ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ಟೈಲ್ಸ್ ಮತ್ತು ಗ್ರಾನೈಟ್ ಹಾಗೂ ಇತರೆ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಗುರುವಾರ ಆಯೋಜಿಸಿದ್ದ ಅದ್ದೂರಿ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಜಗನ್ನಾಥ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಕಾರ್ಮಿಕರು ಪರಿಶ್ರಮ ಪಟ್ಟಿದ್ದರಿಂದಲೇ ದೇಶದ ಅಭಿವೃದ್ಧಿ ಸಾಧ್ಯವಾಗಿದೆ. ದೇಶದಲ್ಲಿ ಕಾರ್ಮಿಕರಿಗೆ ದೊರೆಯಬೇಕಾದ ಸೌಕರ್ಯಗಳು ಇದುವರೆಗೆ ದೊರೆತಿಲ್ಲ. ಮೂಲ ಸೌಕರ್ಯಗಳ ಕೊರತೆಯಿಂದ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಬಹಳಷ್ಟು ಯೋಜನೆಗಳನ್ನು ರೂಪಿಸಿದೆ ಎಂದು ಹೇಳಿದರು.

ಇದೇ ವೇಳೆ ಕಾರ್ಮಿಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ, ಉಪಾಧ್ಯಕ್ಷ ಜಗದೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಧನಂಜಯಚಾರಿ, ರಾಜ್ಯ ಕಾರ್ಯಧ್ಯಕ್ಷರಾದ ಅಗ್ರಹಾರ ಮೋಹನ್ ಎಸ್, ರಾಜ್ಯ ಖಜಾಂಚಿ ಉದಯ್ ಸಿಂಗ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಂಗರಾಜು, ರಾಜ್ಯ ಸಹ ಕಾರ್ಯದರ್ಶಿ, ಅಬ್ದುಲ್ ಕಲೀಮ್, ರಾಜ್ಯ ಸಂಚಾಲಕರಾದ ಶ್ರೀನಿವಾಸ್, ತಾಲೂಕು ಅಧ್ಯಕ್ಷರಾದ ನರಸಿಂಹಮೂರ್ತಿ, ನಗರ ಗೌರವಾಧ್ಯಕ್ಷರಾದ ಶ್ರೀನಿವಾಸ್ ಎಲ್, ನಗರಾಧ್ಯಕ್ಷರಾದ ಸಾಧಿಕ್, ಖಜಾಂಚಿ ತಬ್ರೆಜ್, ಸಂಘಟನಾ ಕಾರ್ಯದರ್ಶಿ ನಾಗೇಂದ್ರ ಬಾಬು, ಮುಜಾಹಿದ್ ಪಾಷಾ, ಚೇಳೂರು ತಾಲೂಕು ಅಧ್ಯಕ್ಷರಾದ ವೆಂಕಟರಾಮ್ ರೆಡ್ಡಿ, ಕಲೀಮ್ ಪಾಷಾ, ರಘುನಾಥ್, ಮಂಜುನಾಥ್ ಸೇರಿದಂತೆ ಮತ್ತಿತರರು ಇದ್ದರು.