಗುವುದಿಲ್ಲ, ಎಲ್ಲ ಸರಿಹೋಗಲಿದೆ” ಎಂದರು.

“ಸಾರಿಗೆ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡಬೇಕಾಗುತ್ತದೆ. ಪ್ರಯಾಣಿಕರ ಜೊತೆ ಸೌಜನ್ಯದಿಂದ ವರ್ತಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೂಡ ಸಿಬ್ಬಂದಿಗೆ ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಓಳ್ಳೆದೇ ,ನಿನ್ನ ಪಕ್ಷದವರು ಅದಾನಿಗೋ ಅಂಬಾನಿಗೆ ಕೋಟ್ಟಿಬಿಡೀ ,ಸೀದಾ 40% ಬಂತಲ್ಲಾ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ‘ಪೆನ್‌ಡ್ರೈವ್’ ಪ್ರಕರಣಕ್ಕೆ ಸಂಬಂಧಿಸಿದವರ ಬಂಧನಕ್ಕೆ ಆಗ್ರಹ; ಏ.29ರಂದು ಪ್ರತಿಭಟನೆ

ಇಡೀ ನಾಗರಿಕ ಸಮಾಜವೇ ಬೆಚ್ಚಿಬೀಳುವಂತ ಘಟನೆ ಹಾಸನದಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ...

ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ತನ್ನದೇ ಛಾಪು ಮೂಡಿಸಿದೆ: ಮಂಜುನಾಥ ಸುಣಗಾರ

ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ...

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...