ಕುಮಟಾ | ಕೊಂಕಣ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ₹7 ಕೋಟಿ ಅನುದಾನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Date:

ಕುಮಟಾ: ಕೊಂಕಣ ರೈಲ್ವೆ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ಈಗಾಗಲೇ 7 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗಿವೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

- Advertisement -

ಕುಮಟಾ ರೈಲ್ವೆ ನಿಲ್ದಾಣದಲ್ಲಿ ಸುಮಾರು 2.40 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಎರಡನೇ ಪ್ಲಾಟ್‌ಫಾರ್ಮ್ ಕಾಮಗಾರಿಯನ್ನು ಶಾಸಕ ದಿನಕರ ಶೆಟ್ಟಿ ಅವರೊಂದಿಗೆ ವೀಕ್ಷಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕೊಂಕಣ ರೈಲ್ವೆ ಬಳಕೆದಾರರ ಸಮಿತಿಯ ಸಭೆಯಲ್ಲಿ ನಡೆದ ಸುದೀರ್ಘ ಚರ್ಚೆ ಹಾಗೂ ರೈಲ್ವೆ ಸಚಿವರ ಗಮನ ಸೆಳೆದ ಪರಿಣಾಮವಾಗಿ ಈ ಅನುದಾನ ಬಿಡುಗಡೆಯಾಗಿದೆ ಎಂದು ಸಂಸದರು ವಿವರಿಸಿದರು. ಕುಮಟಾದಲ್ಲಿ ನಿರ್ಮಾಣವಾಗುತ್ತಿರುವ ನೂತನ ಪ್ಲಾಟ್‌ಫಾರ್ಮ್ 620 ಮೀಟರ್ ಉದ್ದ, 6.5 ಮೀಟರ್ ಅಗಲ ಹಾಗೂ 85 ಸೆಂಟಿಮೀಟರ್ ಎತ್ತರವನ್ನು ಹೊಂದಿರಲಿದ್ದು, ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಲಿದೆ.

1000403908

ಇದೇ ವೇಳೆ ರೈಲ್ವೆ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗಾಗಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಧೋರಣೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಕಾಗೇರಿ ಅವರು, ನೆರೆರಾಜ್ಯಗಳಾದ ಗೋವಾ ಮತ್ತು ಮಹಾರಾಷ್ಟ್ರ ಸರ್ಕಾರಗಳು ಕೊಂಕಣ ರೈಲ್ವೆ ಅಭಿವೃದ್ಧಿಗೆ ನೀಡುತ್ತಿರುವ ಸಹಕಾರಕ್ಕೆ ಹೋಲಿಸಿದರೆ ಕರ್ನಾಟಕ ಸರ್ಕಾರದ ಕೊಡುಗೆ ಅತ್ಯಂತ ಕಡಿಮೆ ಎಂದು ಟೀಕಿಸಿದರು.

ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬಂದರೂ, ಅವುಗಳ ಡಾಂಬರೀಕರಣಕ್ಕೂ ಸರ್ಕಾರ ಮುಂದಾಗುತ್ತಿಲ್ಲ ಎಂದು ಅವರು ದೂರಿದರು. ಜಿಲ್ಲೆಯ ಇತರ ನಿಲ್ದಾಣಗಳ ಅಭಿವೃದ್ಧಿಯ ಕುರಿತು ಮಾಹಿತಿ ನೀಡಿದ ಸಂಸದರು, ಗೋಕರ್ಣ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಹಾಗೂ ಮೇಲ್ಸೇತುವೆ (Over Foot Bridge), ಭಟ್ಕಳದಲ್ಲಿ ಹೆಚ್ಚುವರಿ ಪ್ಲಾಟ್‌ಫಾರ್ಮ್ ಹಾಗೂ ಮುರ್ಡೇಶ್ವರ ನಿಲ್ದಾಣದಲ್ಲಿ ಕುಡಿಯುವ ನೀರು ಮತ್ತು ಶೌಚಾಲಯ ಕಾಮಗಾರಿಗಳು ನಡೆಯಲಿವೆ ಎಂದರು.

ಈ ಸುದ್ದಿ ಓದಿದ್ದೀರಾ ? ಮುಂಡಗೋಡ-ಹಳಿಯಾಳದ ಮದ್ಯ-ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್ ದಾಳಿ; ಪಾಳಾ ಭಾಗದ ಮಟ್ಕಾ ದಂಧೆಗೆ ಬೀಳುತ್ತಾ ಬ್ರೇಕ್?

ಕಾರವಾರದಲ್ಲಿ ಈಗಾಗಲೇ ಎಸಿ ವಿಶ್ರಾಂತಿ ಗೃಹವನ್ನು ಲೋಕಾರ್ಪಣೆ ಮಾಡಲಾಗಿದ್ದು, ಮುಂದಿನ ಒಂದೆರಡು ವರ್ಷಗಳಲ್ಲಿ ಜಿಲ್ಲೆಯ ಕೊಂಕಣ ರೈಲ್ವೆ ನಿಲ್ದಾಣಗಳ ಚಿತ್ರಣವೇ ಸಂಪೂರ್ಣವಾಗಿ ಬದಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪರಿಶೀಲನೆಯ ಸಂದರ್ಭದಲ್ಲಿ ಕೊಂಕಣ ರೈಲ್ವೆ ಪ್ರಾದೇಶಿಕ ವ್ಯವಸ್ಥಾಪಕಿ ಆಶಾ ಶೆಟ್ಟಿ ಹಾಗೂ ಇಂಜಿನಿಯರ್ ವಿಜಯಕುಮಾರ್ ಅವರು ಕಾಮಗಾರಿಯ ತಾಂತ್ರಿಕ ವಿವರಗಳನ್ನು ಸಂಸದರಿಗೆ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ದಿನಕರ ಶೆಟ್ಟಿ, ಬಿಜೆಪಿ ಪ್ರಮುಖರು ಹಾಗೂ ರೈಲ್ವೆ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...