ಕುಣಿಗಲ್ | ಆಸ್ಪತ್ರೆಯಲ್ಲಿ ವಿದ್ಯುತ್ ಸ್ಥಗಿತ : ಮೊಬೈಲ್ ಟಾರ್ಚ್ ಬಳಸಿ ತಪಾಸಣೆ

Date:

ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ವಿದ್ಯುತ್ ಸಮಸ್ಯೆಯ ಕಾರಣದಿಂದ  ಆಸ್ಪತ್ರೆಯಲ್ಲಿ ಕತ್ತಲು ಆವರಿಸಿ, ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಜೊತೆಗೆ ವೈದ್ಯರು  ಮೊಬೈಲ್ ಟಾರ್ಚ್ ಬಳಸಿ ಹೊರ ರೋಗಿಗಳನ್ನು   ತಪಾಸಣೆ ನಡೆಸಿದ ಘಟನೆ ನಡೆದಿದೆ.

- Advertisement -

 ಸಾರ್ವಜನಿಕ ಆಸ್ಪತ್ರೆಗೆ ಸಂಪರ್ಕ ವಿದ್ಯುತ್ ಕಲ್ಪಿಸುವ 450 ಕೆ.ವಿ ವಿದ್ಯುತ್ ಪರಿವರ್ತಕದಲ್ಲಿ ಸಮಸ್ಯೆ ಉಂಟಾಗಿದ್ದ ಕಾರಣ ಹಾಗೂ ಜನರೇಟರ್ ಕಾರ್ಯನಿರ್ವಹಿಸದ ಹಿನ್ನೆಲೆ ಆಸ್ಪತ್ರೆಗೆ ಡಯಾಲಿಸಿಸ್ ಗೆ ದಾಖಲಾಗಿದ್ದ ರೋಗಿಗಳಿಗೆ ವಿದ್ಯುತ್ ಸಮಸ್ಯೆ ಕಾರಣದಿಂದ ಡಯಾಲಿಸಿಸ್ ಯಂತ್ರಗಳು ಹಾಗೂ ಆಕ್ಸಿಜನ್ ಯಂತ್ರಗಳು ಕಾರ್ಯನಿರ್ವಹಿಸಿಲ್ಲ.  ಹೀಗಾಗಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಕಾಲದಲ್ಲಿ  ರೋಗಿಗಳಿಗೆ ಚಿಕಿತ್ಸೆ ಸಿಗದೆ ಡಯಾಲಿಸಿಸ್ ಗೆ ದಾಖಲಾಗಿದ್ದ ಒರ್ವ ಮಹಿಳೆಯನ್ನು ಆಂಬುಲೆನ್ಸ್ ಮೂಲಕ ತುಮಕೂರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.

 ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ  ಸಾರ್ವಜನಿಕರು ಹಾಗೂ ರೋಗಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಕೂಡಲೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. ಬಳಿಕ ಬೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿ ಮಧ್ಯಾಹ್ನದ ವೇಳೆಗೆ ಪರಿವರ್ತಕದ ಸಮಸ್ಯೆ ಸರಿಪಡಿಸಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ.

 ಸಾರ್ವಜನಿಕ ಆಸ್ಪತ್ರೆಯಲ್ಲಿ ಶೌಚಾಲಯ ಸಮರ್ಪಕ ನಿರ್ವಹಣೆ ಇಲ್ಲದೆ  ರೋಗಿಗಳು ಮೂಗು ಮುಚ್ಚಿಕೊಂಡು ಒಡಾಡುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೆ ಶಾಸಕರು ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಗಮನ ಹರಿಸಬೇಕೆಂದು ಸಾರ್ವಜನಿಕರ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ತುಮಕೂರು | ಸಚಿವ ಸೋಮಣ್ಣ ಭಾಷಣದ ವೇಳೆ ಚುನಾವಣಾ ಪ್ರಚಾರಕ್ಕೆ ಆಕ್ಷೇಪ; ಸಭೆಯಲ್ಲಿ ವಾಗ್ವಾದ

ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ  ಸಮಾಜದ...