ರಾಯಚೂರು | ಬ್ರಿಜ್‌ ಭೂಷಣ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Date:

  • ಮಹಿಳೆಯರಿಗೆ ರಕ್ಷಣೆ ಇಲ್ಲದ ದೇಶ ಅಭಿವೃದ್ಧಿ ಆಗುವುದಿಲ್ಲ
  • ಇಂತಹ ಸರ್ಕಾರವನ್ನು ಬುಡ ಸಮೇತ ಕಿತ್ತು ಎಸೆಯಬೇಕು

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ವಿರೋಧಿಸಿ ಮತ್ತು ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಿಂಧನೂರು ನಗರದ ಮಹಾತ್ಮ ಗಾಂಧಿ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಮಿನಿ ವಿಧಾನಸೌಧದ ವರಗೆ ಘೋಷಣೆ ಕೂಗುವ ಮೂಲಕ ಮೆರವಣಿಗೆ ನಡೆಸಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಸಲ್ಲಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ವಿಧ್ಯಾರ್ಥಿ ಸಂಘಟನೆಯ ಮುಖಂಡರಾದ ಪ್ರಗತಿ ಬೂದಿಹಾಳ ಮಾತನಾಡಿ, “ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಬ್ರಿಜೇಶ್ ಭೂಷಣ್ ನನ್ನು ತಕ್ಷಣ ಬಂಧಿಸಬೇಕು. ಈ ರೀತಿ ನಿರ್ಲಕ್ಷ್ಯ ಹೊಂದಿರುವ ಕೇಂದ್ರ ಸರ್ಕಾರ ಮಹಿಳೆಯರನ್ನು ಎಷ್ಟರಮಟ್ಟಿಗೆ ಸುರಕ್ಷಿತವಾಗಿ ಕಾಪಾಡುತ್ತದೆ” ಎಂದು ಪ್ರಶ್ನಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರಧಾನಿ ಮೋದಿ ಅವರು ಬೇಟಿ ಬಚಾವೋ ಬೇಟಿ ಪಡಾವೋ ಎನ್ನುತ್ತಾರೆ. ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವವರ ಮೇಲೆ ಪ್ರಕರಣ ದಾಖಲಾಗುತ್ತಿದೆ. ಆರೋಪಿಗೆ ಯಾವುದೇ ತರಹ ಬಂಧನವಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಮಳೆಹಾನಿ | ಪರಿಹಾರ ಕ್ರಮ ತ್ವರಿತವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಸೂಚನೆ

“ಮಹಿಳೆಯರಿಗೆ ಯಾವ ದೇಶದಲ್ಲಿ ರಕ್ಷಣೆ ಇರುವುದಿಲ್ಲವೋ ಆ ದೇಶ ಉದ್ದರವಾಗಲ್ಲ. ಇಂತಹ ಸರ್ಕಾರವನ್ನು ಬುಡದಿಂದ ಕಿತ್ತೆಸೆಯಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ವಿಧ್ಯಾರ್ಥಿ ಸಂಘಟನೆ ತಾಲೂಕು ಸಂಚಾಲಕ ಚಾಂದಪಾಶ, ಸಮತಾ, ಪದ್ಮಾ, ಶಾಹೀನ್, ರವಿ ನವಲಹಳ್ಳಿ, ಸ್ಟೂಡೆಂಟ್ ಇಸ್ಲಾಮಿಕ್ ಸಂಘಟನೆ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ ಕಾರ್ಯಕರ್ತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...