ಕುಮಟಾ | ಗ್ರಾಮ ಪಂಚಾಯತ್‌ಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೇಂದ್ರವಾಗಲಿ: ಸಚಿವ ಮಂಕಾಳ ವೈದ್ಯ

Date:

ಕುಮಟಾ: ಗ್ರಾಮ ಪಂಚಾಯತ್‌ಗಳು ಕೇವಲ ಸರ್ಕಾರಿ ಕಚೇರಿಗಳಾಗದೆ, ಸ್ಥಳೀಯ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ಒದಗಿಸುವ ಶಕ್ತಿ ಕೇಂದ್ರಗಳಾಗಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಾಂಕಾಳ ಎಸ್. ವೈದ್ಯ ಅವರು ತಿಳಿಸಿದರು.

- Advertisement -

ಶುಕ್ರವಾರ ಹಿರೇಗುತ್ತಿ ಗ್ರಾಮ ಪಂಚಾಯತ್‌ನ ನೂತನ ಸುಸಜ್ಜಿತ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿ ಅವರು. ಗ್ರಾಮೀಣ ಭಾಗದ ಜನರ ಸಮಸ್ಯೆಗಳು ಆಯಾ ಗ್ರಾಮಗಳಲ್ಲಿಯೇ ಇತ್ಯರ್ಥವಾಗಬೇಕು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಎನ್ನುವ ಉದಾತ್ತ ಉದ್ದೇಶದಿಂದ ಸರ್ಕಾರವು ಇಂದು ಪಂಚಾಯತ್ ಮಟ್ಟದಲ್ಲಿಯೇ ಹಲವಾರು ನಾಗರಿಕ ಸೇವೆಗಳನ್ನು ಒದಗಿಸುತ್ತಿದೆ. ತಮ್ಮ ಅಹವಾಲುಗಳನ್ನು ಹೊತ್ತು ಪಂಚಾಯತ್‌ಗೆ ಬರುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ತಾಳ್ಮೆಯಿಂದ ವರ್ತಿಸಬೇಕು.

ಅವರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಮೂಲಕ ಜನಸಾಮಾನ್ಯರ ವಿಶ್ವಾಸ ಗಳಿಸಬೇಕು ಎಂದು ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಕಿವಿಮಾತು ಹೇಳಿದರು.

1000505767

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಸಕ ದಿನಕರ ಶೆಟ್ಟಿ ಅವರು ಮಾತನಾಡಿ, ಹಿರೇಗುತ್ತಿ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಸೇರಿದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಸತೀಶ್ ಸೈಲ್‌ಗೆ ಮತ್ತೆ ವೈದ್ಯಕೀಯ ಜಾಮೀನು ಮಂಜೂರು: ಲಿವರ್ ಕಸಿ ಶಸ್ತ್ರಚಿಕಿತ್ಸೆಗೆ ಹೈಕೋರ್ಟ್ ಅನುಮತಿ

ಈ ಭಾಗದ ಕಾಲೇಜು ಕಟ್ಟಡಕ್ಕೂ ಹೆಚ್ಚಿನ ಅನುದಾನ ಒದಗಿಸಲಾಗಿದ್ದು, ಪಂಚಾಯತ್ ಕಟ್ಟಡದ ಮುಂದಿನ ಅಗತ್ಯಗಳಿಗೆ ತಕ್ಕಂತೆ ಹೆಚ್ಚುವರಿ ಅನುದಾನ ನೀಡುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಾಂತಾ ನಾರಾಯಣ ನಾಯ್ಕ, ಉಪಾಧ್ಯಕ್ಷೆ ವೆಂಕಮ್ಮ ಹರಿಕಂತ್ರ, ತಹಸೀಲ್ದಾರ್ ಕೃಷ್ಣ ಕಾಮಕರ್ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ರಾಜೇಂದ್ರ ಭಟ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೇಖಾ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...