ಅನುದಾನ ಕೊರತೆ: 20 ವರ್ಷಗಳಿಂದ ತೆವಳುತ್ತಿದೆ ಹಾಸನದ ವಿಮಾನ ನಿಲ್ದಾಣ ಕಾಮಗಾರಿ

Date:

ಉಡಾನ್ (UDAN) ಯೋಜನೆಯಡಿ ಹಾಸನದಲ್ಲಿ ನಿರ್ಮಾಣವಾಗುತ್ತಿರುವ ‘ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ’ದ ಕಾಮಗಾರಿಯು ಅನುದಾನದ ಕೊರತೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯ ಅಡೆತಡೆಗಳಿಂದ ತೆವಳುತ್ತಿದೆ. ಟರ್ಮಿನಲ್ ಕಟ್ಟಡ, ಏರ್ ಟ್ರಾಫಿಕ್ ಕಂಟ್ರೋಲ್ ಟವರ್ (ATC), ರನ್-ವೇ ಹಾಗೂ ಏಪ್ರನ್ ಸೇರಿದಂತೆ 80%ಕ್ಕಿಂತ ಹೆಚ್ಚು ಕೆಲಸಗಳು ಪೂರ್ಣಗೊಂಡಿವೆ. ಆದರೂ, ಸದ್ಯದಲ್ಲೇ ಕಾಮಗಾರಿ ಪರಿಪೂರ್ಣವಾಗಿ ಪೂರ್ಣಗೊಳ್ಳುವ ಸೂಚನೆ ಇದ್ದಂತಿಲ್ಲ.

- Advertisement -

ವಿಮಾನ ನಿಲ್ದಾಣವು ಹಾಸನ ನಗರದಿಂದ 6 ಕಿಮೀ ದೂರದಲ್ಲಿರುವ ಭುವನಹಳ್ಳಿ ಬಳಿ 516 ಎಕರೆ ಪ್ರದೇಶದಲ್ಲಿ ತಲೆ ಎತ್ತುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು 2006ರಲ್ಲಿ ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಆಗಿನ ಸರ್ಕಾರವು 244.33 ಎಕರೆ ಖರಾಬು ಜಮೀನು ಸೇರಿದಂತೆ ಒಟ್ಟು 1,224.16 ಎಕರೆ ಪ್ರದೇಶವನ್ನು ಈ ಉದ್ದೇಶಕ್ಕಾಗಿ ಮೀಸಲಿಟ್ಟಿತ್ತು. ಮೂಲ ಯೋಜನೆಯಲ್ಲಿ ವಾಯುಯಾನ ತರಬೇತಿ ಕೇಂದ್ರ, ಎಂಆರ್‌ಒ (MRO) ಸೌಲಭ್ಯ, ಇನ್‌ಲ್ಯಾಂಡ್ ಕಂಟೈನರ್ ಕೇಂದ್ರ, ಗಾಲ್ಫ್ ಕೋರ್ಸ್, ಹೋಟೆಲ್ ಮತ್ತು ಕಲ್ಯಾಣ ಸೌಲಭ್ಯಗಳು, ಟೆಕ್ ಪಾರ್ಕ್, ಕಾರ್ಗೋ ಟರ್ಮಿನಲ್ ಹಾಗೂ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ರಫ್ತುಗಾಗಿ ಬೃಹತ್ ಕೋಲ್ಡ್‌ ಸ್ಟೋರೇಜ್‌ಗಳನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿತ್ತು. ಆದರೆ, ನಂತರದ ದಿನಗಳಲ್ಲಿ ರಾಜ್ಯ ಸರ್ಕಾರವು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲ ಯೋಜನೆಯನ್ನು ಕೈಬಿಟ್ಟು, ಕೇವಲ ಮೂಲಭೂತ ಸೌಲಭ್ಯಗಳಿರುವ ‘ನೋ-ಫ್ರಿಲ್’ (no-frill) ವಿಮಾನ ನಿಲ್ದಾಣ ನಿರ್ಮಾಣಕ್ಕೆ ನಿರ್ಧರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಆ ಬಳಿಕ, ಈ ಯೋಜನೆಯನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ‘ಉಡಾನ್’ ಯೋಜನೆಯಡಿ ತನ್ನ ವ್ಯಾಪ್ತಿಗೆ ತೆಗೆದುಕೊಂಡಿತು. ಆದರೆ, ವಿಮಾನ ನಿಲ್ದಾಣದ ಸಮೀಪವೇ ಹಾದುಹೋಗುವ ಹೈ-ಟೆನ್ಷನ್ ವಿದ್ಯುತ್ ತಂತಿಗಳಿಂದಾಗಿಯೂ ಯೋಜನೆ ವಿಳಂಬವಾಯಿತು. ಪಕ್ಕದ ಜಮೀನಿನ ರೈತರು ತಮ್ಮ ಜಮೀನಿನಲ್ಲಿ ವಿದ್ಯುತ್‌ ಕಂಬಗಳನ್ನು ನಿರ್ಮಿಸಲು ಮುಂಗಡವಾಗಿ ಹೆಚ್ಚಿನ ಪರಿಹಾರ ನೀಡುವಂತೆ ಒತ್ತಾಯಿಸಿದ್ದರು. ಅಂತಿಮವಾಗಿ ಅಧಿಕಾರಿಗಳು ರೈತರನ್ನು ವಿಶ್ವಾಸಕ್ಕೆ ಪಡೆದು ವಿದ್ಯುತ್‌ ಕಂಬಗಳನ್ನು ನಿರ್ಮಿಸಿ, ಹೈ-ಟೆನ್ಷನ್‌ ತಂತಿಗಳನ್ನು ಸ್ಥಳಾಂತರಿಸಿದ್ದಾರೆ.

