ಕುಮಟಾ | ಸಿನಿಮೀಯ ರೀತಿ ದರೋಡೆ ಯತ್ನ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Date:

ಕುಮಟಾ ಮೂಲದ ಕುಟುಂಬವೊಂದು ಶಿರಡಿ–ಅಯೋಧ್ಯೆ ತೀರ್ಥಯಾತ್ರೆಯೆ ಮುಗಿಸಿ ವಾಪಸ್ಸು ಬರುವಾಗ ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಅವರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಸಿನಿಮೀಯ ಶೈಲಿಯಲ್ಲಿ ದರೋಡೆ ಯತ್ನ ನಡೆದಿದೆ. ಚಾಲಕನ ಸಮಯಪ್ರಜ್ಞೆ ಮತ್ತು ಧೈರ್ಯದಿಂದ ದೊಡ್ಡ ಅನಾಹುತ ಆಗುವುದು ತಪ್ಪಿದೆ.

- Advertisement -

ಮಾಹಿತಿಯಂತೆ, ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕತಗಾಲ–ಮಾಸ್ತಿಹಳ್ಳ ಮೂಲದ ಕುಟುಂಬವೊಂದು ಸ್ಥಳೀಯ ಗಜಾನನ ಟ್ರಾವೆಲ್ಸ್‌ನ ಟಿಟಿ ವಾಹನದಲ್ಲಿ ಶಿರಡಿ ಹಾಗೂ ಅಯೋಧ್ಯೆ ಪ್ರವಾಸ ಮುಗಿಸಿ ಶುಕ್ರವಾರ ರಾತ್ರಿ ಕುಮಟಾಕ್ಕೆ ಹಿಂತಿರುಗುತ್ತಿತ್ತು. ಈ ವೇಳೆ, ಸೊಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಟಿಟಿ ವಾಹನವನ್ನು ಹಿಂಬಾಲಿಸಿ ದರೋಡೆ ಯತ್ನಕ್ಕೆ ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಚಲಿಸುತ್ತಿದ್ದ ವಾಹನದ ಹಿಂಭಾಗದ ಬಾಗಿಲಿಗೆ ಜಿಗಿದು ಒಳನುಗ್ಗಿದ ಕಳ್ಳರು ಹಿಂಬದಿಯಲ್ಲಿದ್ದ ಬ್ಯಾಗ್‌ಗಳನ್ನು ಹೊರಗೆಸೆದರು. ಏಕಾಏಕಿ ನಡೆದ ಈ ಘಟನೆಯಿಂದ ವಾಹನದಲ್ಲಿದ್ದ ಪ್ರಯಾಣಿಕರು ಭೀತಿಗೊಳಗಾದರು. ಆದರೆ ಚಾಲಕ ಗಣಪತಿ ನಾಯ್ಕ್ ಅವರ ಸಮಯಪ್ರಜ್ಞೆ ಪರಿಸ್ಥಿತಿ ಕೈಮೀರಿ ಹೋಗುವುದನ್ನು ತಪ್ಪಿಸಿತು. ಅವರು ತಕ್ಷಣವೇ ವಾಹನ ನಿಲ್ಲಿಸಿ, ಕಳ್ಳರ ಎದುರಿಸಲು ಸಜ್ಜಾದರು.

image 16 3

ವಾಹನದಲ್ಲಿ ಅಡುಗೆಗೆ ಇಟ್ಟಿದ್ದ ಆಯುಧಗಳನ್ನು ಕೈಗೆತ್ತಿಕೊಂಡ ಅವರು ಕಳ್ಳರನ್ನು ಎದುರಿಸಲು ಮುಂದಾದರು. ಚಾಲಕನ ಧೈರ್ಯವನ್ನು ಕಂಡು ಬೆಚ್ಚಿಬಿದ್ದ ದರೋಡೆಕೋರರು ಅಲ್ಲಿಂದ ಪರಾರಿಯಾದರು. ಅದೃಷ್ಟವಶಾತ್, ಕಳ್ಳರು ದೋಚಿದ ಬ್ಯಾಗ್‌ಗಳಲ್ಲಿ ಬಟ್ಟೆಗಳಷ್ಟೇ ಇದ್ದು, ಯಾವುದೇ ನಗದು ಅಥವಾ ಚಿನ್ನಾಭರಣ ಇರಲಿಲ್ಲ. ಪ್ರಾಣಾಪಾಯದಿಂದ ಪಾರಾದ ಕುಟುಂಬವು ದೂರು ನೀಡದೆ ನೇರವಾಗಿ ಕುಮಟಾಕ್ಕೆ ಪ್ರಯಾಣ ಮುಂದುವರಿಸಿತು.

