ತಂಬಾಕು ಮುಕ್ತ ಕೃಷಿ ಗುರಿ; ಆರ್‌ಡಿಪಿಆರ್ ಜೊತೆಗೆ ಕೈಜೋಡಿಸಲು ಮುಂದಾದ ಕೆಎಸ್‌ಟಿಸಿಸಿ

Date:

ರಾಜ್ಯದ ಕೃಷಿ ಭೂಮಿಯನ್ನು ತಂಬಾಕು ಮುಕ್ತ ಭೂಮಿಯನ್ನಾಗಿ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ತಂಬಾಕು ನಿಯಂತ್ರಣ ಘಟಕ (ಕೆಎಸ್‌ಟಿಸಿಸಿ)ವು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯೊಂದಿಗೆ (ಆರ್‌ಡಿಪಿಆರ್) ಕೈಜೋಡಿಸಲು ಮುಂದಾಗಿದೆ.

- Advertisement -

ಕೃಷಿ ಭೂಮಿಯನ್ನು ತಂಬಾಕು ಮುಕ್ತಗೊಳಿಸಿ, ರೈತರಿಗೆ ವೈವಿಧ್ಯ ಬೆಳೆಗಳ ಆಯ್ಕೆಗಳನ್ನು ನೀಡುವ ಸಲುವಾಗಿ ಕೆಎಸ್‌ಟಿಸಿಸಿ, ಆರ್‌ಡಿಪಿಆರ್ ಜೊತೆಗೆ ಕೈಜೋಡಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಸುಮಾರು 25-30 ಗ್ರಾಮಗಳನ್ನು ತಂಬಾಕು ಮುಕ್ತಗೊಳಿಸಲಾಗಿದೆ. ಇದೀಗ ಇತರ ಸರ್ಕಾರಿ ಇಲಾಖೆಗಳ ನೆರವಿನೊಂದಿಗೆ ತಂಬಾಕು ಬೆಳೆಯುವ ಮೈಸೂರು, ಹಾಸನ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಮಡಿಕೇರಿ ಜಿಲ್ಲೆಯಲ್ಲಿಯೂ ಇದೇ ಮಾದರಿ ಅನುಸರಿಸಲು ನಿರ್ಧರಿಸಲಾಗಿದೆ” ಎಂದು ಕೆಎಸ್‌ಟಿಸಿಸಿ ಯೋಜನಾ ಸಂಯೋಜಕ ಪ್ರಭಾಕರ ತಿಳಿಸಿದ್ದಾರೆ.

“ರೈತರಿಗೆ ಸಂಭವನೀಯ ಪರ್ಯಾಯ ಬೆಳೆ ಪರಿಹಾರಗಳನ್ನು ಸೂಚಿಸಲು ತಂಬಾಕು ಬೆಳೆಯುವ ಪ್ರದೇಶಗಳನ್ನು ಪರಿಶೀಲಿಸಲಾಗುತ್ತದೆ. ಬಳಿಕ ತಂಬಾಕು ಉತ್ಪಾದನೆಯೇ ಜೀವನಾಧಾರವಾಗಿರುವ ಜನರ ಮೇಲೆ ತಂಬಾಕಿನ ವ್ಯತಿರಿಕ್ತ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳನ್ನು ತಿಳಿಸಲಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಜಾನುವಾರುಗಳ ಪಶು ಆಧಾರ್‌ ನೋಂದಣಿಗೆ ಸಿದ್ಧತೆ

“ವಿಶ್ವ ಆರೋಗ್ಯ ಸಂಸ್ಥೆ ಕೂಡ ʼಕೃಷಿ ಭೂಮಿಯನ್ನು ತಂಬಾಕು ಮುಕ್ತಗೊಳಿಸಬೇಕಿದ್ದು, ಇದಕ್ಕೆ ಪರಿಹಾರವಾಗಿ ಆರ್ಥಿಕವಾಗಿ ಸಮರ್ಥನೀಯ ಪರ್ಯಾಯಗಳನ್ನು ಉತ್ತೇಜಿಸುವ ಅಗತ್ಯವಿದೆʼ ಎಂದು ಹೇಳಿದೆ” ಎಂದರು.

“ಕರ್ನಾಟಕದಲ್ಲಿ ತಂಬಾಕು ಉತ್ಪಾದನೆಯನ್ನು ಕಡಿತಗೊಳಿಸಲು ಇಲಾಖೆಯೊಂದಿಗೆ ಕೆಲಸ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಕೂಡ ಹಲವು ಕ್ರಮಗಳನ್ನು ಕೈಗೊಂಡು ಪರಿಣತಿ ಮತ್ತು ಸಂಪನ್ಮೂಲಗಳನ್ನು ವಿಸ್ತರಿಸಬೇಕು” ಎಂದು ತಂಬಾಕು ಮುಕ್ತ ಕರ್ನಾಟಕಕ್ಕಾಗಿ ಒಕ್ಕೂಟದ ಸಂಚಾಲಕ ಎಸ್‌ ಜೆ ಚಂದರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...