ಉಡುಪಿ | ಕುಂದಾಪುರ ಶೇಟ್ಟರಕಟ್ಟೆ ತಿರುವಿನಲ್ಲಿ ಅಪಘಾತ, 15 ಮಂದಿ ಪ್ರಯಾಣಿಕರಿಗೆ ಗಾಯ

Date:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು–ನೇರಳಕಟ್ಟೆ ಮಾರ್ಗದ ಶೇಟ್ಟರಕಟ್ಟೆ ತಿರುವಿನಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಟಿಪ್ಪರ್ ವಾಹನವು ಎದುರುಗಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಸರಕಾರಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಬಲಭಾಗಕ್ಕೆ ತೀವ್ರ ಹಾನಿಯಾಗಿದೆ.

- Advertisement -

ಅಪಘಾತದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಒಟ್ಟು 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ 7 ಮಂದಿ ವಿದ್ಯಾರ್ಥಿಗಳಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಮೂರು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಕುಂದಾಪುರದ ಸರಕಾರಿ ಆಸ್ಪತ್ರೆ ಹಾಗೂ ಆದರ್ಶ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಟಿಪ್ಪರ್ ಚಾಲಕ ರಾಘವೇಂದ್ರ ಎಂಬುವವರು ಕೂಡ ಗಾಯಗೊಂಡಿದ್ದು, ಅವರನ್ನು ಚಿನ್ಮಯಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಅಪಘಾತದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲೆಯ ವಿವಿಧ ಭಾಗಗಳಲ್ಲಿ ಟಿಪ್ಪರ್ ವಾಹನಗಳು ಅತೀವೇಗವಾಗಿ ಸಂಚರಿಸುತ್ತಿರುವುದು ಅಮೂಲ್ಯ ಜೀವಗಳಿಗೆ ಅಪಾಯಕಾರಿಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿ ಅಜಾಗರೂಕತೆಯಿಂದ ಟಿಪ್ಪರ್‌ಗಳು ಸಂಚರಿಸುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಸಿಪಿಎಂ ಆರೋಪಿಸಿದೆ.

ಇಂತಹ ಸಾವು–ನೋವುಗಳನ್ನು ತಪ್ಪಿಸಲು ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಟಿಪ್ಪರ್‌ಗಳ ವೇಗಕ್ಕೆ ಕಡಿವಾಣ ಹಾಕಬೇಕು ಎಂದು ಸಿಪಿಎಂ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...