ಬೆಂ.ಗ್ರಾಮಾಂತರ | ಕುವೆಂಪು ಹಾಗೂ ಅಮರಶಿಲ್ಪಿ ಜಕಣಾಚಾರಿ ಅವರ ಸಾಮಾಜಿಕ ಕೊಡುಗೆ ಅಪಾರ; ಡಿ.ಸಿ

Date:

ರಾಷ್ಟ್ರಕವಿ ಕುವೆಂಪು ಅವರು ಸಾಹಿತ್ಯ ಕ್ಷೇತ್ರದಲ್ಲಿ ಸಮಾಜಕ್ಕೆ ಕೊಡುಗೆಯಾದರೆ, ಅಮರ ಶಿಲ್ಪಿ ಜಕಣಾಚಾರಿ ಅವರು ವಾಸ್ತು ಶಿಲ್ಪದ ಮೂಲಕ ಸಮಾಜಕ್ಕೆ ಕೊಡುಗೆಯಾಗಿದ್ದಾರೆ. ಅವರ ಆಚಾರ, ವಿಚಾರ, ಕಲೆ, ಕಾಯಕ ನಿಷ್ಠೆಯನ್ನು ಅರಿತು ಅವರ ಮಾರ್ಗದರ್ಶನದಲ್ಲಿ ನಡೆಯೋಣ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಹೇಳಿದರು.

- Advertisement -

ಬೆಂ.ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ‘ವಿಶ್ವಮಾನವ ದಿನಾಚರಣೆ ಮತ್ತು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ’ ಅಂಗವಾಗಿ ರಾಷ್ಟ್ರ ಕವಿ ಕುವೆಂಪು ಹಾಗೂ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಿಲ್ಲಿಸಿ ಅವರು ಮಾತನಾಡಿದರು.

ರಾಷ್ಟ್ರಕವಿ ಕುವೆಂಪು ಅವರು ಜ್ನಾನಪೀಠ ಪ್ರಶಸ್ತಿ, ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿ ಇನ್ನೂ ಹಲವು ಪ್ರಶಸ್ತಿ ಹಾಗೂ ಸ್ಥಾನಮಾನಗಳಿಗೆ ಭಾಜನರಾದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
ಜಕಣಾಚಾರಿ

ಕುವೆಂಪು ಅವರ ಸಾಹಿತ್ಯ ಕೇವಲ ಕರ್ನಾಟಕಕ್ಕೆ ಸೀಮಿತವಾಗಿಲ್ಲ. ರಾಷ್ಟ್ರದಾದ್ಯಂತ ಸಾಹಿತ್ಯ ಪಸರಿಸಿದೆ. ಕನ್ನಡ ಸಾಹಿತ್ಯಕ್ಕೆ, ಸಮಾಜ ಸುಧಾರಣೆಗೆ, ಜಾತ್ಯತೀತ ವ್ಯವಸ್ಥೆಗೆ ಅವರ ಕೊಡುಗೆ ಅಪಾರವಾದದ್ದು. ಇಡೀ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯದ ಪರಿಕಲ್ಪನೆಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ವಾಸ್ತು ಶಿಲ್ಪದ ಹರಿಕಾರ ಜಗತ್ತಿನ ಅದ್ಭುತ ಶಿಲ್ಪಗಳ ಸಾಲಿನಲ್ಲಿ ನಿಲ್ಲುವ ಜಕಣಾಚಾರಿ ಅವರು ಬೇಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಅವರ ವಾಸ್ತು ಶಿಲ್ಪ ಕಲೆಯು ಈಗಲು ಪ್ರಸ್ತುತ. ಅವರ ವಾಸ್ತು ಶಿಲ್ಪ ಕೆತ್ತನೆಗಳನ್ನು ಈಗಲೂ ಯಾರಿಂದಲೂ ಮಾಡಲು ಸಾಧ್ಯವಿಲ್ಲ. ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸುತ್ತದೆ ಎಂಬ ತತ್ವ ಸಾರಿದರು. ಅವರ ಗುಣ ಮತ್ತು ಬೆಳೆದು ಬಂದ ಪರಿಶ್ರಮದ ಘಟನೆಗಳನ್ನು ತಿಳಿದು ಜೀವನದಲ್ಲಿ ಅಳವಡಿಸಿಕೊಳ್ಳುದು ಮುಖ್ಯ ಎಂದರು.

