ಕುಮಟಾ | ಛತ್ರಕೂರ್ವೆ ರಸ್ತೆಯಲ್ಲಿ ಟೋಲ್ ಗೇಟ್ ಅಳವಡಿಕೆಗೆ ತೀವ್ರ ವಿರೋಧ; ಗ್ರಾಮ ಪಂಚಾಯತ್ ವಿರುದ್ಧ ಪ್ರತಿಭಟನೆ

Date:

ಕುಮಟಾ: ತಾಲೂಕಿನ ಐತಿಹಾಸಿಕ ಮಿರ್ಜಾನ ಕೋಟೆಯ ಸಮೀಪವಿರುವ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗೇಟ್ ಅಳವಡಿಸಿ ಟೋಲ್ ಸಂಗ್ರಹಿಸಲು ಮುಂದಾಗಿರುವ ಮಿರ್ಜಾನ ಗ್ರಾಮ ಪಂಚಾಯತ್ ಆಡಳಿತದ ಕ್ರಮ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ.

- Advertisement -

ಛತ್ರಕೂರ್ವೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆಯಲ್ಲಿ ಗೇಟ್ ನಿರ್ಮಾಣ ಮಾಡುತ್ತಿರುವುದನ್ನು ಖಂಡಿಸಿರುವ ಗ್ರಾಮಸ್ಥರು, ಈ ಕಾಮಗಾರಿಯನ್ನು ತಕ್ಷಣ ನಿಲ್ಲಿಸದಿದ್ದರೆ ಪಂಚಾಯತ್ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಕೂರುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಘಟನೆಯ ಹಿನ್ನೆಲೆ: ಮಿರ್ಜಾನ ಕೋಟೆಯ ಕೆಳಭಾಗದಲ್ಲಿರುವ ಛತ್ರಕೂರ್ವೆ ಗ್ರಾಮಕ್ಕೆ ಅನಾದಿಕಾಲದಿಂದಲೂ ಮಿರ್ಜಾನ ಮೂಲಕ ಕೋಟೆಯ ಮಾರ್ಗವಾಗಿ ಸಾಗುವ ರಸ್ತೆಯೇ ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ವಿಶೇಷವೆಂದರೆ ಈ ರಸ್ತೆಯು ಲೋಕೋಪಯೋಗಿ ಇಲಾಖೆಯ (PWD) ಕುಮಟಾ ಉಪವಿಭಾಗದ ವ್ಯಾಪ್ತಿಗೆ ಸೇರಿದ್ದು,

ಅದರ ನಿರ್ವಹಣೆಯಲ್ಲಿದೆ. ಆದರೆ, ಇತ್ತೀಚೆಗೆ ಮಿರ್ಜಾನ ಗ್ರಾಮ ಪಂಚಾಯತ್ ಆಡಳಿತ ಸಮಿತಿಯು ಪ್ರವಾಸಿ ವಾಹನಗಳಿಂದ ಪಾರ್ಕಿಂಗ್ ಶುಲ್ಕ ವಸೂಲಿ ಮಾಡುವ ಉದ್ದೇಶದಿಂದ ಈ ಸಾರ್ವಜನಿಕ ರಸ್ತೆಯಲ್ಲಿ ಟೋಲ್ ಮಾದರಿಯ ಗೇಟ್ ಅಳವಡಿಸಲು ಮುಂದಾಗಿದ್ದು ಈ ಕ್ರಮ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದೆ.

ಪಂಚಾಯತ್ ಆಡಳಿತವು ಮೇಲಾಧಿಕಾರಿಗಳ ಹೆಸರಿನಲ್ಲಿ ತಪ್ಪು ಮಾಹಿತಿ ನೀಡಿ, ಅನಧಿಕೃತವಾಗಿ ಈ ಗೇಟ್ ನಿರ್ಮಿಸುತ್ತಿದೆ ಎಂದು ಗ್ರಾಮಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಈ ಗೇಟ್ ನಿರ್ಮಾಣದಿಂದ ಕೇವಲ ಪ್ರವಾಸಿಗರಿಗೆ ಮಾತ್ರವಲ್ಲದೆ, ಛತ್ರಕೂರ್ವೆ ಗ್ರಾಮದ ನಿವಾಸಿಗಳಿಗೆ, ನಿತ್ಯ ಓಡಾಡುವ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ತುರ್ತು ಸೇವೆ ಒದಗಿಸುವ ಆಂಬ್ಯುಲೆನ್ಸ್‌ನಂತಹ ವಾಹನಗಳ ಮುಕ್ತ ಸಂಚಾರಕ್ಕೆ ದೊಡ್ಡ ಅಡ್ಡಿಯಾಗಲಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ಸೂಚಕ: ಸಚಿವ ಮಂಕಾಳ ವೈದ್ಯ

