ಶಿವಮೊಗ್ಗ | ಗೃಹ ಸಚಿವರ ಕ್ಷೇತ್ರದಲ್ಲಿ ಮೂಲ ಸೌಕರ್ಯ ಕೊರತೆ; ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Date:

  • ರಸ್ತೆ ಹದಗೆಟ್ಟಿರುವ ಕಾರಣ ಕಾಲ್ನಡಿಗೆಯಲ್ಲೂ ಹೋಗುವುದು ಕಷ್ಟ
  • ಇಪ್ಪತ್ತು ವರ್ಷಗಳಿಂದ ಮನವಿ ಸಲ್ಲಿಸುತ್ತವೇ ಇರುವ ಗ್ರಾಮಸ್ಥರು

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಿಗೆ ರಸ್ತೆ ಮತ್ತು ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಂಬ್ಳೆಬೈಲು, ಮಾದ್ಲುಮನೆ, ಸಣ್ಣಮನೆ, ಹೊಸಕೊಪ್ಪ, ಕಪ್ಪೆಹೊಂಡ, ಆಲೂರು, ಹತ್ತಳ್ಳಿ, ಚಿಕ್ಕಮತ್ತಿಗ, ಕಲ್ಲಳ್ಳಿ, ಶಿವಳ್ಳಿಕೊಪ್ಪ, ದೇಮ್ಲಾಪುರ, ಮಳಲಿಮಕ್ಕಿ, ಕೋಣಂದೂರು ಸಂಪರ್ಕಿಸುವ ನಾಲ್ಕೈದು ಕಿ.ಮೀ ರಸ್ತೆಯು ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಸ್ತೆ ಹದಗೆಟ್ಟಿರುವ ಕಾರಣ ಕಾಲ್ನಡಿಗೆಯಲ್ಲೂ ಹೋಗುವುದು ಕಷ್ಟವಾಗಿದೆ. ಆರೋಗ್ಯ ತುರ್ತು ಸಂದರ್ಭದಲ್ಲಿ ಯಾವ ಆಟೋ ಚಾಲಕರು, ಆ್ಯಂಬುಲೆನ್ಸ್, ಶಾಲಾ ವಾಹನಗಳು, ಈ ರಸ್ತೆಯಲ್ಲಿ ಬರಲು ಒಪ್ಪದೆ ಇರುವುದರಿಂದ ನಿತ್ಯ ಸಂಕಷ್ಟದಲ್ಲಿ ದಿನ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಹದಗೆಟ್ಟಿರುವ ರಸ್ತೆಯನ್ನು ದುರಸ್ತಿ ಮಾಡುವಂತೆ ಒತ್ತಾಯಿಸಿ ಇಲ್ಲಿನ ಜನಪ್ರತಿನಿಧಿಗಳಿಗೆ ಕಳೆದ ಇಪ್ಪತ್ತು ವರ್ಷಗಳಿಂದ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನೊಂದಿರುವ ಗ್ರಾಮಸ್ಥರು ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಮೂಲಸೌಕರ್ಯ ಕೊರತೆ; ಚುನಾವಣೆ ಬಹಿಷ್ಕರಿಸುವುದಾಗಿ ನೊಂದ ಗ್ರಾಮಸ್ಥರ ಎಚ್ಚರಿಕೆ

ಈ ಕುರಿತು ಲಯನ್ಸ್ ನಾಗೇಶ್ ಮಾತನಾಡಿ, “ಈ ಭಾಗದ ರಸ್ತೆಗಳು ದುರಸ್ತಿಯಾಗದೇ ಹಲವು ವರ್ಷಗಳೇ ಕಳೆದಿವೆ. ಒಂದು ಕೋಟಿ ರೂಪಾಯಿ ಅನುದಾನ ಬಂದಿದೆ ಎಂದು ಹೇಳಿದ್ದರು. ಆದರೆ, ಒಂದು ರೂಪಾಯಿಯೂ ಬಂದಿಲ್ಲ. ಹಲವು ಗ್ರಾಮಗಳನ್ನು ಸಂಪರ್ಕಿಸುವ ಈ ರಸ್ತೆ ದುರಸ್ತಿಯಾಗದೇ ಉಳಿದಿರುವುದು ದುರಂತ. ಹಿಂದೆ ಅನೇಕ ಘಟನೆಗಳು ಇಲ್ಲಿ ನಡೆದಿವೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇದೇ ಕ್ಷೇತ್ರದವರು. ಚುನಾವಣಾ ಬಹಿಷ್ಕಾರದಿಂದ ನಾವೆಂದೂ ಹಿಂದೆ ಸರಿಯುವುದಿಲ್ಲ” ಎಂದರು.

ಶಿವಾನಂದ ಎಂಬುವರು ಮಾತನಾಡಿ, “ನಾನು ಮೊದಲ ಸಲ ಗ್ರಾಮ ಪಂಚಾಯಿತಿಗೆ ಆಯ್ಕೆ ಆಗಿದ್ದೇನೆ, ಒಂದು ರೂಪಾಯಿ ಕೂಡ ಅನುದಾನ ಇಲ್ಲ. ನಮ್ಮೂರಿಗೆ ನೀರಿಲ್ಲ, ರಸ್ತೆ ಇಲ್ಲ, ಬೀದಿ ದೀಪ ಇಲ್ಲ. ತಾಲೂಕಿನಲ್ಲಿ ಎಲ್ಲ ಅಭಿವೃದ್ಧಿ ಆಗಿದೆ, ಶಾಂತವೇರಿ ಗೋಪಾಲಗೌಡ, ಕುವೆಂಪು ಹುಟ್ಟಿದ್ದು ಎಂದು ಭಾಷಣ ಮಾಡ್ತಾರೆ. ಆದರೆ, ಅಭಿವೃದ್ಧಿ ಮಾತ್ರ ಮರಿಚಿಕೆ. ಈ ವರ್ಷ ಯಾವುದೇ ಕಾರಣಕ್ಕೂ ಮತ ಹಾಕೋದಿಲ್ಲ” ಎಂದು ಎಚ್ಚರಿಕೆ ನೀಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಮತ್ತಿಬ್ಬರ ಬಂಧನ

20 ದಿನದ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು...

ಶಿವಮೊಗ್ಗ | ಸಿಡಿಲು ಬಡಿದು ಸಹೋದರರ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ...

ಉತ್ತರ ಕನ್ನಡ | ಅವೈಜ್ಞಾನಿಕ ಮೀನುಗಾರಿಕೆ; ಸಮುದ್ರದಲ್ಲಿ ಮೀನು ಕ್ಷಾಮ

ಬರ ಕೇವಲ ರೈತರನ್ನು ಕಾಡುತ್ತಿಲ್ಲ, ಸಮುದ್ರ ಮೀನುಗಾರಿಕೆಗೂ ಈ ಬಾರಿ ಬರ...

‘ಬುಡಕಟ್ಟು ಸಂಶೋಧನಾ ಸಂಸ್ಥೆ’ಯ ನಿರ್ದೇಶಕನ ಬಿಡುಗಡೆ ಒತ್ತಾಯ

ʼಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆʼಯನ್ನು ಅಮಾಯಕ ಆದಿವಾಸಿಗಳಿಗಾಗಿ ಉಳಿಸಬೇಕು. ಆದರೆ,...