ಉಪಸಭಾಧ್ಯಕ್ಷರು ದಲಿತರು ಎನ್ನುವ ಟ್ರಂಪ್ ಕಾರ್ಡ್‌ ತೇಲಿಬಿಟ್ಟ ಸರ್ಕಾರ: ಕುಮಾರಸ್ವಾಮಿ ಕಿಡಿ

Date:

  • ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ ಅವರು ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ಬಿಟ್ಟುಕೊಡಲಿ
  • ದಲಿತರನ್ನೇ ಸಿಎಂ ಮಾಡಲಿ, ನುಡಿದಂತೆ ನಡೆಯುವ ಈ ಪಕ್ಷಕ್ಕೆ ಇದು ಅಸಾಧ್ಯವೇ?: ಎಚ್‌ಡಿಕೆ

ಉಪಸಭಾಧ್ಯಕ್ಷರು ದಲಿತರೆನ್ನುವ ಟ್ರಂಪ್ ಕಾರ್ಡ್‌ ಅನ್ನು ಸರ್ಕಾರ ತೇಲಿಬಿಟ್ಟಿದೆ. ದಲಿತರೆನ್ನುವ ಕಾರಣಕ್ಕೆ ಉಪಸಭಾಧ್ಯಕ್ಷರ ಮೇಲೆ ಅನುಕಂಪದ ಹೊಳೆ ಹರಿಸುವ ಕಾಂಗ್ರೆಸ್, ಅವರಿಗೆ ಸಚಿವ ಸ್ಥಾನವನ್ನೇ ನೀಡಬಹುದಿತ್ತು. ನೀಡಲಿಲ್ಲ ಯಾಕೆ? ಶಾಸಕ ಪುಟ್ಟರಂಗಶೆಟ್ಟಿ ಅವರು ಬೇಡವೇ ಬೇಡ ಎಂದ ಹುದ್ದೆಯನ್ನು ರುದ್ರಪ್ಪ ಲಮಾಣಿ ಅವರ ತಲೆಗೆ ಕಟ್ಟಿದ್ದು ಯಾಕೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ‌ಸರಣಿ ಟ್ವೀಟ್ ಮಾಡಿರುವ ಅವರು, “ಇಂತಹ ಅತಿಯಾದ ಜಾಣತನ, ಭಂಡತನ ಯಾಕೆ? ಸಂಪುಟ ರಚನೆ ವೇಳೆ ರುದ್ರಪ್ಪ ಲಮಾಣಿ ಅವರು ದಲಿತರೆನ್ನುವುದು ಕಾಂಗ್ರೆಸ್’ಗೆ ಗೊತ್ತಿರಲಿಲ್ಲವೇ? ದಲಿತ ಕಾರ್ಡ್ ಬಿಟ್ಟ ಪ್ರಿಯಾಂಕ್ ಖರ್ಗೆ ಅಥವಾ ಕೃಷ್ಣಭೈರೇಗೌಡರಿಗೆ ಅಷ್ಟು ದಲಿತ ಪ್ರೇಮ ಇದ್ದರೆ ಅವರೇ ಸಚಿವಗಿರಿಯನ್ನು ಲಮಾಣಿ ಅವರಿಗೇ ಬಿಟ್ಟುಕೊಟ್ಟು ಈ ಇಬ್ಬರಲ್ಲಿ ಒಬ್ಬರು ಉಪ ಸಭಾಧ್ಯಕ್ಷರಾಗಲಿ” ಎಂದು ಆಗ್ರಹಿಸಿದ್ದಾರೆ.