ಅಲ್ಲದೆ, ಕಿರಿದಾದ ಈ ರಸ್ತೆಯಲ್ಲಿ ಕೃತಕವಾಗಿ ವಾಹನ ದಟ್ಟಣೆ ಸೃಷ್ಟಿಸುವುದರಿಂದ ಅಪಘಾತಗಳು ಸಂಭವಿಸುವ ಭೀತಿಯೂ ಎದುರಾಗಿದೆ. ಪ್ರವಾಸಿಗರಿಗೆ ಶೌಚಾಲಯ, ಸ್ವಚ್ಛತೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ ಶುಲ್ಕ ಸಂಗ್ರಹಿಸುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಸಾರ್ವಜನಿಕ ರಸ್ತೆಗೆ ಗೇಟ್ ಹಾಕಿ ಗ್ರಾಮಸ್ಥರ ಸಂಚಾರಕ್ಕೆ ಅಡ್ಡಿಪಡಿಸುವುದು ಕಾನೂನುಬಾಹಿರ,” ಎಂದು ಸ್ಥಳೀಯರು ವಾದಿಸಿದ್ದಾರೆ.

ಪಿಡಿಓ ಅವರಿಗೆ ಮನವಿ: ಈ ವಿಚಾರವಾಗಿ ಛತ್ರಕೂರ್ವೆ ಗ್ರಾಮದ 50ಕ್ಕೂ ಹೆಚ್ಚು ಗ್ರಾಮಸ್ಥರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಮನವಿ ಸಲ್ಲಿಸಿ ಪ್ರತಿಭಟಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಮುಖಂಡ ವಿನಾಯಕ ಪಟಗಾರ ಅವರು, ಗೇಟ್ ಹಾಕುವುದರಿಂದ ಗ್ರಾಮದ ಜನಜೀವನ ಅಸ್ತವ್ಯಸ್ತವಾಗಲಿದ್ದು, ಕೂಡಲೇ ಕಾಮಗಾರಿ ನಿಲ್ಲಿಸಬೇಕೆಂದು ಒತ್ತಾಯಿಸಿದರು. ಇನ್ನೊಬ್ಬ ಮುಖಂಡ ಶಿವಾನಂದ ಮಾತನಾಡಿ, “ಒಂದೊಮ್ಮೆ ಪಂಚಾಯತ್ ತನ್ನ ಹಠಮಾರಿ ಧೋರಣೆ ಮುಂದುವರಿಸಿದರೆ, ಗ್ರಾಮಸ್ಥರೆಲ್ಲರೂ ಸೇರಿ ಪಂಚಾಯತ್ ಮುಂದೆ ಧರಣಿ ನಡೆಸುತ್ತೇವೆ,” ಎಂದು ಎಚ್ಚರಿಸಿದರು.

ಈ ಪ್ರತಿಭಟನೆಯ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ರವಿ, ಚೆನ್ನಪ್ಪ, ಲೋಕೇಶ, ಪುರಸಯ್ಯ, ಗಣೇಶ, ನವೀನ, ಓಮು, ಮಹೆಂದ್ರ ಶಾಂತಿ, ದಾಮೋದರ, ಲಕ್ಷಮಣ, ಗುರುನಾಥ, ರಾಮಚಂದ್ರ ವೆಂಕಟ್ರಮಣ ಹಾಗೂ ಪಂಚಾಯತ್ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದು ಆಡಳಿತದ ವಿರುದ್ಧ ಧ್ವನಿ ಎತ್ತಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...