ಕುಮಟಾ | ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Date:

ಕುಮಟಾ: ನಗರದ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

- Advertisement -

2018ರ ಅಕ್ಟೋಬರ್ 16ರಂದು ಆಸ್ತಿ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ವಿಶ್ವೇಶ್ವರ ಭಟ್ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಮೃತರ ದೂರದ ಸಂಬಂಧಿ ಮಂಜುನಾಥ ಈಶ್ವರ ಹೆಗಡೆ, ಆತನ ತಂಗಿಯ ಮಗ ಹರೀಶ್ ಹೆಗಡೆ ಹಾಗೂ ಸೊರಬ ಮೂಲದ ಧನಂಜಯ ನಾಯ್ಕ ಆರೋಪಿಗಳಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಮೂರೂರಿನಲ್ಲಿ ಜಮೀನು ಪೂಜೆ ನಡೆಸಬೇಕಿದೆ ಎಂದು ಹೇಳಿ ವಿಶ್ವೇಶ್ವರ ಭಟ್ ಅವರನ್ನು ಆರೋಪಿಗಳು ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದರು. ಬಳಿಕ ಕೂಜಳ್ಳಿಯಲ್ಲಿರುವ ಮಂಜುನಾಥ ಹೆಗಡೆ ಅವರ ತೋಟದಲ್ಲಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿತ್ತು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಕೊಲೆ ಬಳಿಕ ಮೃತದೇಹವನ್ನು ತೋಟದಲ್ಲೇ ಹೂತುಹಾಕಿ, ವಿಶ್ವೇಶ್ವರ ಭಟ್ ಬಳಸುತ್ತಿದ್ದ ಬೈಕ್ ಅನ್ನು ಬಾವಿಗೆ ಎಸೆದು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸಲು ಆರೋಪಿಗಳು ಪ್ರಯತ್ನಿಸಿದ್ದರು ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ತನಿಖಾ ವರದಿಯಲ್ಲಿ ತಿಳಿಸಿದ್ದರು.

ವಿಶ್ವೇಶ್ವರ ಭಟ್ ಅವರು ಕಾಣೆಯಾಗಿರುವ ಕುರಿತು ಅವರ ಪತ್ನಿ ಸರಸ್ವತಿ ಭಟ್ ಪೊಲೀಸರಿಗೆ ದೂರು ನೀಡಿದ ನಂತರ ತನಿಖೆ ಆರಂಭವಾಗಿತ್ತು. ಅಂದಿನ ಸಿಪಿಐ ಸಂತೋಷ್ ಶೆಟ್ಟಿ ಮತ್ತು ಪಿಎಸ್‌ಐ ಸಂಪತ್ ಕುಮಾರ್ ನೇತೃತ್ವದ ಪೊಲೀಸ್ ತಂಡ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿತ್ತು. ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.

ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯವು ಲಭ್ಯವಿದ್ದ ಸಾಕ್ಷ್ಯಗಳು ಹಾಗೂ ಎರಡೂ ಪಕ್ಷಗಳ ವಾದಗಳನ್ನು ಪರಿಶೀಲಿಸಿ ಮೂವರು ಆರೋಪಿಗಳನ್ನೂ ತಪ್ಪಿತಸ್ಥರೆಂದು ಘೋಷಿಸಿದೆ. ಬಳಿಕ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಎಪಿಪಿ ತನುಜಾ ಹೊಸಪಟ್ಟಣ ಅವರು ವಾದ ಮಂಡಿಸಿದ್ದರು.

ತೀರ್ಪಿಗೆ ಕುಟುಂಬದ ಸ್ವಾಗತ ನ್ಯಾಯಾಲಯದ ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ವಿಶ್ವೇಶ್ವರ ಭಟ್ ಅವರ ಪತ್ನಿ ಹಾಗೂ ಕುಟುಂಬಸ್ಥರು, ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂಬುದು ತಮ್ಮ ನಿರೀಕ್ಷೆಯಾಗಿತ್ತು ಎಂದು ತಿಳಿಸಿದ್ದಾರೆ. ಸುಮಾರು ಎಂಟು ವರ್ಷಗಳ ಬಳಿಕ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಹೊರಬಂದಿದ್ದು, ನ್ಯಾಯಾಲಯದ ತೀರ್ಪನ್ನು ಗೌರವಿಸುವುದಾಗಿ ಕುಟುಂಬಸ್ಥರು ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸಹಕರಿಸಿದವರು ಹಾಗೂ ಪ್ರಕರಣದ ಕುರಿತು ವರದಿ ಮಾಡಿದ ಮಾಧ್ಯಮಗಳಿಗೆ ಕುಟುಂಬದವರು ಕೃತಜ್ಞತೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರಾಜ್ಯದ ಹಲವು ಕಡೆ ಮಳೆ ಮುನ್ಸೂಚನೆ 

ನಾಳೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಹಿಂಗಾರು ಚುರುಕಾಗಿರುವ...

ಚಿಕ್ಕಮಗಳೂರು | ಸಾಲಭಾದೆಯಿಂದ ರೈತ ಸಾವು 

ಸಾಲಬಾಧೆ ತಾಳಲಾರದೆ ರೈತ ಭದ್ರಾ ನದಿಗೆ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ...

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...