ಉಡುಪಿ | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಗಳಿಗೆ 5 ವರ್ಷ ಜೈಲು

Date:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮದ ಶಾಲೆಗೆ ತೆರಳುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

- Advertisement -

ಶಾಲೆಗೆ ರಿಕ್ಷಾದಲ್ಲಿ ಕರೆದುಕೊಂಡು ಹೋಗಿ ಕರೆದುಕೊಂಡು ಬರುತ್ತಿದ್ದ ರಿಕ್ಷಾ ಚಾಲಕ ಶರತ್ ಶೆಟ್ಟಿ ಹಾಗೂ ಆತನ ಸ್ನೇಹಿತ ಪ್ರಶಾಂತ್ ನಾಯ್ಕ್ ಅವರು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಲಾಗಿತ್ತು. ಈ ಕುರಿತು ನೊಂದ ಬಾಲಕಿ ಶಾಲೆಯ ಅಧ್ಯಾಪಕರಿಗೆ ವಿಷಯ ತಿಳಿಸಿದ ಬಳಿಕ, ಅಧ್ಯಾಪಕರು ದಿನಾಂಕ 15-07-2025 ರಂದು ಅಮಾಸೆಬೈಲು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ದೂರು ದಾಖಲಿಸಿಕೊಂಡ ಅಮಾಸೆಬೈಲು ಪೊಲೀಸ್ ಠಾಣೆಯ ಪೋಲೀಸರು ಈ ಪ್ರಕರಣದ ತನಿಖೆಯನ್ನು ಕುಂದಾಪುರ ಉಪವಿಭಾಗದ ಡಿವೈ.ಎಸ್.ಪಿ ಹೆಚ್.ಡಿ. ಕುಲಕರ್ಣಿ ಅವರು ನಡೆಸಿ, 15 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ಆರೋಪಿತರಾದ ಶರತ್ ಶೆಟ್ಟಿ ಹಾಗೂ ಪ್ರಶಾಂತ್ ನಾಯ್ಕ್ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಉಡುಪಿ ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (POCSO ನ್ಯಾಯಾಲಯ)ಕ್ಕೆ ಸಲ್ಲಿಸಿದ್ದರು.

ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿ, ಆರೋಪಿತರಿಗೆ ತಲಾ 5 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ನ್ಯಾಯಾಲಯದಲ್ಲಿ ಸರಕಾರಿ ಅಭಿಯೋಜಕರಾದ ಶ್ರೀ ಪ್ರಕಾಶ್ ಚಂದ್ರ ಶೆಟ್ಟಿ, ಶ್ರೀ ಜಯರಾಮ ಶೆಟ್ಟಿ ಹಾಗೂ ಶ್ರೀ ವೈ.ಟಿ. ರಾಘವೇಂದ್ರ ಅವರು ನೊಂದ ಬಾಲಕಿಯ ಪರವಾಗಿ ವಾದ ಮಂಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪದವೀಧರರ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಣಕ್ಕೆ ಇಳಿದಿದ್ದೇನೆ: ಮೋಹನ ಲಿಂಬಿಕಾಯಿ

ನಾಲ್ಕು ದಶಕಗಳಿಂದ ವಿವಿಧ ಸಂಘಟನೆಗಳ ಮೂಲಕ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿದ್ದೇನೆ,...

ಗದಗ | ಅಂಚೆ ಸೇವೆಗಳು ಮನೆ ಬಾಗಿಲಿಗೆ: ಅಂಚೆ ಅಧೀಕ್ಷಕ ಎಸ್. ಎಸ್. ಶಿರಹಟ್ಟಿ

ಪತ್ರ ವ್ಯವಹಾರ ಸೇರಿದಂತೆ ಅಂಚೆ ಇಲಾಖೆಯ ವಿವಿಧ ಸೇವೆಗಳನ್ನು ಗ್ರಾಹಕರು ತಮ್ಮ...

ಧಾರವಾಡ | ಕಾವ್ಯದ ಮೌಲಿಕ ಸಂಗತಿಗಳು ಸಾಮಾಜಿಕ, ರಾಜಕೀಯ ಮುಖಾಮುಖಿಗೊಳಿಸಿದ ಕವಿ ಪಂಪ: ಡಾ. ವೈ.ಎಂ. ಭಜಂತ್ರಿ

ಪಂಪ ಭಾರತ ಇಡೀ ಕಾವ್ಯವನ್ನು ಸಂಕ್ಷಿಪ್ತವಾಗಿ ಪರಿಚಯಿಸಿ, ಈ ಕಾವ್ಯದ ಬಹು...