ಜಕಣಾಚಾರಿ೨


ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ ಎನ್ ಕೃಷ್ಣಪ್ಪ ಮಾತನಾಡಿ, ಕುವೆಂಪು ಅವರು ಎಲ್ಲರಿಗೂ ಚಿರಪರಿಚಿತರು. ಪ್ರತಿನಿತ್ಯ ಶಾಲಾ ಕಾಲೇಜುಗಳಲ್ಲಿ ಹಾಡುವ ಜೈ ಭಾರತ ಜನನಿಯ ತನುಜಾತೆ ನಾಡಗೀತೆಯಲ್ಲಿ ಅವರು ಎಷ್ಟರ ಮಟ್ಟಿಗೆ ಪರಿಸರವನ್ನು ಪ್ರೀತಿಸುತ್ತಿದ್ದರು ಎಂದು ನಾವು ಕಾಣಬಹುದು, ಅದೇ ರೀತಿ ರೈತ ದೇಶದ ಬೆನ್ನೆಲುಬು ಅಂತ ಹೇಳಿ ರೈತರಿಗೋಸ್ಕರ ಒಂದು ಹಾಡನ್ನು ಬರೆದರು. ನನ್ನ ಕನ್ನಡ ಭಾಷೆಯ ಮಹತ್ವವನ್ನು ಎಲ್ಲೆಡೆ ಸಾರಿದ ಮಹಾನ್ ವ್ಯಕ್ತಿ. ಬಹುಮುಖ್ಯವಾಗಿ ಕಥೆ ಕಾದಂಬರಿ ನಾಟಕ ಕವನಗಳ ಮೂಲಕ ಮಲೆನಾಡಿನ ಪ್ರಕೃತಿ ಸೌಂದರ್ಯವನ್ನು ನಮಗೆ ಉಣಬಡಿಸಿದವರು. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದವರು ಕುವೆಂಪು ಎಂದರು.

ವಾಸ್ತು ಶಿಲ್ಪ ಮತ್ತು ವಿಗ್ರಹ ಕೆತ್ತನೆಯಲ್ಲಿ ಚಿರಪರಿಚಿತರಾದ ಅಮರ ಶಿಲ್ಪಿ ಜಕಣಾಚಾರಿ ಅವರು ಬೇಲೂರು ಚನ್ನಕೇಶವ, ಹಳೇಬೀಡು ಸೋಮನಾಥೇಶ್ವರ ದೇವಾಲಾಯಗಳ ವಾಸ್ತು ಶಿಲ್ಪ ಕಲೆಯು ವಿಶ್ವ ಪಾರಂಪರಿಕ ತಾಣಗಳಲ್ಲಿ ಗುರ್ತಿಸಲಾಗಿದೆ. ಅವರ ಕಲೆಗೆ ಬೆಲೆ ಕಟ್ಟಲಾಗದು. ವಾಸ್ತು ಶಿಲ್ಪ ಕಲೆಗೆ ಅವರ ಕೊಡುಗೆ ಅಸಾಮಾನ್ಯವಾದುದು ಎಂದರು.

ಕಾರ್ಯಕ್ರಮದಲ್ಲಿ ರಂಗ ಕಹಳೆ ಕಲಾ ತಂಡದಿಂದ ‘ಕುವೆಂಪು’ರವರ ಬೊಮ್ಮನಹಳ್ಳಿ ಕಿಂದರ ಜೋಗಿ ನಾಟಕ ಪ್ರದರ್ಶನಗೊಂಡಿತು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | 1190 ರೈತರಿಗೆ ತಲುಪದ ಫಸಲ್‌ ಭಿಮಾ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಂಸದ ಸುಧಾಕರ್‌ ಸೂಚನೆ

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ಅಧಿಕಾರಿಯಾದ ರಾಮಕೃಷ್ಣಯ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಡಿ. ಅಶೋಕಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ಕನ್ನಡಪರ ಸಂಘ-ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...