ಉಡುಪಿ | ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ, ವಿಧಾನಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ

Date:

ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಭರವಸೆ ನೀಡಿದರು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

- Advertisement -

ಕುಂದಾಪುರ ತಾಲೂಕಿನ ಇಎಸಐ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ಹುದ್ದೆಯನ್ನು ಮಂಜೂರು ಮಾಡಲಾಗಿತ್ತು. ಆದರೆ 2015 ರಿಂದ ಒಬ್ಬರೇ ಒಬ್ಬರು ಖಾಯಂ ವೈದ್ಯರು ಇಲ್ಲ. ಬೇರೆ ಕಡೆಯಿಂದ ನಿಯೋಜನೆ ಮೇರೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಾರೆ. ಇದರಿಂದ ಕಾರ್ಮಿಕರಿಗೆ ಸರಿಯಾದ ಚಿಕಿತ್ಸೆ ಸಿಗದೆ ತೊಂದರೆಯಾಗಿದೆ ಎಂದು ಕಿರಣ್ ಕುಮಾರ್ ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಕುಂದಾಪುರದ ಇಎಸ್‌ಐ ಆಸ್ಪತ್ರೆಯಲ್ಲಿ ನಿಯೋಜನೆ ಮೇಲೆ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಖಾಯಂ ವೈದ್ಯರು ಬೇಕು ಎಂಬ ಬೇಡಿಕೆ ಬಗ್ಗೆ ಪರಿಶೀಲನೆ ಮಾಡಲಾಗುವುದು. ಮೂರು ವಾರದಲ್ಲಿ ತಾತ್ಕಾಲಿಕ ವೈದ್ಯರ ನೇಮಕ ಮಾಡಲಾಗುವುದು ಎಂದು ಹೇಳಿದರು.

ಆಸ್ಪತ್ರೆ ಹೆಸರು ಬಿಟ್ಟಿದ್ದರೆ ಕ್ರಮ: ಇಎಸ್‌ಐ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳ ಪಟ್ಟಿಯಲ್ಲಿ ಮಣಿಪಾಲದ ಕಸ್ತೂರರ್ಬಾ ಆಸ್ಪತ್ರೆ ಹಾಗೂ ಕುಂದಾಪುರದ ಆದರ್ಶ ಆಸ್ಪತ್ರೆ ಬಿಟ್ಟು ಹೋಗಿದೆ ಎಂಬ ಕಿರಣ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್ ಅವರು, ಕಸ್ತೂರಬಾ, ಆದರ್ಶ ಆಸ್ಪತ್ರೆ ಬಿಟ್ಟು ಹೋಗಿದ್ದರೆ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾರ್ಮಿಕ ಸಚಿವರಿಗೆ ಧನ್ಯವಾದ : ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆ ಅವಧಿಯನ್ನು ಎರಡು ವರ್ಷಕ್ಕೆ ವಿಸ್ತರಿಸಿದ್ದಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕಿರಣ್ ಕುಮಾರ್ ಅವರು ಧನ್ಯವಾದಗಳನ್ನು ತಿಳಿಸಿದರು.
ಈ ಬಗ್ಗೆ ಸಚಿವರಿಗೆ ಕಿರಣ್ ಕುಮಾರ್ ಅವರು ಮನವಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...