ಉಡುಪಿಯ | ಮಹಿಳೆಯ ಕರಿಮಣಿ ಸರ ಸುಲಿಗೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

Date:

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಕಳೆದ ವಾರ ಮಹಿಳೆಯ ಕರಿಮಣಿ ಸರ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕೊರಚರಕೇರಿಯ ಸಂಜಯ್‌ ಎಲ್‌ (33) ಹಾಗೂ ದಾವಣಗೆರೆಯ ವಿನೋಬ ನಗರ ಮೂಲದ ವಸಂತ ಕುಮಾರ್‌ (30) ಎಂದು ಗುರುತಿಸಲಾಗಿದೆ. ಇವರಿಂದ ಸುಮಾರು ₹3 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರ, ₹8.20 ಲಕ್ಷ ಮೌಲ್ಯದ ಕಾರು ಹಾಗೂ ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

- Advertisement -

ಅಕ್ಟೋಬರ್‌ 3ರಂದು ಸಂಜೆ ವೇಳೆ ಮೀನಾಕ್ಷಿ ಎಂಬವರು ತಮ್ಮ ಮಗಳೊಂದಿಗೆ ಕುಂದಾಪುರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ಶಾಸ್ತ್ರಿ ಪಾರ್ಕ್‌ ಕಡೆಗೆ ಸರ್ವಿಸ್‌ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬಿಸ್ಸೆನ್ಬೆಲ್‌ ಕಚೇರಿ ಹತ್ತಿರ ಬೈಕ್‌ನಲ್ಲಿ ಬಂದ ಇಬ್ಬರು ಅಜ್ಞಾತರು ಅವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಪರಾರಿಯಾದರು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಪ್ರಕರಣದ ತನಿಖೆಯನ್ನು ಕೈಗೊಂಡ ಕುಂದಾಪುರ ಠಾಣೆಯ ಪ್ರಭಾರ ಪೊಲೀಸ್‌ ನಿರೀಕ್ಷಕ ಜಯರಾಮ ಡಿ. ಗೌಡ ನೇತೃತ್ವದ ತಂಡ ತೀವ್ರ ತನಿಖೆ ನಡೆಸಿ, ಸಂಜಯ್‌ ಅನ್ನು ತೀರ್ಥಹಳ್ಳಿ ತಾಲೂಕಿನ ಮುಡಬಾ ಕ್ರಾಸ್‌ನಲ್ಲಿ ಹಾಗೂ ವಸಂತ ಕುಮಾರ್‌ ಅನ್ನು ದಾವಣಗೆರೆ ಜಿಲ್ಲೆಯ ಮಲೆ ಬೆನ್ನೂರು ಪ್ರದೇಶದಲ್ಲಿ ವಶಕ್ಕೆ ಪಡೆದು ಬಂಧಿಸಿದರು.

ಈ ಕಾರ್ಯಾಚರಣೆಯಲ್ಲಿ ಕುಂದಾಪುರ ವೃತ್ತ ನಿರೀಕ್ಷಕ ಜಯರಾಮ ಡಿ. ಗೌಡ ಅವರ ನೇತೃತ್ವದಲ್ಲಿ ಎಸ್ಸೈ ನಂಜಾನಾಯ್ಕ್‌ ಎನ್‌, ಎಸ್ಸೈ ಪುಷ್ಪಾ, ಸಂಚಾರ ಠಾಣೆಯ ಎಸ್ಸೈ ನೂತನ್‌ ಹಾಗೂ ಸಿಬ್ಬಂದಿಗಳಾದ ಮೋನ ಪೂಜಾರಿ, ಮೋಹನ್‌, ಸಂತೋಷ, ಪ್ರಿನ್ಸ್‌, ಮಂಜುನಾಥ, ಕಾನ್ಟೇಬಲ್‌ ಘನಶ್ಯಾಮ, ಲೋಹಿತ್‌, ಮೌನೇಶ್‌, ಕಿಶನ್‌, ರಾಜು ಭೋವಿ, ಮಹಾಬಲ, ರಾಘವೇಂದ್ರ ಗೌತಮ್‌, ನಾಗಶ್ರೀ ಮತ್ತು ವೃತ್ತ ಕಚೇರಿಯ ಅಣ್ಣಪ್ಪ ಸೇರಿದಂತೆ ಪೊಲೀಸರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಅನಾಥನೆಂದು ಹೇಳಿ ಟಿಕೆಟ್ ಪಡೆದು ಗೆದ್ದರು, ಅಭಿವೃದ್ಧಿಗೆ ಕೊಡುಗೆಯೇ ಇಲ್ಲ:ಪ್ರದೀಪ್ ಈಶ್ವರ್ ವಿರುದ್ಧ ಹರಿದಾಯ್ದ ಜಿ.ಎಲ್. ಶಂಕರ್

ಚಿಂತಾಮಣಿ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್...

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...