ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ: ಸಿಎಂ ಸಿದ್ದರಾಮಯ್ಯ

Date:

  • ಸಾರಿಗೆ ಇಲಾಖೆ ಚಾಲಕರ ಆತ್ಮಹತ್ಯೆ ಆರೋಪದಲ್ಲಿ ಹುರುಳಿಲ್ಲ
  • ಇಲಾಖೆ ವರ್ಗಾವಣೆ ಮಾಡಿದ್ದಕ್ಕೆ ವಿಷ ಕುಡಿದಿದ್ದಾರೆ: ಸಿದ್ದರಾಮಯ್ಯ

ಸಾರಿಗೆ ಇಲಾಖೆ ಚಾಲಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಸಚಿವ ಚಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಾಜಿ ಉಪಪ್ರಧಾನಮಂತ್ರಿ ಡಾ. ಬಾಬು ಜಗಜೀವನ್ ರಾಂ ಅವರ 37 ನೇ ಪುಣ್ಯಸ್ಮರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮೃತ ಚಾಲಕರು ಡೆತ್ ನೋಟಿನಲ್ಲಿ ಸಚಿವ ಚಲುವರಾಯಸ್ವಾಮಿಯವರ ಹೆಸರು ಬರೆದಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವರ ರಾಜೀನಾಮೆ ಕೊಡಬೇಕು ಎಂದಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ವಿಚಾರ ಮಾಡುತ್ತೇನೆ. ಅವರ ಪತ್ನಿ ಪಂಚಾಯತಿ ಸದಸ್ಯರು, ಅಧ್ಯಕ್ಷರಾಗುವ ಪ್ರಯತ್ನ ಮಾಡುತ್ತಿದ್ದಾರೆ. ಇಲಾಖೆ ವರ್ಗಾವಣೆ ಮಾಡಿದ್ದು, ವರ್ಗಾವಣೆ ಮಾಡಿದ ಕಾರಣಕ್ಕೆ ವಿಷ ಕುಡಿದಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕುಮಾರಸ್ವಾಮಿ ಹತಾಶರಾಗಿದ್ದಾರೆ

ಎಚ್‌ ಡಿ ಕುಮಾರಸ್ವಾಮಿ ಅವರು ವರ್ಗಾವಣೆಗಳ ಬಗ್ಗೆ ಹತಾಶರಾಗಿದ್ದಾರೆ. ಸರ್ಕಾರ ವರ್ಗಾವಣೆ ಮಾಡಲೇಬೇಕು, ಮಾಡುತ್ತಿದೆ. ಅದಕ್ಕೆ ದಂಧೆ ನಡೆದಿದೆ, ಲಂಚ ಪಡೆದಿದ್ದಾರೆ ಎನ್ನುವುದು ಸುಳ್ಳು ಆರೋಪ. ಅವರ ಕಾಲದಲ್ಲಿಯೂ ವರ್ಗಾವಣೆ ಆಗಿದ್ದವು. ಅವರು ದುಡ್ಡು ಪಡೆದಿದ್ದರೆ? ಊಹೆ ಮೇಲೆ ಹೇಳಲಾಗುವುದಿಲ್ಲ. ಹೊಸ ಸರ್ಕಾರ ಬಂದಿದೆ. ವರ್ಗಾವಣೆಯನ್ನು ಆಡಳಿತದ ಹಿತದೃಷ್ಟಿಯಿಂದ ಮಾಡಬೇಕು. ಮಾರ್ಚ್, ಏಪ್ರಿಲ್‌ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ವರ್ಗಾವಣೆ ಆಗಿರಲಿಲ್ಲ. ಈಗ ಸಾಮಾನ್ಯ ವರ್ಗಾವಣೆಗಳಾಗುತ್ತಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಸೂರು ಸ್ಯಾಂಡಲ್ ಸೋಪ್: ಭ್ರಷ್ಟ ಜನಪ್ರತಿನಿಧಿ, ಅಧಿಕಾರಶಾಹಿಗೆ ಬೇಕಿದೆ ಚಾಟಿಯೇಟು

ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ

ಕುಮಾರಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಎಚ್ ಡಿ ಕುಮಾರಸ್ವಾಮಿ ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ಮಾಡಿರುವ ಯಾವ ಆರೋಪಗಳನ್ನು ತಾರ್ತಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರಾ? ಎಂದು ಪ್ರಶ್ನಿಸಿದರು.

ಮಾಜಿ ಶಾಸಕ ಯತೀಂದ್ರ ಅವರ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಮಾತನಾಡಿ, “ಅವರ ಮೇಲೆ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರ ಮನೆ ಮಗ, ಅವರ ಅಣ್ಣ ಸಚಿವರಾಗಿದ್ದವರು, ಅವರ ಪತ್ನಿ ಶಾಸಕರು, ಅವರ ತಂದೆ ಪ್ರಧಾನಿಗಳಾಗಿದ್ದವರು, ಅವರ ಅಣ್ಣನ ಮಕ್ಕಳು ಶಾಸಕರಾಗಿದ್ದಾರಲ್ಲ, ಅವರನ್ನು ಏನಂತ ಕರೆಯಬೇಕು ಎಂದು ಕೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ವಿಸರ್ಜನೆ ವೇಳೆ ಗಲಾಟೆ: ಓರ್ವ ಸಾವು

ಹಳೆ ದ್ವೇಷದ ಹಿನ್ನೆಲೆ ಇಟ್ಟುಕೊಂಡು ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು,...

ಕಾಂಗ್ರೆಸ್‌ ಒಳಜಗಳದಿಂದ ದೀಪಾವಳಿ ಒಳಗೆ ಸರ್ಕಾರ ಪತನ: ಸಿ ಟಿ ರವಿ

ದೀಪಾವಳಿ ಹಬ್ಬದ ಒಳಗೆ ಕಾಂಗ್ರೆಸ್‌ ಸರ್ಕಾರ ಬೀಳಲಿದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ...

ಗದಗ | ಮೌಢ್ಯತೆ ಆಚರಿಸುವ ದೇಶಗಳ ಅಭಿವೃದ್ಧಿ ಸಾಧ್ಯವಿಲ್ಲ: ಡಾ. ಜಯದೇವಿ ಗಾಯಕವಾಡ

ಯಾವ ದೇಶದಲ್ಲಿ ಮೌಢ್ಯ ಸಂಪ್ರದಾಯಗಳ ಆಚರಣೆ ಇರುತ್ತವೆಯೋ, ಅಂತಹ ದೇಶಗಳ ಅಭಿವೃದ್ಧಿ...

ಕಾಂಗ್ರೆಸ್‌ನಲ್ಲಿ ನಿಲ್ಲದ ಮುಖ್ಯಮಂತ್ರಿ ಅಭ್ಯರ್ಥಿ ಕೂಗು, ‘ನಾನೂ ಸಿಎಂ ಆಗುವೆ’ ಎಂದ ಬಸವರಾಜ ರಾಯರೆಡ್ಡಿ

ಖಾಲಿ ಇಲ್ಲದ ಸಿಎಂ ಕುರ್ಚಿಗಾಗಿ ಕ್ಷುಲ್ಲಕ ರಾಜಕಾರಣದಲ್ಲಿ ಮುಳುಗೇಳಿ, ವ್ಯರ್ಥ ಹೇಳಿಕೆ...