ಕೂಡಲ ಸಂಗಮ | ಬಂಧುತ್ವಕ್ಕೆ ಬೆಂಕಿ ಹಚ್ಚುವ ಹಿಂದುತ್ವ ಬೇಡ: ಜ್ಞಾನ ಪ್ರಕಾಶ ಸ್ವಾಮೀಜಿ

Date:

ಹಿಂದುತ್ವ ಕೇವಲ ಮತ ಬ್ಯಾಂಕ್ ಆಗಿದೆ. ಬಂಧುತ್ವಕ್ಕೆ ಬೆಂಕಿ ಹಚ್ಚುವ ಅಂತಹ ಹಿಂದುತ್ವ ಬೇಡ ಎಂದು ಮೈಸೂರು ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಬಸವ-ಭೀಮಸಂಗಮ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಹಿಂದುಗಳು ಬಸವಣ್ಣನನ್ನು ವಿಶ್ವಗುರುವಾಗಲು ಬಿಡುತ್ತಿಲ್ಲ. ಬಸವ- ಅಂಬೇಡ್ಕರರ ಜ್ಞಾನದ ಬೀಜವನ್ನು ಮನೆ ಮನದಲ್ಲಿ ಬಿತ್ತಿದರೆ ಹಿಂದುತ್ವದ ಬೀಜ ನಾಶವಾಗುವುದು ಖಚಿತ” ಎಂದರು.

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪ ಮಾತನಾಡಿ, “ಧರ್ಮಕ್ಕೆ ಮಾನವೀಯತೆ ಅಗತ್ಯ. ಜನ ಕಾಳಜಿ, ಸಮಾನತೆಯಂತ ತತ್ವಗಳ ನೆಲೆಗಟ್ಟಿನ ಮೇಲೆ ಬಸವಣ್ಣನ ವಿಚಾರಗಳಿದ್ದು, ಅದರ ಅಳವಡಿಕೆ ಭಾರತ ಸಂವಿಧಾನ. ಬಸವ-ಭೀಮರ ವಿಚಾರಧಾರೆಯ ಬಂಧುತ್ವ ಅನುಕರಣೆ ಇರಲಿ” ಎಂದು ತಿಳಿಸಿದರು.

ಸತ್ಯ ಶೋಧಕ ಸಂಘದ ರಾಜ್ಯ ಘಟಕದ ಅಧ್ಯಕ್ಷ ಪರಶುರಾಮ ಮಹಾರಾಜ ಮಾತನಾಡಿ, “ವೈದಿಕರು ವೇದಗಳ ಮೂಲಕ ಸಮಾಜ ಒಡೆಯುವ ಕಾರ್ಯ ಮಾಡಿದರು. ಸಮಾನತೆಯ ಮೂಲಕ ಸಮಾಜ ಕಟ್ಟುವ ಕಾರ್ಯವನ್ನು ಬಸವಣ್ಣನವರು ಮಾಡಿದರು. ಬಲಪಂಥೀಯ ಸಿದ್ದಾಂತ ರಾಜಕಾರಣದಿಂದ ಇಂದು ಬಸವ -ಭೀಮರ ವಿಚಾರಧಾರೆಗಳು ಭಾವಚಿತ್ರಕ್ಕೆ ಸೀಮಿತಗೊಂಡಿದ್ದು, ಚಿಂತನೆಯಲ್ಲಿ ಬರುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.‌

ಇದನ್ನೂ ಓದಿ: ಬಾಗಲಕೋಟೆ | ಕಲಾ ಪ್ರತಿಭೋತ್ಸವಕ್ಕೆ ಅರ್ಜಿ ಆಹ್ವಾನ

ತಂಗಡಗಿ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮುಖಂಡರಾದ ಶರಣಪ್ಪ ಆಗಮದಿಹಾಳ, ಎಂ ಗೋಪಿನಾಥಮ್, ಮಹಾಂತೇಶ್ ಆವರಿ, ಎಸ್ ಎಮ್ ಪುರಾಣಿಕ, ಗಂಗಣ್ಣ ಬಾಗೇವಾಡಿ, ಶಿವಾನಂದ ಕಂಠಿ, ವಿಜಯ ಮಹಾಂತೇಶ ಗದ್ದನಕೇರಿ, ನಾಗರಾಜ ನಾಡಗೌಡ, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...