ಪ್ರವಾಸಿಗರಿಗೆ ಎಚ್ಚರಿಕೆ: ಈ ಹೆದ್ದಾರಿಯಲ್ಲಿ ಇಂತಹ ದರೋಡೆ ಯತ್ನಗಳು ಹೊಸದೇನಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ಇದರ ಹಿಂದೆ ಮೈಸೂರು ಮತ್ತು ಮಂಗಳೂರು ಭಾಗಗಳಿಂದ ಬಂದ ಪ್ರವಾಸಿಗರೂ ಇದೇ ರೀತಿಯ ದರೋಡೆಗೆ ಬಲಿಯಾಗಿದ್ದಾರೆ. ರಾತ್ರಿ ವೇಳೆ ಸಂಚರಿಸುವ ಪ್ರವಾಸಿ ವಾಹನಗಳೇ ಈ ಗ್ಯಾಂಗ್‌ಗಳ ಗುರಿಯಾಗಿದ್ದು, “ಅಪಘಾತವಾದಂತೆ ನಟಿಸಿ ವಾಹನ ನಿಲ್ಲಿಸಿ ದರೋಡೆ ಮಾಡುವುದು” ಇವರ ಸಂಚು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಕುಮಟಾ ಕಂದಾಯ ನಿರೀಕ್ಷಕ ಬೆಳಗಾವಿಯಲ್ಲಿ ಪತ್ತೆ

ಸುರಕ್ಷತಾ ಸಲಹೆಗಳು: ಸಾಧ್ಯವಾದಷ್ಟು ರಾತ್ರಿ ವೇಳೆ ದೂರ ಪ್ರಯಾಣವನ್ನು ತಪ್ಪಿಸಿ. ನಿರ್ಜನ ಪ್ರದೇಶಗಳು ಅಥವಾ ಅಪರಿಚಿತ ಸ್ಥಳಗಳಲ್ಲಿ ವಾಹನ ನಿಲ್ಲಿಸಬೇಡಿ. ಅಪಘಾತದ ನೆಪದಲ್ಲಿ ವಾಹನ ತಡೆಯಲು ಪ್ರಯತ್ನಿಸಿದರೆ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ. ಪ್ರಯಾಣದ ಸಮಯದಲ್ಲಿ ವಾಹನದ ಬಾಗಿಲುಗಳನ್ನು ಲಾಕ್ ಮಾಡಿ ಇರಿಸಿ. ಯಾರಾದರೂ ಅನುಮಾನಾಸ್ಪದವಾಗಿ ಹಿಂಬಾಲಿಸುತ್ತಿದ್ದರೆ, ವೇಗ ಹೆಚ್ಚಿಸಿ ಜನನಿಬಿಡ ಪ್ರದೇಶದತ್ತ ಚಲಿಸಿ.

ಮಹಾರಾಷ್ಟ್ರದ ಸೊಲ್ಲಾಪುರ ಭಾಗದಲ್ಲಿ ರಾತ್ರಿ ವೇಳೆಯಲ್ಲಿ ಪ್ರಯಾಣಿಸುವವರು ವಿಶೇಷ ಎಚ್ಚರಿಕೆ ವಹಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ. ಚಾಲಕನ ಧೈರ್ಯದಿಂದ ತಪ್ಪಿದ ಈ ಘಟನೆ ಪ್ರವಾಸಿಗರಿಗೆ ವಾಹನ ಚಾಲಕರಿಗೆ ಎಚ್ಚರಿಕೆಯ ಗಂಟೆ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...