ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’-2024′ ಕ್ರಿಕೆಟ್ ಪಂದ್ಯ ಜನವರಿ 5ರಿಂದ 7ರವರೆಗೆ ಅಡ್ಯಾರಿನ
ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ಕ್ಯಾ.ಪ್ರಾಂಜಲ್ ಸ್ಮರಣೆಯೊಂದಿಗೆ ನಡೆಯಿತು.
ಪಂದ್ಯಾವಳಿಯಲ್ಲಿ ಬೆಂಗಳೂರು ನಗರ ಕಾರ್ಯನಿರತ ಪತ್ರಕರ್ತರ ಸಂಘ ಪ್ರಥಮ ಹಾಗೂ ಹಾಸನ ಕಾರ್ಯನಿರತ ಪತ್ರಕರ್ತರ ತಂಡ ದ್ವಿತೀಯ ಹಾಗೂ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೃತೀಯ ಪ್ರಶಸ್ತಿ ಗಳಿಸಿವೆ.
ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ದ.ಕ ಜಿಲ್ಲಾ ಧಿಕಾರಿ ಮುಲ್ಲೈ ಮುಗಿಲನ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಶುಭಾಷಯ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಧಾರವಾಡ | ಸಹಾಯಕ ಪ್ರಾಧ್ಯಾಪಕ ಹುದ್ದೆ; ಆರು ಸಾವಿರ ಮಂದಿ ನೇಮಕಕ್ಕೆ ಅಭ್ಯರ್ಥಿಗಳ ಆಗ್ರಹ
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ,ವೇದಿಕೆ ಯಲ್ಲಿಕಿಶೋರ್ ಆಳ್ವ,ಸುಚರಿತ ಶೆಟ್ಟಿ, ಇಫ್ತಿಕಾರ್ ಅಲಿ,ಮೂಡಾ ಅಧ್ಯಕ್ಷ ಮನ್ಸೂರ್ ಅಲಿ,ಪೊಲೀಸ್ ಅಧಿಕಾರಿ ಗೋಪಾಲ್ ಕುಂದರ್, ಲೀಲಾಕ್ಷ ಕರ್ಕೇರಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಬಹುತೇಕರು ಇದ್ದರು.