ಉಡುಪಿ | ಕುಂದಾಪುರದಲ್ಲಿ ಅನೈತಿಕ ಪೊಲೀಸ್ ಗಿರಿ, ಓರ್ವ ಅರೆಸ್ಟ್

Date:

Advertisements

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕ ಬಾಲಕಿಯರಿಗೆ ಹಲ್ಲೆ ನಡೆಸಿ ಬೆದರಿಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಓರ್ವನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಹೇಶ್ ಎಂದು ಗುರುತಿಸಲಾಗಿದೆ. ಎ.8ರಂದು ಅಪ್ರಾಪ್ತ ಬಾಲಕಿ ತನ್ನ ಸ್ನೇಹಿತರೊಂದಿಗೆ ಉಡುಪಿಗೆ ಹೋಗಿ ವಾಪಾಸು ಮನೆಗೆ ಬರಲು ಉಡುಪಿಯಿಂದ ಖಾಸಗಿ ಬಸ್ ನಲ್ಲಿ ಹೊರಟು ಸಂಜೆ ಕುಂದಾಪುರ ಶಾಸ್ತ್ರಿ ಪಾರ್ಕ್ ನಲ್ಲಿ ಇಳಿದಿದ್ದು, ಮುಂದಿನ ಪ್ರಯಾಣಕ್ಕಾಗಿ ಇನ್ನೊಂದು ಬಸ್ಸಿಗಾಗಿ ಬಸ್ ನಿಲ್ದಾಣದ ಕಡೆಗೆ ಹೋಗುವಾಗ ಸಂಜೆ ಸುಮಾರು 06:45 ಗಂಟೆಗೆ ಮಹೇಶ್ ಬಾಲಕಿಯ ಹೆಸರನ್ನು ಕೇಳಿ ನಂತರ ಅವಳ ಜೊತೆಯಲ್ಲಿದ್ದವರ ಹೆಸರನ್ನು ಕೇಳಿದನು. ಬಳಿಕ ಅವರನ್ನು ಉದ್ದೇಶಿಸಿ ಆತ, ನಿಮಗೆ ತಿರುಗಾಡಲು ಹಿಂದೂ ಹುಡುಗಿ ಬೇಕಾ ಎಂದು ಅವಾಚ್ಯ ಶಬ್ದದಿಂದ ಬೈದು ಒಬ್ಬ ಹುಡುಗನಿಗೆ ಕೈಯಿಂದ ಹೊಡೆದಿದನು ಎಂದು ದೂರಲಾಗಿದೆ.

ಈ ವೇಳೆ ಸ್ಥಳೀಯರು ಸೇರಿ ಹೊಡೆಯದಂತೆ ತಡೆದಾಗ ಮಹೇಶ್ ಬಾಲಕಿಯನ್ನುದ್ದೇಶಿಸಿ ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ಅಸಭ್ಯವಾಗಿ ಅಲ್ಲಿ ಸೇರಿದ್ದ ಸಾರ್ವಜನಿಕರ ಎದುರು ನಿಂದಿಸಿ ಬೈದನು. “ನೀನು ಇದೇ ರೀತಿ ಮುಸ್ಲಿಂ ಹುಡುಗರ ಜೊತೆಯಲ್ಲಿ ತಿರುಗಾಡಿದರೆ ಮುಂದಕ್ಕೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿದನು ಎಂದು ದೂರಲಾಗಿದೆ.

Advertisements

ಮಹೇಶ್ ಸಾರ್ವಜನಿಕ ಸ್ಥಳದಲ್ಲಿ ನನ್ನ ಮಗಳ ಮಾನಕ್ಕೆ ಕುಂದುಂಟಾಗುವಂತೆ ನಿಂದಿಸಿ, ಅಶಾಂತಿ ಹರಡುವಂತೆ ಮಾಡಿ, ಬೈದು, ಹಲ್ಲೆ ನಡೆಸಿ ಬೆದರಿಕೆ ಹಾಕಿರುವುದಾಗಿ ಬಾಲಕಿಯ ತಾಯಿ ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕಾಲಂ 126(2) 115(2) 352 351(2) 75,353
ಬಿಎನ್ ಎಸ್ ಕಾಲಂ 75 JJ ACT ನಂತೆ ಪ್ರಕರಣ ದಾಖಲಾಗಿದೆ.

ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿ ಮಹೇಶ್ ನನ್ನು ಎ.10 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಹೇಶ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿರುವುದನ್ನು ವಿರೋಧಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ಇಂದು ಸಂಜೆ ವೇಳೆ ಕುಂದಾಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗಿದೆ. ಆಹೋರಾತ್ರಿ ಧರಣಿ ಕುಳಿತಿರುವ ಶಾಸಕ ಗುರುರಾಜ್ ಗಂಟಿಹೊಳೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಧಮನಿಸುವ ಕಾರ್ಯಕ್ಕೆ ಪೊಲಿಸರು ಬಳಿಸಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಲವ್ ಜಿಹಾದ್, ಗೋಹತ್ಯೆ, ಅಕ್ರಮ ಗೋ ಸಾಗಾಟಗಳಂತಹಾ ಪ್ರಕರಣಗಳು ಹೆಚ್ಚುತ್ತಿವೆ. ಮುಸ್ಲಿಂ ಓಲೈಕೆಯಲ್ಲಿ ತೊಡಗಿರುವ ಕಾಂಗ್ರೆಸ್ ಹಿಂದೂಗಳನ್ನು ಧಮನಿಸುವ ಕೆಲಸಕ್ಕೆ ಕೈ ಹಾಕಿದರೆ ಹಿಂದೂ ಸಂಘಟನೆಗಳು ಕೈಕಟ್ಟಿ ಕೂರುವುದಿಲ್ಲ ಎಂದು ಎಚ್ಚರಿಸಿದ್ದಲ್ಲದೇ, ಹಿಂದು ಯುವತಿಯನ್ನು ಚುಡಾಯಿಸಿದ ಮುಸ್ಲಿಂ ಯುವಕರನ್ನು ಬಂಧಿಸಿ ಕ್ರಮ ಕೈಗೊಳ್ಳುವವರೆಗೆ ಆಹೋರಾತ್ರಿ ಧರಣಿ ಮುಂದುವರೆಸುವುದಾಗಿಯೂ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇವನು ಯಾವ ಸೀಮೆ ಶಾಸಕ ಗೂಂಡಾಗಿರಿ ಮಾಡಿದವರ ಪರವಾಗಿ ಧರಣಿ ಕೂರುತ್ತಾನೆ, ಇವನು ಗೂಂಡಾಗಳ ಪರನೋ ಅಥವಾ ಜನರ ಪರನೋ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X