“ಅಷ್ಟೇ ಅಲ್ಲ; ದಲಿತ ಮುಖ್ಯಮಂತ್ರಿ ಕೂಗು ಕಾಂಗ್ರೆಸ್ ಪಕ್ಷದಲ್ಲಿ ಬಹಳ ದಿನಗಳಿಂದ ಇದೆ. ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಹುದ್ದೆ ಕೈ ತಪ್ಪುವಂತೆ ಮಾಡಲಾಗಿತ್ತು. ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ. ದಲಿತರನ್ನೇ ಸಿಎಂ ಮಾಡಲಿ. ನುಡಿದಂತೆ ನಡೆಯುವ ಪಕ್ಷಕ್ಕೆ ಇದು ಅಸಾಧ್ಯವೇ?” ಎಂದು ಸವಾಲು ಹಾಕಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಸ್ಪೀಕರ್ ಮೇಲೆ ಅವಿಶ್ವಾಸ: ಸದನದ ಹಾದಿ ತಪ್ಪಿಸುವ ಅತಿ ಬುದ್ಧಿವಂತಿಕೆ!

“ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ. ಅದಕ್ಕೆ ರಾಜ್ಯ ಕಾಂಗ್ರೆಸ್‌ ಸರ್ಕಾರವೇ ಜೀವಂತ ಸಾಕ್ಷಿ. 2018ರಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಹೊರರಾಜ್ಯಗಳ ಗಣ್ಯರಿಗೆ ಆತಿಥ್ಯ ನೀಡಲು ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿರಲಿಲ್ಲವೆ ಎಂದು ಕೆಲವರು ಪ್ರಶ್ನಿಸಿದ್ದಾರೆ! ಸ್ವತಃ ಮುಖ್ಯಮಂತ್ರಿಗಳು, ಸಂಸದೀಯ ಸಚಿವರು, ಇನ್ನೂ ಕೆಲ ಮಂತ್ರಿಗಳು ಸದನವನ್ನೇ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ಆಗ ನಾನು ಕೇವಲ ನಿಯೋಜಿತ ಮುಖ್ಯಮಂತ್ರಿ. ರಾಜಭವನದ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲ ವ್ಯವಸ್ಥೆ ಮಾಡಿರುತ್ತದೆ ಎಂಬುದು ಇವರಿಗೆ ತಿಳಿಯದೆ?” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

“ಪ್ರಮಾಣವನ್ನೇ ಸ್ವೀಕರಿಸದ ನಿಯೋಜಿತ ಮುಖ್ಯಮಂತ್ರಿ ಯಾವುದಾದರೂ ಆದೇಶ ನೀಡಲು ಸಾಧ್ಯವೇ? ಇಷ್ಟಕ್ಕೂ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭಕ್ಕೂ, ಪಕ್ಷದ ಕಾರ್ಯಕ್ರಮಕ್ಕೂ ಹೋಲಿಕೆಯೇ? ಇಷ್ಟು ಸಾಮಾನ್ಯ ತಿಳಿವಳಿಕೆ ಸ್ವತಃ ಮುಖ್ಯಮಂತ್ರಿ ಹಾಗೂ ಸಂಸದೀಯ ಸಚಿವರಿಗೆ ಇಲ್ಲ ಎಂದರೆ ಏನು ಹೇಳುವುದು? ಇಂಡಿಯಾ ಒಕ್ಕೂಟದ ಸಭೆಗೆ ಬಂದ ಹೊರರಾಜ್ಯಗಳ ನಾಯಕರಿಗೆ ಐಎಎಸ್ ಅಧಿಕಾರಿಗಳನ್ನು ಚಾಕರಿಗೆ ಬಿಟ್ಟಿದ್ದು ತಪ್ಪು ಎಂಬುದು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಗಿಳಿಪಾಠ ಒಪ್ಪಿಸುವ ಸ್ವಯಂಘೋಷಿತ ಸಂವಿಧಾನ ತಜ್ಞರಿಗೆ ಶೋಭೆಯೇ?” ಎಂದು ಟೀಕಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಟ್ ಕಾಯಿನ್ ಹಗರಣ​ | ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ

ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಇನ್ಸ್‌ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು...

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ,...

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...