ಕುಮಟಾ | ಖೋ-ಖೋದಲ್ಲಿ ಸತತ 5ನೇ ಬಾರಿ ವಿಭಾಗ ಮಟ್ಟಕ್ಕೆ ಆಯ್ಕೆ; 3 ಕಿ.ಮೀ. ನಡಿಗೆಯಲ್ಲಿ ವಿನುತಾ ರಾಜ್ಯ ಮಟ್ಟಕ್ಕೆ

Date:

ಕುಮಟಾ: ಭಟ್ಕಳದಲ್ಲಿ ನಡೆದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಕುಮಟಾ ತಾಲೂಕಿನ ಊರಕೇರಿಯ ಎನ್.ಎಸ್.ಎಸ್. ಸೊಸೈಟಿ (ರಿ.) ಶ್ರೀರಾಮನಾಥ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಕ್ರೀಡಾ ಸಾಧನೆ ಮಾಡಿದ್ದಾರೆ.

- Advertisement -

ಹುಡುಗಿಯರ ಖೋ-ಖೋ ತಂಡವು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಸತತ 5ನೇ ಬಾರಿಗೆ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಈ ಮೂಲಕ ತಂಡವು ತನ್ನ ಉತ್ತಮ ಪ್ರದರ್ಶನವನ್ನು ಮುಂದುವರಿಸಿದೆ. ಹುಡುಗರ ಖೋ-ಖೋ ವಿಭಾಗದಲ್ಲಿ ಸುನಿಲ್ ಅಣ್ಣಪ್ಪ ಗೌಡ, ಕೃಷ್ಣ ಟಿ. ಗೌಡ ಹಾಗೂ ಪವನ್ ರಾಮ ಗೌಡ ಅವರು ಉತ್ತಮ ಪ್ರದರ್ಶನ ನೀಡಿ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಆಯುಷ್ಮಾನ್ ಆರೋಗ್ಯ ಕೇಂದ್ರ ಸ್ಥಗಿತಗೊಳಿಸದಂತೆ ಸ್ಥಳೀಯರ ಆಗ್ರಹ

ಇದೇ ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿನಿ ವಿನುತಾ ಗೋಯ್ದು ಗೌಡ ಅವರು 3 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಯು ಶಾಲೆಗೆ ಕೀರ್ತಿ ತಂದಿದ್ದು, ಅವರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಎಸ್.ಜಿ. ಭಟ್ಟ, ಮುಖ್ಯಾಧ್ಯಾಪಕರಾದ ಶ್ರೀಮತಿ ಸುಜಾತ ಎಚ್. ನಾಯ್ಕ, ಶಿಕ್ಷಕ ಸಿಬ್ಬಂದಿ ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಅಭಿನಂದನೆ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಜಂಗಾ ಎಚ್. ಗೌಡ ಅವರನ್ನೂ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ಸಿಬ್ಬಂದಿ ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಶಾಹಿ ಗಾರ್ಮೆಂಟ್ಸ್ ವೇತನ ತಾರತಮ್ಯ ಸಲ್ಲದು; ಮೂಲಸೌಕರ್ಯ ಕಲ್ಪಿಸದಿದ್ದರೆ ಕಠಿಣ ಕ್ರಮ : ಡಿಸಿ ರವಿಕುಮಾರ್

ಕೋಲಾರದ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರ ವೇತನ ತಾರತಮ್ಯ...

ಕುಮಟಾ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿನ ಲೋಪದೋಷಗಳನ್ನು ಖಂಡಿಸಿ...

ಮಿಮ್ಸ್ ಜಾಗದ ಒತ್ತುವರಿ ತೆರವಿಗೆ ಕ್ರಮ: ನಿವಾಸಿಗಳಿಗೆ ಬದಲಿ ನಿವೇಶನ ನೀಡಲು ಸಚಿವರ ಸೂಚನೆ

ಮಂಡ್ಯ ನಗರದಲ್ಲಿನ ಮಿಮ್ಸ್ (ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಗೆ ಸೇರಿದ...