ಕುಮಟಾ ಪಟ್ಟಣದ ಎಪಿಎಂಸಿ (APMC) ರಾಷ್ಟ್ರೀಯ ಹೆದ್ದಾರಿ ಬದಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳನೀರು ಮಾರಾಟಗಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.
ಮೃತರನ್ನು ಕುಮಟಾದ ಬಯಲುಗದ್ದೆ ಮೂಲದ 55 ವರ್ಷದ ಉಮೇಶ್ ನಾರಾಯಣ್ ಹಲಮನಕರ್ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹತ್ತಿರದ ಅಂಗಡಿಗೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಈ ಸುದ್ದಿ ಓದಿದ್ದೀರಾ? ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು
ಚಾಲಕನಿಲ್ಲದೆ ಏಕಾಏಕಿ ಮುಂದಕ್ಕೆ ಚಲಿಸಿದ ಲಾರಿ, ರಸ್ತೆ ಪಕ್ಕದಲ್ಲೇ ಏಳನೀರು ವ್ಯಾಪಾರ ಮಾಡುತ್ತಿದ್ದ ಉಮೇಶ್ ಅವರ ಮೇಲೆ ಹರಿದಿದೆ. ಈ ದುರ್ಘಟನೆಯಲ್ಲಿ ಉಮೇಶ್ ನಾರಾಯಣ್ ಹಲಮನಕರ್ ಅವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಇವರ ಜತೆಗೆ ಪಕ್ಕದಲ್ಲೇ ಹಣ್ಣು ಮಾರಾಟ ಮಾಡುತ್ತಿದ್ದ ಮತ್ತೊಬ್ಬ ವ್ಯಾಪಾರಿಗೂ ಲಾರಿ ತಗುಲಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
This video cannot be played in your browser. Open the video directly
ಘಟನೆಯ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಕುಮಟಾ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.





