ಕುವೆಂಪು ವಿವಿ ಘಟಿಕೋತ್ಸವ; ಮೂವರಿಗೆ ಗೌರವ ಡಾಕ್ಟರೇಟ್

Date:

Advertisements

ಕುವೆಂಪು ವಿಶ್ವವಿದ್ಯಾಲಯದ 33ನೇ ವಾರ್ಷಿಕ‌ ಘಟಿಕೋತ್ಸವವು ಜುಲೈ 22ರಂದು ಶಿವಮೊಗ್ಗದಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ಶಿಕ್ಷಣ, ಸಾಹಿತ್ಯ, ಕ್ರೀಡೆ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮೂವರು ಗೌರವ ಡಾಕ್ಟರೇಟ್ ನೀಡಲು ವಿಶ್ವವಿದ್ಯಾಲಯ ಮುಂದಾಗಿದೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ ವೀರಭದ್ರಪ್ಪ, “ಈ ವರ್ಷದ ಘಟಿಕೋತ್ಸವದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ. ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸದಾನಂದ ಶೆಟ್ಟಿ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಪಂಡಿತ್ ರಾಜಗುರು ಗುರುಸ್ವಾಮಿ ಕಲಿಕೇರಿ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಎಂ. ಚಂದ್ರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪುರಸ್ಕಾರ ನೀಡಲಾಗುತ್ತದೆ” ಎಂದು ತಿಳಿಸಿದ್ದಾರೆ.

“ಸದಾನಂದ ಶೆಟ್ಟಿ ಅವರು ಮೂಲತಃ ಉಡುಪಿಜಿಲ್ಲೆಯವರು. ಶಿಕ್ಷಣ ತಜ್ಞರು ಮತ್ತು ಕ್ರೀಡಾ‌ ಆಡಳಿತಗಾರರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮಂಗಳೂರು ವಿದ್ಯಾಲಯಕ್ಕೆ ಸಂಯೋಜಿಯವಾಗಿರುವ ಶ್ರಿದೇವಿ ಶಿಕ್ಷಣ ಟ್ರಸ್ಟ್ ಸ್ಥಾಪಕರೂ ಕೂಡ ಆಗಿದ್ದಾರೆ. ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿರುವ ಅವರ ಕೊಡುಗೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

Advertisements

“ಪಂಡಿತ್ ರಾಜಗುರು ಗುರುಸ್ವಾಮಿ ಕಲಿಕೇರಿ ಅವರು ಮೂಲತಃ ಬಿಜಾಪುರ ಜಿಲ್ಲೆಯ ಕಲಿಕೇರಿ ಗ್ರಾಮದವರು. ಗಾನಭಾರತಿ, ಭಾವ ಭಗವದ್ಗೀತೆ ಮತ್ತಿತರ ಕವನ ಸಂಕಲನಗಳು, ಚಿನ್ಮಯ, ಮೌನ ತಪಸ್ವಿ ಕಾದಂಬರಿ, 21ಷಟ್ಪದಿ ಕಾವ್ಯಗಳನ್ನು ಪ್ರಕಟಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರೂ ಆಗಿದ್ದಾರೆ. ಅವರು ಸುಮಾರು ಆರು ಸಾವಿರಕ್ಕೂ‌ಅಧಿಕ ಗೀತಗಾಯನ ಕಛೇರಿ ನಡೆಸಿಕೊಟ್ಟಿದ್ದಾರೆ. ಇವರ ಸಾಹಿತ್ಯ, ಮತ್ತು ಸಂಗೀತ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಎಂ. ಚಂದ್ರಪ್ಪ ಅವರು ಮೂಲತಃ ದಾವಣಗೆರೆ ಜಿಲ್ಲೆಯವರು. ರಾಜಕಾರಣಿಯೂ ಆಗಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ದೇವರಾಜ್ ಅರಸ್ ಶಿಕ್ಷಣ ಸಮೂಹವನ್ನು ಸ್ಥಾಪಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶಾಸಕಾಂಗ ಸಮಿತಿ ಮತ್ತು ಕರ್ನಾಟಕ‌ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜನಪ್ರತಿನಿಧಿಯಾಗಿ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿರುತ್ತಾರೆ. ಇವರ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಕೆಲಸಗಳನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ” ಎಂದು ವಿವರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X