ಕೊಪ್ಪಳ | ಶಿಕ್ಷಕರ ಕೊರತೆ : ಒಬ್ಬ ಅತಿಥಿ ಶಿಕ್ಷಕರನ್ನೇ ನೆಚ್ಚಿಕೊಂಡ 40 ವಿದ್ಯಾರ್ಥಿಗಳು!

Date:

ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ರಾಂಪೂರ ಗ್ರಾಮದ ಸರಕಾರಿ ಕಿರಿಯ ಶಾಲೆಯಲ್ಲಿ ಖಾಯಂ ಶಿಕ್ಷಕರ ಕೊರತೆಯೇ ಹೆಚ್ಚಿದ್ದು, ಓರ್ವ ಅತಿಥಿ ಶಿಕ್ಷಕರೇ 40 ಮಕ್ಕಳ ಕಲಿಕೆಗೆ ನೆರವಾಗಿದ್ದಾರೆ. ಶಿಕ್ಷಕರ ಕೊರತೆಯಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟ ಸುಧಾರಿಸುತ್ತಿಲ್ಲ ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

- Advertisement -

ಶಾಲೆಯಲ್ಲಿ 1 ರಿಂದ 5ನೇ ತರಗತಿವರೆಗೆ ಒಟ್ಟು 40 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಒಬ್ಬರೂ ಖಾಯಂ ಶಿಕ್ಷಕರಿಲ್ಲದ ಕಾರಣ ಓರ್ವ ಅತಿಥಿ ಶಿಕ್ಷಕರೇ ಐದು ತರಗತಿಗಳಿಗೆ ಪಾಠ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ರಾಂಪೂರ ಗ್ರಾಮ ಸಮೀಪದ ಮುಸ್ಲಾಪುರ ಗ್ರಾಮದ ಶಿಕ್ಷಕರೊಬ್ಬರನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿದ್ದಾರೆ. ಆದರೆ ಅವರೂ ದಿನ ಬಿಟ್ಟು ದಿನ ಬರುವ ಕಾರಣ ಮಕ್ಕಳ ಶೈಕ್ಷಣಿಕ ಗುಣಮಟ್ಟ ಕುಂಠಿತಗೊಳ್ಳುತ್ತಿದೆ ಎಂದು ಪೋಷಕರು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ʼಶಾಲೆಗೆ ಕನಿಷ್ಠ ಮೂಲಸೌಕರ್ಯಗಳಾದ ಕಾಂಪೌಂಡ್, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ . ಇನ್ನು ಶಾಲಾ ಕೊಠಡಿಗಳ ಮೇಲ್ಛಾವಣಿ ಸೋರುತ್ತಿದ್ದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಹೊಸ ಕೋಣೆಗಳು ಮಂಜೂರಾಗಿ ಮೂರು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳಿಸದೇ ನನೆಗುದಿಗೆ ಬಿದ್ದಿದೆ. ಇದರಿಂದ ʼಮಕ್ಕಳಿಗೆ ಕೂರಲು ಜಾಗವಿಲ್ಲ, ಕಲಿಸುವ ಶಿಕ್ಷಕರಿಲ್ಲʼ ಎಂಬಂತಾಗಿದೆ. ಇಂತಹ ದುಸ್ಥಿತಿಯಲ್ಲಿ ಗುಣಮಟ್ಟ ಶಿಕ್ಷಣ ನಿರೀಕ್ಷಿಸಲು ಸಾಧ್ಯವಿಲ್ಲʼ ಎಂದು ಮಹಿಳಾ ಮುನ್ನಡೆ ಹೋರಾಟಗಾರ್ತಿ ಶೋಭಾ ಹೇಳಿದರು.

WhatsApp Image 2024 12 19 at 8.46.33 AM 1

ʼನಮ್ಮೂರಿನ ಸರ್ಕಾರಿ ಶಾಲೆಯಲ್ಲಿ ಖಾಯಂ ಶಿಕ್ಷಕರು ಇಲ್ಲದಿರುವುದರಿಂದ ಶ್ರೀಮಂತರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುತ್ತಿದ್ದಾರೆ. ಬಡ ಕೂಲಿ ಕಾರ್ಮಿಕರ ಮಕ್ಕಳಿಗೆ ಇದೇ ಶಾಲೆ ಗತಿಯಾಗಿದೆ. ಸರ್ಕಾರಿ ಶಾಲೆಗಳಿಗೆ ಸರ್ಕಾರ ಎಲ್ಲ ಸೌಕರ್ಯಗಳು ಉಚಿತವಾಗಿ ನೀಡುತ್ತಿದೆ. ಆದರೆ ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಮಕ್ಕಳನ್ನು ಹೇಗೆ ಕಳಿಸುವುದು. ಕೂಡಲೇ ಶಿಕ್ಷಕರ ನೇಮಕ ಮಾಡಬೇಕು ಎಂದು ಶರಣಪ್ಪ ಪೂಜಾರ ಒತ್ತಾಯಿಸಿದರು.

ʼಶಾಲೆ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಇರುವ ಕಾರಣ ವಿದ್ಯಾರ್ಥಿಗಳು ನಿತ್ಯವೂ ಭಯದಲ್ಲಿ ಒಡಾಡುವಂತಾಗಿದೆ. ಶಾಲೆಯ ಕಾಂಪೌಂಡ್ ಶಿಥಿಲಗೊಂಡ ಪರಿಣಾಮ ಸಂಜೆಯಾದರೆ ಶಾಲಾ ಆವರಣ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಪ್ರಾಥಮಿಕ ಶಿಕ್ಷಣದಿಂದ ಮಕ್ಕಳು ವಂಚಿತವಾಗಬಾರದು ಎಂಬ ಕಾರಣದಿಂದ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದರೂ ನಮ್ಮೂರು ಶಾಲೆಯ ಅವ್ಯವಸ್ಥೆ ತೀರಾ ಹದಗೆಟ್ಟಿದೆʼ ಎಂದು ಶಂಭು ಕಿರಣ ನಾಯಕ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಬೇಡ್ಕರ್‌ರನ್ನು ಅವಮಾನಿಸಿದ ಅಮಿತ್‌ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಎನ್‌ಎಸ್‌ಯುಐ

ಈ ವಿಷಯ ಕುರಿತು ಮಾಹಿತಿಗಾಗಿ ಗಂಗಾವತಿಯ, ಕನಕಗಿರಿ ಬಿಇಒ ಅವರನ್ನು ಈದಿನ.ಕಾಮ್ ಸಂಪರ್ಕಿಸಲು ಪ್ರಯತ್ನಿಸಿತ್ತು. ಆದರೆ ಅವರು ಸಂಪರ್ಕಕ್ಕೆ ಸಿಗಲಿಲ್ಲ.

IMG 20241219 WA0001
ಕೇಶವ ಕಟ್ಟಿಮನಿ
+ posts

ಕೃಷಿ, ಪುಸ್ತಕ ಓದುಗ,

ಫೀಲ್ಡ್ ಕೋರ್ಡಿನೇಟರ್,
ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಕೇಶವ ಕಟ್ಟಿಮನಿ
ಕೇಶವ ಕಟ್ಟಿಮನಿ
ಕೃಷಿ, ಪುಸ್ತಕ ಓದುಗ, ಫೀಲ್ಡ್ ಕೋರ್ಡಿನೇಟರ್, ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...