ಉಡುಪಿ | ಕುಂದಾಪುರದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ವಿಜಯೋತ್ಸವ

Date:

Advertisements

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ‌ ಕಾರ್ಮಿಕ ಕಲ್ಯಾಣ‌ ಮಂಡಳಿಯು  ಅರ್ಜಿ ಸಲ್ಲಿಸಿದ ಎಲ್ಲ ಮಕ್ಕಳಿಗೂ 2021 ಅಧಿಸೂಚನೆ ಅನ್ವಯವೇ ಬಾಕಿ ಇರುವ ಮೂರು ವರ್ಷದ ಶೈಕ್ಷಣಿಕ ಧನಸಹಾಯ ವಿತರಿಸಲು ತ್ವರಿತಗತಿಯಲ್ಲಿ ಕ್ರಮವಹಿಸಬೇಕೆಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಸ್ವಾಗತಿಸಿ ಇಂದು ರಾಜ್ಯಾದ್ಯಂತ ವಿಜಯೋತ್ಸವ ಆಚರಿಸಲು ಕರೆನೀಡಿದ ಅಂಗವಾಗಿ ತೀರ್ಪು ಜಾರಿಗೊಳಿಸಲು ಆಗ್ರಹಿಸಿ ಕುಂದಾಪುರ ನಗರದಲ್ಲಿರುವ ಸಂಘದ ಕಚೇರಿ ಎದುರು ಆಚರಿಸಲಾಯಿತು.

ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು 2023 ರಿಂದ ಶೇ 70 ರಿಂದ ಶೇ. 80 ರಷ್ಟು ಕಡಿತ ಮಾಡಿತ್ತು. ಕಲ್ಯಾಣ ಮಂಡಳಿಯ ಈ ನಿರ್ಧಾರವನ್ನು ಇದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ‌ಕಟ್ಟಡ ಮತ್ತು ಇತರೆ ನಿರ್ಮಾಣ‌ ಕಾರ್ಮಿಕರ ಫೆಡರೇಷನ್‌ (ಸಿಐಟಿಯು) ಸಂಘಟನೆಯು  ಹೈಕೋರ್ಟ್ ಮೊರೆ ಹೋಗಿತ್ತು.

ಈ  ರಿಟ್  ಅರ್ಜಿಯನ್ನು ಮಾನ್ಯ‌ಮಾಡಿದ್ದ ನ್ಯಾಯಮೂರ್ತಿ ಶ್ರೀ ನಾಗಪ್ರಸನ್ನ  ನೇತೃತ್ವದ ಏಕ‌ಸದಸ್ಯ ಪೀಠವು‌ ಮಾನ್ಯ ಮಾಡಿ 2023 ಏಪ್ರಿಲ್ ನಲ್ಲೇ ಮಧ್ಯಂತರ ಆದೇಶ ನೀಡಿ ಅರ್ಜಿ ಸಲ್ಲಿಸಿದ ಇಬ್ಬರು ವಿದ್ಯಾರ್ಥಿನಿಯರಿಗೆ ದಂಡ ಸಹಿತ ಶೈಕ್ಷಣಿಕ ‌ಧನ ಸಹಾಯ ಪಾವತಿಸಲು ಆದೇಶಿಸಿತ್ತು. ಇದೀಗ ಅಂತಿಮ ತೀರ್ಪು ಹೊರ ಬಂದಿದ್ದು, ಅದರ ಅನ್ವಯ 2020 – 21, 2021 – 22 ಹಾಗೂ 2022 – 23 ನೇ ಸಾಲಿನ ಶೈಕ್ಷಣಿಕ ಸಹಾಯಧನವನ್ನು 2021 ರ ಅಧಿಸೂಚನೆ ಅನ್ವಯವೇ ಬಿಡುಗಡೆ ಮಾಡುವಂತೆ  ಆದೇಶ ನೀಡಿದೆ ಮಾತ್ರವಲ್ಲ ಸದರಿ ಆದೇಶವನ್ನು  ಜಾರಿ ಮಾಡಲು ಅಗತ್ಯ ಕ್ರಮವಹಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶಕ ನೀಡಿದೆ.ಅಲ್ಲದೆ 2023 ರ ಸರ್ಕಾರದ  ಅಧಿಸೂಚನೆಯನ್ನು ರದ್ದುಗೊಳಿಸಿ ಈ ಹಿಂದಿನ  2021 ರ ಅಧಿಸೂಚನೆ ಪ್ರಕಾರವೇ ವಿದ್ಯಾರ್ಥಿ ವೇತನ ವಿತರಿಸಲು ಜನವರಿ10 ರಂದು ಅಂತಿಮ‌ ತೀರ್ಪು ನೀಡಿತ್ತು.

Advertisements

ಬಡ ಕಟ್ಟಡ ಕಾರ್ಮಿಕರ ಶೈಕ್ಷಣಿಕ ಬದುಕನ್ನೇ ಕಿತ್ತು ಕೊಂಡಿದ್ದ 2023 ರ ರಾಜ್ಗ ಸರ್ಕಾರದ ಅಧಿಸೂಚನೆ ಯನ್ನು ರದ್ದುಗೊಳಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ನ್ಯಾಯ ‌ನೀಡಿರುವ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ‌ಕಾರ್ಮಿಕರ ಫೆಡರೇಷನ್‌ (ರಿ)  ಕಲ್ಯಾಣ‌ ಮಂಡಳಿಯು‌ ಕೂಡಲೇ 2021 ಅಧಿಸೂಚನೆ ಅನ್ವಯವೇ ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಬಾಕಿ ಸಹಿತ ಶೈಕ್ಷಣಿಕ ಧನ‌ಸಹಾಯವನ್ನು ಅವರ ಖಾತೆಗೆ ವರ್ಗಾಹಿಸಲು ಅಗತ್ಯ ಕ್ರಮವಹಿಸಬೇಕೆಂದು ಆಗ್ರಹಿಸಿದೆ.

ವಿಜಯೋತ್ಸವದಲ್ಲಿ ಸಂಘದ ಗೌರವಾಧ್ಯಕ್ಷ ಚಿಕ್ಕ ಮೊಗವೀರ ಗಂಗೊಳ್ಳಿ, ಕೋಶಾಧಿಕಾರಿ ಚಂದ್ರಶೇಖರ ವಿ, ಕಾರ್ಯದರ್ಶಿ ಸುಧೀರ್ ಕುಮಾರ್, ರತ್ನಾಕರ ಆಚಾರ್ , ಡಿವೈಎಫ್ಐ ಮುಖಂಡ ಗಣೇಶ್ ದಾಸ್, ಎಸ್ ಎಫ್ ಐ ಸಂಚಾಲಕಿ ರಿತಿಕಾ ಮೊದಲಾದವರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X