ಆದಾಗ್ಯೂ, ಯೋಜನೆಗೆ ಸರಿಯಾದ ಸಮಯಕ್ಕೆ ಅನುದಾನ ಬಿಡುಗಡೆಯಾಗದೇ ಇರುವ ಕಾರಣ, ಕಾಮಕಾರಿ ಕುಂಟುತ್ತಿದೆ. ಜೊತೆಗೆ, ವಿಮಾನ ನಿಲ್ದಾಣ, ಸುತ್ತಲಿನ ಗ್ರಾಮಗಳು ಹಾಗೂ ಮತ್ತು ಹಾಸನ ನಗರದ ನಡುವೆ ಸಂಪರ್ಕ ರಸ್ತೆಗಳನ್ನು ನಿರ್ಮಿಸಲು ಅಗತ್ಯವಿರುವ ಹೊಸ ಭೂಸ್ವಾಧೀನಕ್ಕಾಗಿ 143.67 ಕೋಟಿ ರೂ.ಗಳು ಅಗತ್ಯವಿರುವುದಾಗಿ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (KSIIDC) ಹೇಳಿದೆ. ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಬಾಕಿ ಕೆಲಸಗಳನ್ನು ಪೂರ್ಣಗೊಳಿಸಲು ಇನ್ನೂ 200 ಕೋಟಿ ರೂ.ಗಳ ಅವಶ್ಯಕತೆಯಿದೆ ಎಂದು ವರದಿಯಾಗಿದೆ.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಸದಸ್ಯರ ಪ್ರಕಾರ, ಈ ಯೋಜನೆ ಪೂರ್ಣಗೊಂಡರೆ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ. ರಾಜಕೀಯ ಇಚ್ಛಾಶಕ್ತಿಯಿದ್ದರೆ ಈ ವಿಮಾನ ನಿಲ್ದಾಣವು ದಶಕಗಳ ಹಿಂದೆಯೇ ಪೂರ್ಣಗೊಳ್ಳಬಹುದಿತ್ತು ಎಂದಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಕೋಮು ಸಂಘರ್ಷ; 14 ಜನರ ಬಂಧನ

ಕಾರಟಗಿ ತಾಲ್ಲೂಕಿನ ಹಾಲಸಮುದ್ರ ಗ್ರಾಮದಲ್ಲಿ ಗೌರಿ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ ಸಂದರ್ಭದಲ್ಲಿ,...

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ...

ಯಾದಗಿರಿ | ಬಂಡೋಳ್ಳಿಯಲ್ಲಿ ವಾಲ್ಮೀಕಿ ಶಾಖಾ ಮಠಕ್ಕೆ ಅಡಿಗಲ್ಲು; ಶಿಕ್ಷಣಕ್ಕೆ ₹25 ಕೋಟಿ ಅನುದಾನ

ಸುರಪುರ ಸಂವಿಧಾನ ಒದಗಿಸಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಹಾಗೂ ಸರ್ಕಾರದ ವಿವಿಧ...