ಕುಣಿಗಲ್ | ಮೂರು ಪ್ರತ್ಯೇಕ ಅಪಘಾತ : ಇಬ್ಬರು ಸಾವು ; ಮೂವರಿಗೆ ಗಂಭೀರ ಗಾಯ

Date:

ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ದೊಡ್ಡಮಳವಾಡಿ ಸಮೀಪ ಭಾನುವಾರ ಆಟೋ ಮತ್ತು ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಳಧರದ ಆಟೋ ಚಾಲಕ ತೆಜಸ್ ಕುಮಾರ್ (28) ಗಂಭೀರವಾಗಿ ಗಾಯಗೊಂಡಿದ್ದು, ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೋಯ್ಯಲಾಗಿದೆ.

- Advertisement -

 ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಚಾಕೇನಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಚಾರಿ ಚಾಕೆನಹಳ್ಳಿ ಗ್ರಾಮದ ಚಂದ್ರಪ್ಪ (55) ಸ್ಥಳದಲ್ಲೆ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರನನ್ನು ಬೆಳ್ಳೂರು ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

 ಭಾನುವಾರ ತಡರಾತ್ರಿ ಕುಣಿಗಲ್ ಪಟ್ಟಣದ ಹಳೆಯ ರಾಷ್ಟ್ರೀಯ ಹೆದ್ದಾರಿ 48ರ ಸಪ್ತಗಿರಿ ಆಸ್ಪತ್ರೆಯ ಬಳಿ ರಸ್ತೆದಾಟುತ್ತಿದ್ದ ಪಾದ ಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬಿಳಿದೇವಾಲಯ ಗ್ರಾಮದ ಬೈಕ್ ಸವಾರ ಮಂಜುನಾಥ್ (35) ಸ್ಥಳದಲ್ಲೆ ಸಾವನ್ನಪ್ಪಿದ್ದು ಗಂಭೀರವಾಗಿ ಗಾಯಗೊಂಡಿದ್ದು ಪಾದಚಾರಿಯನ್ನು ಸ್ಥಳಿಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಅಪಘಾತ ನಡೆದ ಸ್ಥಳಕ್ಕೆ ಆಂಬುಲೆನ್ಸ್ ಬಾರದ ಕಾರಣ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಬಳಿಕ ಸ್ಥಳಕ್ಕೆ ಬಂದ ಕುಣಿಗಲ್ ಪೊಲೀಸರು ಪರಿಸ್ಥಿತಿ ತಿಳಿಗೋಳಿಸಿ ಮೃತದೇಹವನ್ನು ಆಸ್ಪತ್ರೆಗೆ ಕೊಂಡೊಯ್ದರು. ಘಟನೆ ಸಂಬಂಧ ಅಮೃತೂರು ಹಾಗೂ ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕುಣಿಗಲ್ ಪಟ್ಟಣದಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದ ನಾಗರಿಕರ ಆತಂಕಕ್ಕೆ ಕಾರಣವಾಗಿದೆ. ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರು ಬಹುತೆಕ ದ್ವಿಚಕ್ರ ವಾಹನ ಸವಾರರಾಗಿದ್ದು ಅಪಘಾತದ ವೇಳೆ ತಲೆಗೆ ಎಲ್ಮೇಟ್ ಧರಿಸದಿರುವುದು ಕಂಡುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...