ಉಡುಪಿ | ಪ್ರಚೋದನಕಾರಿ ವಿಡಿಯೋ ವೈರಲ್, ಇಬ್ಬರ ಬಂಧನ, 20-30 ಮಂದಿಯ ವಿರುದ್ಧ ಕ್ರಮ

Date:

ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡೂರು ಪೇಟೆಯ ಕಟಿಂಗ್ ಶಾಪ್‌ನಲ್ಲಿ ನಡೆದ ಘಟನೆಯನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಸಾರ್ವಜನಿಕರಲ್ಲಿ ಪ್ರಚೋದನೆ ಉಂಟುಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

ಬಿಹಾರ ಮೂಲದ ಬಾಲಕನು ಕಟಿಂಗ್ ಶಾಪ್‌ನಲ್ಲಿ ಹೇಳಿದ ವಿಷಯವನ್ನು ಕೆಲವರು ವಿಡಿಯೋ ಮಾಡಿ, ಗಲಾಟೆ ಸೃಷ್ಟಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ಬಾಲಕನ ತಂದೆ ನೀಡಿದ ದೂರಿನ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...
1009735429

ಇದೇ ವಿಚಾರಕ್ಕೆ ಸಂಬಂಧಿಸಿ ಕಟಿಂಗ್ ಶಾಪ್ ಎದುರು ಸುಮಾರು 20ರಿಂದ 30 ಜನರು ಗುಂಪುಗೂಡಿ ಬೆದರಿಕೆ ಹಾಕಿದ ಬಗ್ಗೆ ಶಾಪ್ ಮಾಲೀಕ ಶಶಾಂಕ ಭಂಡಾರಿ ನೀಡಿದ ದೂರಿನ ಆಧಾರದಲ್ಲಿ ಮತ್ತೊಂದು ಪ್ರಕರಣವೂ ದಾಖಲಾಗಿದೆ.

ಪ್ರಕರಣ ಸಂಬಂಧ ಈಗಾಗಲೇ 20-30 ಮಂದಿಯನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ಶಶಾಂಕ ಭಂಡಾರಿ (30) ಹಾಗೂ ಪ್ರಮೋದ ಡಿಸೋಜ (25) ಎಂದು ಗುರುತಿಸಲಾಗಿದೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...