ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ತಲ್ಲೂರಿನ ಸಮೀಪದ ಸೇತುವೆ ಬಳಿ ಸಂಭವಿಸಿದೆ.
ಡಿಕ್ಕಿ ಹೊಡೆದ ವಾಹನ ಪರಾರಿಯಾಗಿದ್ದು,ಹೊನ್ನಾವರ ತಾಲೂಕಿನ ಗೇರುಸೊಪ್ಪದ ಮೇಘನಾಥ (39) ಸಾವನ್ನಪ್ಪಿದವರು. ಇವರು ಕೆಲಸ ಮುಗಿಸಿ, ತ್ರಾಸಿಯಲ್ಲಿನ ತನ್ನ ಅಕ್ಕನ ಮನೆಗೆ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವೈದ್ಯರು ಆಸ್ಪತ್ರೆಗೆ ಬರುವಾಗಲೇ ಮೇಘನಾಥ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
