ಕುಮಟಾ | ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿದ್ದರೆ ಪೆಟ್ರೋಲ್ ಬಂಕ್‌ನಲ್ಲಿ ಇಂಧನ ಸಿಗೋದಿಲ್ಲ

Date:

ಕುಮಟಾ: ತಾಲೂಕಿನ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಹಾಗೂ ಸಂಚಾರಿ ನಿಯಮಗಳ ಉಲ್ಲಂಘನೆಯನ್ನು ನಿಯಂತ್ರಿಸಲು ಉಪವಿಭಾಗಾಧಿಕಾರಿ ಪಿ. ಶ್ರವಣ್ ಕುಮಾರ್ ಅವರು ಹೊಸ ಪ್ರತಿಬಂಧಕಾಜ್ಞೆಯನ್ನು ಹೊರಡಿಸಿದ್ದು, ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಈ ನಿಯಮವನ್ನು ಜಾರಿಗೆ ತರಲು ಮುಂದಾಗಿದ್ದೆವೆ ಎಂದು ಹೇಳಿದರು. ಸಂಚಾರಿ ನಿಯಮಗಳನ್ನು ಪಾಲಿಸದ ಪರಿಣಾಮವಾಗಿ ಸಂಭವಿಸುತ್ತಿರುವ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲ ಸರ್ಕಾರಿ ಘಟಕಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ.

- Advertisement -

ಯಾವುದೇ ರೀತಿಯ ಸಂಚಾರಿ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕ ವಾಹನದ ನಂಬರ್ ಸೇರಿದಂತೆ GPS ಸಮೇತ ಫೋಟೋವನ್ನು ತೆಗೆದು ಪೊಲೀಸ್ ಇಲಾಖೆಯ ವಾಟ್ಸಪ್ ಸಂಖ್ಯೆಗಳಿಗೆ ಕಳುಹಿಸಬಹುದು. ಇದರ ಮೂಲಕ ಘಟನೆಯ ಸ್ಥಳ ಮತ್ತು ಸಮಯವನ್ನು ನಿಖರವಾಗಿ ಗುರುತಿಸಲು ಇದು ಸಹಕಾರಿಯಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಕುರಿತು 9480805234, 9480805272, 8277988244 ಹಾಗೂ 8277988236 ಸಂಖ್ಯೆಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಲು ವಿನಂತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕುಮಟಾ ಪಟ್ಟಣ ವ್ಯಾಪ್ತಿಯ ಹಲವು ಪ್ರಮುಖ ವೃತ್ತಗಳು, ಹೆದ್ದಾರಿಯ ಕೂಡು ರಸ್ತೆಗಳು ಹಾಗೂ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಿಸುವುದು ಸಾಮಾನ್ಯವಾಗಿ ಕಂಡುಬರುತ್ತಿದ್ದು, ಹೆಲ್ಮೆಟ್ ಹಾಗೂ ಸೀಟ್‌ಬೆಲ್ಟ್ ಉಪಯೋಗದ ಕುರಿತು ಸಾರ್ವಜನಿಕರಲ್ಲಿ ಇನ್ನೂ ಜಾಗೃತಿ ಮೂಡಿಸಬೇಕಿರುವುದು ಸ್ಪಷ್ಟವಾಗಿದೆ. ಅನಧಿಕೃತ ವಾಹನ ನಿಲುಗಡೆ, ರಸ್ತೆ ಬದಿ ವ್ಯಾಪಾರಿಗಳಿಂದ ಹೆದ್ದಾರಿಗಳ ಅತಿಕ್ರಮಣ, ಪೆಟ್ರೋಲ್ ಬಂಕ್‌ಗಳಲ್ಲಿ ನಿಯಮ ಪಾಲನೆ ಕೊರತೆ ಇವುಗಳು ಅಪಘಾತಗಳಿಗೆ ಕಾರಣವಾಗುತ್ತಿರುವುದಾಗಿ ಸಭೆಯಲ್ಲೂ ಚರ್ಚಿಸಲಾಯಿತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಐಆರ್‌ಬಿ ಪ್ರತಿನಿಧಿಗಳು, ಕುಮಟಾ ಪಟ್ಟಣ ಹಾಗೂ ತಾಲೂಕಿನ ಪೆಟ್ರೋಲ್ ಬಂಕ್ ಮಾಲೀಕರು ಸೇರಿದಂತೆ ಎಲ್ಲಾ ಇಲಾಖೆಗಳ ಸಭೆಯನ್ನು ನವೆಂಬರ್ 10ರಂದು ನಡೆಸಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಕುಮಟಾ | ಸರ್ಕಾರದ ನಿರ್ಲಕ್ಷ್ಯ ಮಧ್ಯೆ ರಸ್ತೆಗೆ ಶಾಸಕರ ನಿಧಿಯಿಂದ ಡಾಂಬರೀಕರಣ

