ಕುಂದಾಪುರ | ರಿವರ್ಸ್‌ ಬರುತ್ತಿದ್ದ ಇನ್ನೋವಾ ಕಾರಿಗೆ ಮೀನಿನ ಲಾರಿ ಡಿಕ್ಕಿ: ಚಾಲಕನ ಸಹಿತ 8 ಮಂದಿ ಗಂಭೀರ

Date:

ರಿವರ್ಸ್‌ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಮೀನು ಸಾಗಾಟದ ರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಏಳು ಮಂದಿ ಹಾಗೂ ಲಾರಿಯ ಚಾಲಕ ಸೇರಿ ಒಟ್ಟು ಎಂಟು ಮಂದಿ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ನಡೆದಿದೆ.

- Advertisement -

ಘಟನೆಯು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂಭಾಶಿ ಸಮೀಪದ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಎದುರುಗಡೆ ನಡೆದಿದೆ. ಘಟನೆಯ ಭೀಕರ ದೃಶ್ಯವು ಹೊಟೇಲೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಗಂಭೀರ ಗಾಯಗೊಂಡಿರುವ ಎಂಟು ಮಂದಿಯನ್ನು ಕೂಡ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕೇರಳ ಮೂಲದ ಇನ್ನೋವಾ ಕಾರಿನಲ್ಲಿ ಏಳು ಜನ ಪ್ರವಾಸಕ್ಕೆಂದು ಬಂದಿದ್ದರೆನ್ನಲಾಗಿದ್ದು ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕುಂಭಾಶಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರಗೋಪುರದ ಬಳಿ ಪಾಸ್ ಆಗುತ್ತಿದ್ದಂತೆ ದೇವಸ್ಥಾನಕ್ಕೆ ಹೋಗಲೆಂದು ಕಾರನ್ನು ರಿವರ್ಸ್ ತೆಗೆದುಕೊಳ್ಳುತ್ತಿದ್ದರು.

ಇದನ್ನು ಓದಿದ್ದೀರಾ? ಉಡುಪಿ | ಗ್ರಾಮ ಪಂಚಾಯತ್ ಚುನಾವಣೆ: ಮೀಸಲಾತಿ ಪ್ರಕಟ; ನಾಮಪತ್ರ ಸಲ್ಲಿಕೆಗೆ ನ. 27 ಕೊನೆಯ ದಿನ

ಇದೇ ಸಂದರ್ಭ ಗೋವಾ ಕಡೆಯಿಂದ ಮೀನು ತುಂಬಿಸಿಕೊಂಡು ಕೇರಳ ಕಡೆಗೆ ಪ್ರಯಾಣಿಸುತ್ತಿದ್ದ ಮಂಗಳೂರು ನೋಂದಣಿ ಸಂಖ್ಯೆಯ ಹೊನ್ನಾವರ ಮೂಲದ ಇನ್ಸುಲೇಟರ್ ವಾಹನ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನ್ಸುಲೇಟರ್ ವಾಹನ ಪಲ್ಟಿಯಾಗಿ ಬಿದ್ದಿದೆ. ಕುಂದಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ಬಗ್ಗೆ ಈ ದಿನ.ಕಾಮ್‌ ಜೊತೆಗೆ ಮಾತನಾಡಿರುವ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಪ್ರಸಾದ್‌ ಕುಮಾರ್ ಕೆ, “ಇನ್ನೋವಾ ಕಾರಿನಲ್ಲಿದ್ದವರೆಲ್ಲರೂ ಕೇರಳ ಮೂಲದವರು. ಕೊಲ್ಲೂರು ದೇವಸ್ಥಾನ ನೋಡಿಕೊಂಡು ಬರುವಾಗ ರಸ್ತೆಯಲ್ಲಿ ಈ ಸಂದರ್ಭ ಕುಂಭಾಶಿಯ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದ ದ್ವಾರಗೋಪುರದ ಬಳಿ ಪಾಸ್ ಆಗುತ್ತಿದ್ದಂತೆ ದೇವಸ್ಥಾನಕ್ಕೆ ಹೋಗಲೆಂದು ಕಾರನ್ನು ರಿವರ್ಸ್ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಮೀನಿನ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯ ವೇಳೆ ಇನ್ನೋವಾ ಕಾರಿನಲ್ಲಿ ಚಾಲಕ ಸೇರಿ 4 ಮಂದಿ ಪುರುಷರು, ಮೂವರು ಮಹಿಳೆಯರಿದ್ದರು. ಇನ್ನೋವಾ ಕಾರಿನಲ್ಲಿದ್ದವರೆಲ್ಲರೂ ದಂಪತಿಗಳು. ಅವರ ವಿವರಗಳನ್ನು ಕಲೆ ಹಾಕಿ, ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದೇವೆ. ಅವರು ಈಗಾಗಲೇ ಊರಿನಿಂದ ಹೊರಟಿದ್ದಾರೆ. ಮೀನಿನ ಲಾರಿಯ ಚಾಲಕ ಮಹೇಶ್ ಎಂಬುವವರಿಗೂ ಗಾಯಗಳಾಗಿದೆ” ಎಂದು ತಿಳಿಸಿದ್ದಾರೆ.

ಕುಂದಾಪ್ರ
ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಪ್ರಸಾದ್‌ ಕುಮಾರ್ ಕೆ

“ಎಂಟು ಮಂದಿಯ ಪೈಕಿ ನಾಲ್ಕು ಜನ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮೀನಿನ ಲಾರಿಯ ಚಾಲಕ ಮಹೇಶ್ ಸೇರಿ ನಾಲ್ಕು ಜನ ಕುಂದಾಪುರದ ಎನ್ ಅರ್ ಆಚಾರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಸಂಬಂಧ ಈಗಾಗಲೇ ಎಫ್‌ಆಐರ್ ದಾಖಲಿಸಿಕೊಂಡಿದ್ದೇವೆ” ಎಂದು ಸಬ್‌ ಇನ್ಸ್‌ಪೆಕ್ಟರ್‌ ಪ್ರಸಾದ್‌ ಮಾಹಿತಿ ನೀಡಿದ್ದಾರೆ.

ಲಾರಿ 6

WhatsApp Image 2024 11 20 at 9.06.36 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...