ಕುಮಟಾ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ

Date:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿನ ಲೋಪದೋಷಗಳನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕುಮಟಾದಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

- Advertisement -

ಕುಮಟಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭುವನ್ ಎಸ್. ಭಾಗ್ವತ್ ನೇತೃತ್ವದಲ್ಲಿ ‘ಮತ ಉಳಿಸಿ, ದೇಶ ಉಳಿಸಿ’ ಘೋಷಣೆಯೊಂದಿಗೆ ಮಾಸ್ತಿಕಟ್ಟೆ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಸ್ಕೃತಿ, ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ,...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ...

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ ಮತ್ತು ಘನತೆಯನ್ನೂ ಅಷ್ಟೇ ಗಂಭೀರವಾಗಿ ಪರಿಗಣಿಸುತ್ತಿದೆಯೇ? ಬಿಲ್ಕಿಸ್‌ ಬಾನೋ ಪ್ರಕರಣದಲ್ಲಿ ಈ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ನ್ಯಾಯದ ಮುಂದೆ...

ಈ ಸುದ್ದಿ ಓದಿದ್ದೀರಾ? ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಈ ಸಂದರ್ಭದಲ್ಲಿ ಮಾತನಾಡಿದ ಭುವನ್ ಭಾಗ್ವತ್, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಕೊರತೆಯಿದ್ದು, ನಿರ್ದಿಷ್ಟ ಸಮುದಾಯಗಳ ಮತದಾನದ ಹಕ್ಕಿಗೆ ಧಕ್ಕೆಯಾಗುವ ಆತಂಕವಿದೆ ಎಂದು ಆರೋಪಿಸಿದರು. ಪ್ರಸ್ತುತ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಬೇಕು. ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಶಂಕರ್ ಅಡಿಗುಂಡಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳಾದ ನಾಗೇಶ್ ನಾಯ್ಕ, ವಿ.ಎಲ್. ನಾಯ್ಕ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾರತಿ ಪಟಗಾರ, ನಾಗರಾಜ್ ಹಿತ್ತಲಮಕ್ಕಿ, ಮಧುಸೂಧನ್ ಶೇಟ್, ಗಜು ನಾಯ್ಕ ಆಳ್ವೆಕೋಡಿ, ಧೀರು ಶಾನಭಾಗ್, ನಾಗವೇಣಿ ಮುಕ್ರಿ, ಫ್ರಾಂತಿ ಫರ್ನಾಂಡಿಸ್, ಶಾಂತರಾಮ ನಾಯ್ಕ, ಕೃಷ್ಣ ಗೌಡ, ರಾಘವೇಂದ್ರ ಪಟಗಾರ,

ಕೃಷ್ಣಾನಂದ ವೆರ್ಣೆಕರ್, ಅರುಣ್ ಗೌಡ, ಹುಸೇನ್ ಸಾಬ್, ಜಗದೀಶ್ ಹರಿಕಂತ್ರ, ವೆಂಕಟೇಶ ಪಟಗಾರ, ಪುರಸಭಾ ಸದಸ್ಯ ಎಂ.ಟಿ. ನಾಯ್ಕ, ನಾಗರಾಜ್ ನಾಯ್ಕ, ವಿನಯಾ ಜಾರ್ಜ್, ಇಸಾಕ್, ಯೋಗಾನಂದ ಗಾಂಧಿ, ದಾಕ್ಷಾಯಿಣಿ, ಯುವ ಕಾಂಗ್ರೆಸ್ ಅಧ್ಯಕ್ಷ ವೈಭವ್ ನಾಯ್ಕ, ಪ್ಲೇವಿಯನ್ ಫರ್ನಾಂಡಿಸ್, ಅನಂತು ರಾಮಕ್ಷತ್ರಿಯ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂಲಸೌಕರ್ಯ ಕಲ್ಪಿಸಲು ವಿಫಲ: ಮಹಾನಗರ ಪಾಲಿಕೆ ವಿರುದ್ಧ ನ.25ರಂದು ಪಾದಯಾತ್ರೆ

ನಗರದ ವಾರ್ಡ 28 ಆಶ್ರಯ ಕಾಲೋನಿ ನಿವಾಸಿಗಳಿಗೆ ಕನಿಷ್ಟ ಮೂಲಭೂತ ಸೌಕರ್ಯ...

ಚಾಮರಾಜನಗರ । ಒಳ ಮೀಸಲಾತಿಯಿಂದ 101 ಜಾತಿಗಳಿಗೂ ಸಮಾನ ಅವಕಾಶ : ಸಚಿವ ಪಿ.ಎಂ. ನರೇಂದ್ರಸ್ವಾಮಿ

ಒಳ ಮೀಸಲಾತಿ ಅನುಷ್ಠಾನದಿಂದ ಪರಿಶಿಷ್ಟ ಜಾತಿಯ 101 ಜಾತಿಗಳಿಗೆ ಯಾವುದೇ ರೀತಿ...

ಚಿಕ್ಕಮಗಳೂರು | ಕಾಡಾನೆ ದಾಳಿ ರೈತ ಸಾವು: ಸಾರ್ವಜನಿಕರು ಸರ್ಕಾರ ವಿರುದ್ಧ ಆಕ್ರೋಶ 

ನರಸಿಂಹರಾಜಪುರ ತಾಲೂಕಿನ ಹೆನ್ನಂಗಿ ಗ್ರಾಮದ ರೈತನನ್ನು ಕಾಡಾನೆ ಸಾಯಿಸಿರುವ ಘಟನೆ ಕುರಿತು...

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೆರವಂಡ ಉಮೇಶ್ ನೇಮಕ

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಕೊಡಗಿನ ಹಿರಿಯ ಕಲಾವಿದ,...