ಈ ಸಭೆಯಲ್ಲಿ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಕ್ರಮಗಳನ್ನು ಜಾರಿಗೊಳಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಉಪವಿಭಾಗಾಧಿಕಾರಿಗಳು ಹೊರಡಿಸಿದ ಆದೇಶದ ಪ್ರಕಾರ, ಕುಮಟಾ ತಾಲೂಕಿನಲ್ಲಿ ಸವಾರರು ಹಾಗೂ ಹಿಂಬದಿ ಸವಾರರು ಐಎಸ್‌ಐ ಪ್ರಮಾಣಿತ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದ್ದು, ಕಾರು ಸವಾರರು ಸೀಟ್‌ಬೆಲ್ಟ್ ಧರಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ “NO HELMET/SEATBELT, NO FUEL” ಎಂಬ ನಿಯಮ ಕಡ್ಡಾಯವಾಗಿ ಜಾರಿಗೊಳಿಸಬೇಕು. ಹೆದ್ದಾರಿಯಲ್ಲಿ ಇರುವ ಎಲ್ಲಾ ಗೂಡಂಗಡಿಗಳು, ತಳ್ಳುಗಾಡಿಗಳು ಮತ್ತು ಬೀದಿ ವ್ಯಾಪಾರಿಗಳನ್ನು ಕೂಡಲೇ ತೆರವುಗೊಳಿಸುವಂತೆ ಸೂಚಿಸಲಾಗಿದೆ. ದ್ವಿಚಕ್ರ ವಾಹನಗಳನ್ನು ಬಾಡಿಗೆಗೆ ನೀಡುವವರು ಕಡ್ಡಾಯವಾಗಿ ಎರಡು ಹೆಲ್ಮೆಟ್‌ಗಳನ್ನು ಒದಗಿಸಲು ಬದ್ಧರಾಗಿರಬೇಕು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರು ವಾಹನ ಚಲಿಸಿದರೆ, ವಾಹನ ಮಾಲೀಕರು ಹಾಗೂ ಅವರು ವಿದ್ಯಾಬ್ಯಾಸ ಮಾಡುವ ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಜವಾಬ್ದಾರರಾಗಿರುತ್ತಾರೆ.

ಈ ಕುರಿತಾಗಿ ಆಕ್ಷೇಪಣೆ ಏನಾದರೂ ಇದ್ದರೆ 7 ದಿನಗಳೊಳಗೆ ಉಪವಿಭಾಗೀಯ ದಂಡಾಧಿಕಾರಿ, ಕುಮಟಾ ಇವರಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಬಹುದು. ನಿಗದಿತ ಅವಧಿಯಲ್ಲಿ ಯಾವುದೇ ಆಕ್ಷೇಪಣೆಗಳು ಸ್ವೀಕರಿಸಲ್ಪಡದಿದ್ದರೆ ಆದೇಶ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಉಪವಿಭಾಗಾಧಿಕಾರಿ ಪಿ. ಶ್ರವಣ್ ಕುಮಾರ್ ಅವರು ಸಾರ್ವಜನಿಕರ ಜೀವ ರಕ್ಷಣೆ ಮತ್ತು ರಸ್ತೆ ಸುರಕ್ಷತೆಯ ಹಿತದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...