ಬೆಂಗಳೂರು | ನಿಯಮ ಉಲ್ಲಂಘಿಸಿ ಮೆಟ್ರೋದಲ್ಲಿ ಆಹಾರ ಸೇವನೆ: ಯುವತಿಗೆ ಬಿತ್ತು ದಂಡ!

Date:

ಬೆಂಗಳೂರಿನ ‘ನಮ್ಮ ಮೆಟ್ರೋದಲ್ಲಿ ಆಹಾರ ಸೇವನೆ ಮಾಡಿದ ಬಗ್ಗೆ ವಿಡಿಯೋ ದೂರು ಬಂದ ಹಿನ್ನೆಲೆಯಲ್ಲಿ ಯುವತಿಯೋರ್ವಳಿಗೆ ಬಿಎಂಆರ್‌ಸಿಎಲ್ ದಂಡ ವಿಧಿಸಿರುವ ಬಗ್ಗೆ ವರದಿಯಾಗಿದೆ.

- Advertisement -

ನಮ್ಮ ಮೆಟ್ರೋದಲ್ಲಿ ಮಾದಾವರ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ನಿಯಮಿತ ಪ್ರಯಾಣಿಕರೊಬ್ಬರಿಗೆ ಇಂದು ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 500 ರೂ. ದಂಡ ವಿಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಏಪ್ರಿಲ್ 26, 2025 ರಂದು ಮೆಟ್ರೋದಲ್ಲಿ ಪ್ರಯಾಣಿಸುವಾಗ ಅವರು ಊಟ ಮಾಡುವ ಮೂಲಕ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದರು, ಈ ಉಲ್ಲಂಘನೆಯನ್ನು ಸಹ ಪ್ರಯಾಣಿಕರೊಬ್ಬರು ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿ, ಬಿಎಂಆರ್‍‌ಸಿಎಲ್‌ಗೆ ದೂರು ನೀಡಿದ್ದರು. ಸೋಮವಾರ ಬೆಳಗ್ಗೆ ನೈಸ್ ರಸ್ತೆ ಜಂಕ್ಷನ್‌ನಲ್ಲಿರುವ ಮಾದಾವರ ಮೆಟ್ರೋ ನಿಲ್ದಾಣವನ್ನು ಪ್ರವೇಶಿಸಿದಾಗ ಯುವತಿಯನ್ನು ಗುರುತಿಸಿದ ಭದ್ರತಾ ಸಿಬ್ಬಂದಿ ಅವರಿಗೆ ದಂಡ ವಿಧಿಸಿರುವುದಾಗಿ ಬಿಎಂಆರ್‍‌ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಮೆಟ್ರೋ ನಿಯಮಗಳಲ್ಲಿ ವಿವರಿಸಿದಂತೆ ಮೆಟ್ರೋ ಆವರಣದೊಳಗೆ ಮತ್ತು ರೈಲುಗಳಲ್ಲಿ ಆಹಾರ ಮತ್ತು ಪಾನೀಯಗಳನ್ನು ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ನೀತಿಯು ಕಸ ಹಾಕುವುದನ್ನು ತಡೆಗಟ್ಟುವುದು, ನೈರ್ಮಲ್ಯವನ್ನು ಕಾಪಾಡುವುದು ಪ್ರಯಾಣಿಸುವ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಾಗಾಗಿ, ಎಲ್ಲ ಪ್ರಯಾಣಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಬಿಎಂಆರ್‍‌ಸಿಎಲ್ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...