ಕುಮಟಾ | ನಕಲಿ ಫೋನ್‌ಪೇ ಪಾವತಿ ಸಂದೇಶ ತೋರಿಸಿ ₹16,700 ಮೌಲ್ಯದ ಮೊಬೈಲ್ ವಂಚನೆ

Date:

ಕುಮಟಾದಲ್ಲಿ ಪೋನ್ ಪೇ ಮೂಲಕ ಆನ್‌ಲೈನ್‌ ಮಾಡಿದಂತೆ ನಕಲಿ ಮೆಸೇಜ್ ಹಾಗೂ ಸ್ಕ್ರೀನ್ ಶಾಟ್ ತೋರಿಸಿ ಮೊಬೈಲ್‌ ಫೋನ್‌ ಪಡೆದುಕೊಂಡು ವ್ಯಕ್ತಿಯೊಬ್ಬ ವಂಚಿಸಿರುವ ಘಟನೆ ನಡೆದಿದೆ.

- Advertisement -

ಕುಮಟಾ ಹೊಸ ಬಸ್‌ ನಿಲ್ದಾಣದ ಸಮೀಪದಲ್ಲಿರುವ ‘ಮಾತೋಶ್ರೀ ಏಜೆನ್ಸೀಸ್’ ಮೊಬೈಲ್‌ ಶೋರೂಮ್‌ಗೆ ಸೆಪ್ಟೆಂಬರ್‌ 10ರಂದು ಮಧ್ಯಾಹ್ನ ಸುಮಾರು 2.50ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಗ್ರಾಹಕನಂತೆ ಬಂದಿದ್ದಾನೆ. ಈ ವೇಳೆ ₹16,700 ಬೆಲೆಯ ರಿಯಲ್‌ಮಿ ಕಂಪನಿಯ C-100 X (ಡೀಪ್‌ ಬ್ಲೂ, 4GB+64GB) ಮೊಬೈಲ್‌ ಫೋನ್‌ ಖರೀದಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಮೊಬೈಲ್‌ ಖರೀದಿಯ ಹಣ ಪಾವತಿಸುವ ಸಂದರ್ಭದಲ್ಲಿ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿರುವಂತೆ ನಟಿಸಿದ ವ್ಯಕ್ತಿ, ₹16,700 ಪಾವತಿ ಯಶಸ್ವಿಯಾಗಿದೆ ಎಂಬ ನಕಲಿ ಫೋನ್‌ಪೇ ಸಂದೇಶವನ್ನು ಅಂಗಡಿ ಮಾಲೀಕರಿಗೆ ತೋರಿಸಿದ್ದಾನೆ. ಹಣ ಖಾತೆಗೆ ಜಮೆಯಾಗಿರುವುದನ್ನು ಪರಿಶೀಲಿಸುವ ಮೊದಲೇ ಮೊಬೈಲ್‌ ಪಡೆದುಕೊಂಡು ಸ್ಥಳದಿಂದ ತೆರಳಿದ್ದಾನೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಾರವಾರ | ಸರ್ಕಾರಿ ಪಿಯು ಕಾಲೇಜಿನಲ್ಲಿ ಸಿಇಟಿ, ನೀಟ್, ಜೆಇಇಗೆ ಉಚಿತ ತರಬೇತಿ

ನಂತರ ಹಣ ಖಾತೆಗೆ ಬಂದಿಲ್ಲ ಎಂಬುದು ತಿಳಿದುಬಂದಿದ್ದು, ತಾವು ವಂಚನೆಗೊಳಗಾಗಿರುವುದನ್ನು ಅರಿತ ಅಂಗಡಿ ಮಾಲೀಕ, ಕುಮಟಾ ತಾಲೂಕಿನ ಕೂಜಳ್ಳಿ ನಿವಾಸಿ ಧನಂಜಯ ಮಂಜುನಾಥ ನಾಯ್ಕ (27) ಅವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಕುಮಟಾ ಠಾಣೆಯಲ್ಲಿ BNS ಕಲಂ 319(2) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣಾ ಅಪರಾಧ ಕ್ರಮಾಂಕ 188/2026 ಎಂದು ನಮೂದಿಸಲಾಗಿದೆ. ಆರೋಪಿಯ ಪತ್ತೆಗಾಗಿ ಪೊಲೀಸರು ಅಂಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ.

ಆನ್‌ಲೈನ್‌ ಪಾವತಿಗೆ ಸಂಬಂಧಿಸಿದಂತೆ ಇಂತಹ ವಂಚನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಗ್ರಾಹಕರು ಹಣ ಪಾವತಿಸಿರುವ ಸ್ಕ್ರೀನ್‌ಶಾಟ್‌ ಅಥವಾ ಸಂದೇಶವನ್ನು ಮಾತ್ರ ನಂಬದೆ, ತಮ್ಮ ಬ್ಯಾಂಕ್‌ ಖಾತೆಗೆ ಹಣ ಜಮೆಯಾಗಿರುವುದನ್ನು ಖಚಿತಪಡಿಸಿಕೊಂಡ ಬಳಿಕವೇ ವಸ್ತುಗಳನ್ನು ನೀಡುವಂತೆ ವ್ಯಾಪಾರಿಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....

ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ...