ಬೀದರ್‌ | ನಿರ್ವಹಣೆ ಕೊರತೆ : ಪಾಳು ಬಿದ್ದ ʼಶುದ್ಧ ನೀರಿನ ಘಟಕಗಳುʼ

Date:

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಮಹತ್ವದ ಉದ್ದೇಶದಿಂದ ಸ್ಥಾಪಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡುವಲ್ಲಿ ಆಡಳಿತ ವ್ಯವಸ್ಥೆ ಎಡವಿದೆ ಎಂಬ ಆರೋಪಗಳಿವೆ.

- Advertisement -

ಜಿಲ್ಲೆಯಲ್ಲಿ ಒಟ್ಟು 185 ಗ್ರಾಮ ಪಂಚಾಯತ್‌ಗಳು, 8 ತಾಲೂಕು ಕೇಂದ್ರಗಳಿವೆ. ಇವುಗಳಲ್ಲಿ ಒಟ್ಟು 391 ಶುದ್ಧ ನೀರಿನ ಘಟಕಗಳ ಪೈಕಿ 292 ಕಾರ್ಯನಿರ್ವಹಿಸುತ್ತಿದೆ. ಉಳಿದಿದ್ದು ನಿರ್ವಹಣೆಯಿಲ್ಲದೆ ಕೆಟ್ಟು ನಿಂತಿವೆ, ಇನ್ನೂ ಕೆಲವೆಡೆ ದುರಸ್ತಿ ಮಾಡದಷ್ಟು ಹಾಳಾಗಿವೆ. ಒಟ್ಟು ಘಟಕಗಳಲ್ಲಿ 298 ಗ್ರಾಮ ಪಂಚಾಯತ್‌ಗಳಿಗೆ ಹಸ್ತಾಂತರಿಸಲಾಗಿದೆ, ಇನ್ನುಳಿದ 93 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ವಹಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
WhatsApp Image 2024 08 23 at 3.12.43 PM 1
ಹುಮನಾಬಾದ್‌ ತಾಲೂಕಿನ ಮೊಳಕೇರಾ ಗ್ರಾಮದ ಶುದ್ಧ ನೀರಿನ ಘಟಕದ ಸುತ್ತ ಮುಳ್ಳು, ಹುಲ್ಲಿನ ಗಿಡ ಬೆಳೆದಿರುವುದು.

ಕೆಲ ವರ್ಷಗಳ ಹಿಂದೆ ಗ್ರಾಮೀಣ ಪ್ರದೇಶದ ವಿವಿಧ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿತ್ತು. ₹5 ನಾಣ್ಯ ಹಾಕಿ 20 ಲೀ. ನೀರು ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ನಿರ್ವಹಣೆ, ನೀರಿನ ಮೂಲ ಇಲ್ಲದರಿಂದ ಜಿಲ್ಲೆಯ 99ಕ್ಕೂ ಹೆಚ್ಚು ಘಟಕಗಳು ಕೆಲಸ ನಿಲ್ಲಿಸಿ ವರ್ಷಗಳೇ ಕಳೆದಿದೆ. ಈ ಪೈಕಿ ಕೆಲವು ದುರಸ್ತಿಯಾದರೆ, ಹಲವು ಘಟಕಗಳು ಉದ್ಘಾಟನೆಯಾಗಿ ವರ್ಷಗಳೇ ಗತಿಸಿದ್ದರೂ ತಾಂತ್ರಿಕ ದೋಷದಿಂದ ಕಾರ್ಯನಿರ್ವಹಿಸದೇ ತುಕ್ಕು ಹಿಡಿದಿವೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(ಕೆಆರ್‌ಐಡಿಎಲ್), ಕೋಪರೇಟಿವ್‌ ಸೇರಿದಂತೆ ವಿವಿಧ ಸಂಸ್ಥೆಗಳು ಶುದ್ಧ ಕುಡಿಯುವ ನೀರಿನ ಘಟಕಗಳು ಅಳವಡಿಸಲಾಗಿದೆ. ಈ ಪೈಕಿ ಜಿಲ್ಲೆಯಲ್ಲಿ ಒಟ್ಟು ಶುದ್ಧ ನೀರಿನ ಘಟಕಗಳ ಬಗ್ಗೆ 2024ರ ಜೂನ್‌ ತಿಂಗಳ ಪ್ರಗತಿ ವರದಿಯಲ್ಲಿ ಇಲಾಖೆ ಮಾಹಿತಿ ನೀಡಿದೆ.

ಒಟ್ಟು 391 ಶುದ್ಧ ಕುಡಿಯುವ ನೀರಿನ ಘಟಕಗಳು :

ಔರಾದ-ಕಮಲನಗರ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 110 ಶುದ್ಧ ನೀರಿನ ಘಟಕಗಳು ಸ್ಥಾಪಿಸಲಾಗಿದ್ದು, ಇವುಗಳಲ್ಲಿ 55 ಘಟಕಗಳ ನಿರ್ವಹಣೆಯನ್ನು ಗ್ರಾ.ಪಂ.ಗಳಿಗೆ ಒಪ್ಪಿಸಲಾಗಿದೆ, ಇನ್ನುಳಿದ 55 ಘಟಕಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ವಹಣೆಯಲ್ಲಿವೆ. 110 ಘಟಕಗಳ ಪೈಕಿ 82 ಕಾರ್ಯನಿರ್ವಹಿಸುತ್ತಿದೆ, ಉಳಿದ 28 ಘಟಕಗಳು ಹಾಳಾಗಿವೆ.

ಬಸವಕಲ್ಯಾಣ-ಹುಲಸೂರ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 65 ಶುದ್ಧ ನೀರಿನ ಘಟಕಗಳು ಸ್ಥಾಪಿಸಲಾಗಿದ್ದು, ಇವುಗಳಲ್ಲಿ 55 ಘಟಕಗಳ ನಿರ್ವಹಣೆಯನ್ನು ಗ್ರಾ.ಪಂ.ಗಳು ಮಾಡುತ್ತಿವೆ, ಉಳಿದ 10 ಘಟಕಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ವಹಣೆಯಲ್ಲಿವೆ. 65 ಘಟಕಗಳ ಪೈಕಿ 39 ಕಾರ್ಯನಿರ್ವಹಿಸುತ್ತಿದೆ, ಉಳಿದ 26 ಘಟಕಗಳು ದುರಸ್ತಿ ಇಲ್ಲದೇ ಕೆಟ್ಟು ನಿಂತಿವೆ.

WhatsApp Image 2024 08 23 at 3.11.41 PM
ಕಮಲನಗರ ತಾಲೂಕಿನ ಖೇರ್ಡಾ(ಬಿ) ಗ್ರಾಮದಲ್ಲಿ ಸುಟ್ಟು ಕರಕಲಾದ ಶುದ್ಧ ನೀರಿನ ಘಟಕ

ಭಾಲ್ಕಿ ತಾಲೂಕಿನಲ್ಲಿ 64 ಶುದ್ಧ ನೀರಿನ ಘಟಕಗಳಿದ್ದು, ಇವುಗಳಲ್ಲಿ 41 ಘಟಕಗಳನ್ನು ಗ್ರಾಮ ಪಂಚಾಯಿತಿಗಳ ನಿರ್ವವಹಣೆಯಲ್ಲಿವೆ. ಉಳಿದ 23 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ವಹಿಸುತ್ತಿದೆ. ಒಟ್ಟು 64 ಘಟಕಗಳಲ್ಲಿ 60 ಕಾರ್ಯನಿರ್ವಹಿಸುತ್ತಿದ್ದು, 4 ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ.

ಬೀದರ್ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಒಟ್ಟು 74 ಘಟಕಗಳಿದ್ದು, ಇವುಗಳಲ್ಲಿ 73 ಘಟಕಗಳನ್ನು ಗ್ರಾಮ ಪಂಚಾಯಿತಿಗಳ ನಿರ್ವವಹಣೆಯಲ್ಲಿವೆ. ಕೇವಲ 1 ಮಾತ್ರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ವಹಿಸುತ್ತಿದೆ. ಒಟ್ಟು 74 ಘಟಕಗಳಲ್ಲಿ 58 ಕಾರ್ಯನಿರ್ವಹಿಸುತ್ತಿದ್ದು, 16 ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ.

ಹುಮನಾಬಾದ್‌-ಚಿಟಗುಪ್ಪ ತಾಲೂಕಿನಲ್ಲಿ 78 ಘಟಕಗಳಿದ್ದು, ಈ ಪೈಕಿ 74 ಘಟಕಗಳನ್ನು ಗ್ರಾಮ ಪಂಚಾಯಿತಿಗಳ ನಿರ್ವವಹಣೆಯಲ್ಲಿವೆ. 4 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ವಹಿಸುತ್ತಿದೆ. 78 ಘಟಕಗಳಲ್ಲಿ 53 ಕಾರ್ಯನಿರ್ವಹಿಸುತ್ತಿದ್ದು, 25 ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ.

ದುರಸ್ತಿ ಕಾಣದ ಘಟಕಗಳಿಗೂ ದಾಖಲೆಯಲ್ಲಿ ʼವರ್ಕಿಂಗ್‌ʼ :

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೀಡಿದ ಮಾಹಿತಿ ಪಡೆದು ಈದಿನ.ಕಾಮ್‌ ವಿವಿಧ ತಾಲೂಕು ವ್ಯಾಪ್ತಿಯಲ್ಲಿ ಅಳವಡಿಸಲಾದ ಶುದ್ಧ ನೀರಿನ ಘಟಕಗಳ ಸಮೀಕ್ಷೆ ಅಭಿಯಾನ ನಡೆಸಿತು. ಇಲಾಖೆ ನೀಡಿದ ಮಾಹಿತಿ ಪ್ರಕಾರ ಬಹುತೇಕ ಕಡೆಗಳಲ್ಲಿ ಶುದ್ಧ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಸತ್ಯ ಬಯಲಾಗಿದ್ದು, ಘಟಕಗಳು ಕಾರ್ಯನಿರ್ವಹಿಸುತ್ತಿವೆ ಎಂದು ದಾಖಲೆಯಲ್ಲಿದೆ, ಆದರೆ ವಾಸ್ತವದಲ್ಲಿ ಘಟಕಗಳು ಕೆಟ್ಟು ನಿಂತಿರುವುದು ಕಂಡು ಬಂದಿದೆ.

ಔರಾದ್‌ ತಾಲೂಕಿನ ಚಿಂತಾಕಿ, ಶೆಂಬೆಳ್ಳಿ, ಬೆಳಕುಣಿ(ಚೌ) ಹಾಗೂ ಸಂತಪೂರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿದೆ ಎಂದು ದಾಖಲೆಯಲ್ಲಿದೆ. ಆದರೆ ಫ್ಯಾಕ್ಟ್‌ ಚೆಕ್‌ ಮಾಡಿದಾಗ ಅಲ್ಲಿನ ಘಟಕಗಳು ಸಮಪರ್ಕ ನಿರ್ವಹಣೆಯಿಲ್ಲದೆ ಹಾಳಾಗಿರುವುದು ಗೊತ್ತಾಗಿದೆ. ಇದೊಂದು ತಾಲೂಕಿನಲ್ಲಿ ಅಷ್ಟೇ ಅಲ್ಲದೇ ಉಳಿದ ಬಹುತೇಕ ಕಡೆ ಶುದ್ಧ ನೀರಿನ ಘಟಕಗಳು ಬಂದ್‌ ಇರುವುದು ಈದಿನ.ಕಾಮ್ ಅಭಿಯಾನದಲ್ಲಿ ಬೆಳಕಿಗೆ ಬಂದಿದೆ.

ಅಧಿಕಾರಿಗಳ ನಿರ್ಲಕ್ಷ್ಯ; ಪಾಳು ಬಿದ್ದ ಘಟಕಗಳು :

ಸರ್ಕಾರ ಘಟಕವೊಂದಕ್ಕೆ ಅಂದಾಜು ₹12 ಲಕ್ಷ ರೂ. ವೆಚ್ಚದಿಂದ ಶುದ್ಧ ನೀರಿನ ಘಟಕ ನಿರ್ಮಿಸಿ ಹಲವು ವರ್ಷಗಳೇ ಕಳೆದಿವೆ. ಆದರೆ ಅಧಿಕಾರಿಗಳ ನಿಷ್ಕಾಳಜಿ, ತಾಂತ್ರಿಕ ಸಮಸ್ಯೆ, ಸೂಕ್ತ ನಿರ್ವಹಣೆ ಕೊರತೆಯಿಂದ ಜನರಿಗೆ ಉಪಯೋಗಕ್ಕೆ ಬಾರದಂತಾಗಿವೆ. ಕೆಲವು ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳು ನಿರ್ಮಿಸಿದಾಗಿನಿಂದ ಬಾಗಿಲು ತೆರೆದಿಲ್ಲ. ಇನ್ನು ಹಲವೆಡೆ ಘಟಕಗಳ ಸುತ್ತ ಗಿಡಗಂಟಿಗಳು ಬೆಳೆದುಕೊಂಡಿದ್ದು ಘಟಕದ ಬಳಿ ಹೋಗಲು ಜನ ಹೆದರುವ ಸ್ಥಿತಿ ಇದೆ.

ಶುದ್ಧ ಕುಡಿಯುವ ನೀರಿನ ಘಟಕಗಳೇ ಕಾಣದ ಹಲವು ಗ್ರಾಮಸ್ಥರು ಬೇರೆ ಊರಿಗೆ ತೆರಳಿ ಖಾಸಗಿಯವರ ಬಳಿ ಶುದ್ಧ ನೀರು ಖರೀಸುತ್ತಿದ್ದಾರೆ. ಔರಾದ್‌ ತಾಲೂಕಿನ ಬೋರ್ಗಿ(ಜೆ), ಜೋಜನಾ ಹಾಗೂ ಕಮಲನಗರ ತಾಲೂಕಿನ ಚಾಂದೋರಿ, ಬಸನಾಳ ಸೇರಿದಂತೆ ಕೆಲವು ಗ್ರಾಮ ಪಂಚಾಯಿತಿಗಳ ನಿರ್ವಹಣೆಯಿಂದ ಅಲ್ಲಿನ ಗ್ರಾಮಸ್ಥರಿಗೆ ರಿಯಾಯಿತಿ ದರದಲ್ಲಿ ಶುದ್ಧ ಕುಡಿಯುವ ನೀರು ಸಿಗುತ್ತಿದೆ.

WhatsApp Image 2024 08 23 at 3.24.06 PM
ಬೀದರ್‌ ತಾಲೂಕಿನ ಮನ್ನಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರಿನ ಶುದ್ಧ ನೀರಿನ ಘಟಕ ನಿರ್ವಹಣೆಯಿಲ್ಲದೆ ಹಾಳಾಗುತ್ತಿದೆ.

ʼಪ್ರತಿ ವರ್ಷ ಜಿಲ್ಲೆಯ ಜನ ಬೇಸಿಗೆಯ ಬಿಸಿಲಿನ ಪ್ರಖರತೆಗೆ ತತ್ತರಿಸುತ್ತಾರೆ. ಬೇಸಿಗೆ ಬಂದರೆ ಸಾಕು ಜಿಲ್ಲೆಯ ನೂರಕ್ಕೂ ಅಧಿಕ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತದೆ. ನೀರಿಗಾಗಿ ಹಗಲಿರುಳು ಅಲೆದಾಡುವುದು, ಕೆಲವು ತಾಂಡದ ಜನರು ನೀರಿಗಾಗಿ ಪಕ್ಕದ ತೆಲಂಗಾಣಕ್ಕೆ ನಡೆದುಕೊಂಡು ಹೋಗುವ ದುಸ್ಥಿತಿ ಪ್ರತಿ ವರ್ಷ ತಾಂಡವಾಡುತ್ತದೆ. ಅದಕ್ಕೆ ಶಾಶ್ವತ ಪರಿಹಾರ ಹುಡುಕಲು ಪ್ರಯತ್ನಿಸದ ಜನಪ್ರತಿನಿಧಿಗಳು, ಅಧಿಕಾರಿಗಳು ‌ʼಟ್ಯಾಂಕರ್ ನೀರುʼ ಒದಗಿಸುವ ʼಪರಿಹಾರʼ ಕಂಡುಕೊಂಡು ಕೈತೊಳೆದುಕೊಳ್ಳುವುದು ಬಿಟ್ಟರೆ ಮುಂದಿನ ಬೇಸಿಗೆಯಲ್ಲಿ ಉದ್ಭವಿಸುವ ನೀರಿನ ಸಮಸ್ಯೆ ಬಗ್ಗೆ ಯಾರೊಬ್ಬರೂ ತಲೆಕೆಡಿಸಿಕೊಳ್ಳದೇ ಇರುವುದು ವಿಪರ್ಯಾಸದ ಸಂಗತಿʼ ಎಂದು ಪ್ರಜ್ಞಾವಂತ ನಾಗರಿಕರ ಅಭಿಮತ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ರಾಮಲಿಂಗ ಬಿರಾದರ್‌ ಅವರನ್ನು ವಿಚಾರಿಸಿದಾಗ, ʼಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಅವರೊಂದಿಗೆ ಈಗಾಗಲೇ ಸಭೆಯಾಗಿದೆ. ಎಲ್ಲ ಘಟಕಗಳು ಸಮೀಕ್ಷೆ ನಡೆಸಲು ತಿಳಿಸಿದ್ದಾರೆ. ವರದಿ ಆಧರಿಸಿ ಘಟಕಗಳ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗುವುದುʼ ಎಂದು ಮಾಹಿತಿ ನೀಡಿದರು.

ʼಸರ್ಕಾರ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿದ ಬಹುತೇಕ ಶುದ್ಧ ನೀರಿನ ಘಟಕಗಳು ಸೂಕ್ತ ನಿರ್ವಹಣೆಯಿಲ್ಲದೆ ಬಾಗಿಲು ಮುಚ್ಚಿವೆ. ಹಲವು ಬಾರಿ ಮನವಿ ಸಲ್ಲಿಸಿದರೂ ಕ್ಯಾರೇ ಎನ್ನದ ಅಧಿಕಾರಿಗಳು ಏನಾದರೂ ನೆಪ ಹೇಳಿ ಜಾರಿಕೊಳ್ಳುತ್ತಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಲಕ್ಷಾಂತರ ರೂ. ವೆಚ್ಚದ ಘಟಕಗಳು ಜನರಿಗೆ ಉಪಯೋಗಕ್ಕೆ ಬಾರದೇ ಹಾಳಾಗುತ್ತಿವೆ. ಕೂಡಲೇ ಅವುಗಳನ್ನು ದುರಸ್ತಿಪಡಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕುʼ ಎಂದು ಹುಮನಾಬಾದ್‌ ತಾಲೂಕಿನ ಭೀಮರೆಡ್ಡಿ ಸಿಂಧನಕೇರಾ ಈದಿನ.ಕಾಮ್‌ ಜೊತೆ ಮಾತನಾಡಿ ಆಗ್ರಹಿಸಿದರು.

WhatsApp Image 2024 08 23 at 3.24.06 PM 1
ಔರಾದ್‌ ತಾಲೂಕಿನ ಸಂತಪೂರ ಗ್ರಾ.ಪಂ. ವ್ಯಾಪ್ತಿಯ ಜೊನ್ನೆಕೇರಿ ಗ್ರಾಮದಲ್ಲಿ ನೀರಿನ ಮೂಲ ಇಲ್ಲದೆ ಬಂದ್‌ ಆಗಿರುವುದು.

ʼಕೆಲವು ಕಡೆ ಘಟಕಗಳು ಚನ್ನಾಗಿದ್ದರೂ ನೀರಿನ ಮೂಲ ಇಲ್ಲದಕ್ಕೆ ಕಾರ್ಯನಿರ್ವಹಿಸುತ್ತಿಲ್ಲ. ನಿರ್ವಹಣೆಗೆ ಬೇಕಾದ ಖರ್ಚು-ವೆಚ್ಚ ಇಲಾಖೆಯಿಂದ ಬರುತ್ತಿಲ್ಲ. ಕರ ವಸೂಲಿ ಹಣದಿಂದ ನಿರ್ವಹಣೆ ಮಾಡಬೇಕಾಗುತ್ತದೆ. ಘಟಕಗಳ ನಿರ್ವಹಣೆಗೆ ಒಬ್ಬರು ಅಗತ್ಯವಿದೆ. ಹೀಗಾಗಿ ಹಲವೆಡೆ ಶುದ್ಧ ನೀರಿನ ಘಟಕಗಳಿದ್ದರೂ ಜನರಿಗೆ ಉಪಯೋಗ ಇಲ್ಲದಂತಾಗಿದೆ ಎಂದು ಜಿಲ್ಲೆಯ ಪಿಡಿಒಯೊಬ್ಬರು ಮಾಹಿತಿ ನೀಡುತ್ತಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಆಸ್ತಿಗಾಗಿ ಸಹೋದರನನ್ನೇ ಕೊಲೆಗೈದ ಸಹೋದರಿಯರು!

ʼಆಗಾಗ ಬರಕ್ಕೆ ತುತ್ತಾಗುತ್ತಿರುವ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾದರೆ, ಮಳೆಗಾಲದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾದ ಘಟನೆಗಳು ಕಳೆದ ವರ್ಷ ನಡೆದಿದ್ದವು. ಶುದ್ಧ ಕುಡಿಯುವ ನೀರು ಪೂರೈಸುವಲ್ಲಿ ವಿಫಲರಾದ ಸಂಬಂಧಪಟ್ಟ ತಾ.ಪಂ.ಇಒ, ಪಿಡಿಒ ಅಮಾನತುಗೊಂಡಿದ್ದರು. ಇತ್ತೀಚೆಗೆ ಕಮಲನಗರ ತಾಲೂಕಿನ ಗ್ರಾಮವೊಂದರಲ್ಲಿ ಕುಡಿಯುವ ನೀರಿನಲ್ಲಿ ಕಪ್ಪೆ ಮರಿಗಳು ಕಂಡು ಬಂದ ಘಟನೆ ನಡೆದಿತ್ತು.

ಆಡಳಿತ ವ್ಯವಸ್ಥೆ ಇಂತಹ ಘಟನೆಗಳು ಗಂಭೀರವಾಗಿ ಪರಿಗಣಿಸಿ ಮರುಕಳಿಸದಂತೆ ಎಚ್ಚರ ವಹಿಸಿದರೆ ಜನರು ನೆಮ್ಮದಿಯ ನಿಟ್ಟುಸಿರು ಬಿಡಬಹುದು. ಆದರೆ ಗ್ರಾಮೀಣ ಜನರಿಗೆ ಶುದ್ಧ ನೀರು ಪೂರೈಸಲು ಸರ್ಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದರೂ ಅಧಿಕಾರಿಗಳ ನಿರ್ಲಕ್ಷಿಸಿದಿಂದಾಗಿ ಹೇಗೆ ಹಳ್ಳ ಹಿಡಿದಿದೆ ಎನ್ನುವುದಕ್ಕೆ ಜಿಲ್ಲೆಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳೇ ಸಾಕ್ಷಿ ಎನ್ನಬಹುದು.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...