ಉಡುಪಿ | ಗಾಂಧಿ ಸಂದೇಶ ಇಂದು ವಿಶ್ವದ ಸಂವಿಧಾನಗಳಲ್ಲಿ ಜೀವಂತ : ಪ್ರೊ. ವರದೇಶ್ ಹಿರೇಗಂಗೆ

Date:

ಗಾಂಧೀಜಿಯ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಸಂದೇಶಗಳು ಇಂದು ವಿಶ್ವದ ಅನೇಕ ದೇಶಗಳ ಸಂವಿಧಾನಗಳಲ್ಲಿ ಸ್ಥಾನ ಪಡೆದಿವೆ. ಆ ಮೂಲಕ ಗಾಂಧಿ ಅಲ್ಲೆಲ್ಲವೂ ಜೀವಂತವಾಗಿದ್ದಾರೆ ಎಂದು ಮಣಿಪಾಲ ಗಾಂಧಿ ಕೇಂದ್ರದ ಸ್ಥಾಪಕ ನಿರ್ದೇಶಕ ಪ್ರೊಫೆಸರ್ ವರದೇಶ್ ಹಿರೇಗಂಗೆಯವರು ಅಭಿಪ್ರಾಯಪಟ್ಟರು.

- Advertisement -

ಅವರು ಇಂದು ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಗಾಂಧಿ ಹುತಾತ್ಮ ದಿನದಂದು ಆಯೋಜಿಸಲಾದ “ಮಹಾತ್ಮ ಹುತಾತ್ಮ” ಕಾರ್ಯಕ್ರಮದಲ್ಲಿ ಮಾತನಾಡಿದರು. ಸತ್ಯಕ್ಕೆ ವಿವೇಕದ ಶಕ್ತಿ ಇದೆ; ಅದಕ್ಕೆ ಅಳಿವು ಇಲ್ಲ ಎಂದ ಅವರು, ಗಾಂಧೀಜಿ ಸನಾತನವಾದಿ ಹಿಂದೂ ಆಗಿದ್ದರೂ ಎಲ್ಲಾ ಧರ್ಮಗಳನ್ನು ಗೌರವಿಸುವ ತಾತ್ವಿಕತೆಯನ್ನು ಹೊಂದಿದ್ದರು. ‘ನನ್ನ ಧರ್ಮವೇ ಶ್ರೇಷ್ಠ’ ಎನ್ನುವ ಮನೋಭಾವ ಗಾಂಧೀ ತತ್ತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅಮೆರಿಕದ ಟ್ರಂಪ್ ಮಾದರಿಯ ಅಭಿವೃದ್ಧಿಯನ್ನು ಇಂದು ನಮ್ಮ ದೇಶದಲ್ಲಿ ಅನುಸರಿಸಲಾಗುತ್ತಿದ್ದು, ಅದು ಪರಿಸರ ನಾಶ, ಸಂಪನ್ಮೂಲ ಲೂಟಿ ಹಾಗೂ ಖಾಸಗೀಕರಣದ ಮೂಲಕ ಕೆಲವರಷ್ಟೇ ಲಾಭಪಡುವ ವಿನಾಶಕಾರಿ ಅಭಿವೃದ್ಧಿಯಾಗಿದೆ ಎಂದು ಅವರು ಟೀಕಿಸಿದರು.

1949ರಲ್ಲಿ ಗಾಂಧೀಜಿಯ ದೇಹ ಹತ್ಯೆ ನಡೆದರೂ, ಇಂದಿಗೂ ಅವರ ಸಿದ್ಧಾಂತಗಳ ಹತ್ಯೆ ನಡೆಯುತ್ತಲೇ ಇದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಗಾಂಧೀಜಿಗೆ ಭಿನ್ನಾಭಿಪ್ರಾಯಗಳಿದ್ದರೂ ದ್ವೇಷ ಎಂದಿಗೂ ಇರಲಿಲ್ಲ. ದ್ವೇಷದಿಂದ ಹತ್ಯೆ ನಡೆದರೂ ಅಂತಿಮವಾಗಿ ಪ್ರೀತಿ, ಶಾಂತಿ ಮತ್ತು ಸಹಬಾಳ್ವೆಯೇ ಗೆಲ್ಲುತ್ತದೆ ಎಂದರು.

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಿಸಿ ಹೊಸ ಯೋಜನೆಗಳ ಮೂಲಕ ಉದ್ಯೋಗ ನಿರಾಕರಣೆ ಮಾಡುವುದು ಶ್ರೀರಾಮನಿಗೂ ಒಪ್ಪಲಾರದ ಸಂಗತಿ ಎಂದು ಹೇಳಿದರು. ಇಂದಿನ ಭಾರತದ ಅಭಿವೃದ್ಧಿ ಪ್ರಶ್ನಾರ್ಹ ಹಾಗೂ ವಿನಾಶಕಾರಿ ಅಭಿವೃದ್ಧಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ವೇದಿಕೆಯಲ್ಲಿ ಕುಂದಾಪುರದ ಪ್ರಗತಿಪರ ಚಿಂತಕರಾದ ಪ್ರೊಫೆಸರ್ ಹಾಯವದನ ಮೂಡುಸಗ್ರಿಯವರು ಉಪಸ್ಥಿತರಿದ್ದು ಮಾತನಾಡಿದರು. ಭಾರತ ಜ್ಞಾನ ವಿಜ್ಞಾನ ಸಮಿತಿ ಕುಂದಾಪುರ ಘಟಕದ ಆಶಾ ಕರ್ವಾಲೋ ತಂಡದವರು ಸೌಹಾರ್ದ ಗೀತೆಗಳನ್ನು ಪ್ರಸ್ತುತಪಡಿಸಿದರು.

ಕುಂದಾಪುರದ ವಿವಿಧ ಸಂಘಟನೆಗಳ ಶಾಂತಿಪ್ರಿಯ ನಾಗರಿಕರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಕೊನೆಯಲ್ಲಿ ಗಾಂಧೀಜಿಯವರ “ಎಲ್ಲರ ನೋವನ್ನು ಬಲ್ಲೆನಾದರೆ” ಗೀತೆಯೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...