ಉಡುಪಿ | ಅಮಲು ಪದಾರ್ಥ ನೀಡಿ ಯುವತಿಯ ಅತ್ಯಾಚಾರ ಆರೋಪ: ಇಬ್ಬರ ಬಂಧನ

Date:

Advertisements

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಕಾರ್ಕಳದ ಅಯ್ಯಪ್ಪ ನಗರದ ಬಳಿಯ ಹಾಡಿಯಲ್ಲಿ ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿ ವಾಸವಾಗಿದ್ದು, ಶುಕ್ರವಾರ ಕಾರಿನಲ್ಲಿ ಕರೆದುಕೊಂಡು ಹೋಗಿ, ಬಿಯರ್‌ಗೆ ಅಮಲು ಪದಾರ್ಥ ಮಿಶ್ರಣ ಮಾಡಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಯುವತಿಯ ತಾಯಿ ದೂರು ನೀಡಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಶುಕ್ರವಾರ ಮಧ್ಯಾಹ್ನದ ವೇಳೆಗೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisements

ಒಟ್ಟು ಮೂರು ಮಂದಿ ಈ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ಯುವತಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ‌. ಈ ಪೈಕಿ ಪ್ರಮುಖ ಆರೋಪಿ ಅಲ್ತಾಫ್‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ, ಪ್ರಮುಖ ಆರೋಪಿ ಅಲ್ತಾಫ್‌ಗೆ ಮದ್ಯವನ್ನು ಪೂರೈಸಿದ್ದ ಇನ್ನೋರ್ವ ಆರೋಪಿ ಸವೇರಾ ರಿಚರ್ಡ್‌ ಕಾರ್ಡೋಜಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಜೇನು ಕೃಷಿ ಮಾಡಿಕೊಂಡಿದ್ದ ಯುವತಿಯನ್ನು ಮನೆಯ ಪಕ್ಕದ ರಂಗನಪಲ್ಕೆ ಎಂಬ ಕಾಡು ಪ್ರದೇಶದ ಸ್ಥಳಕ್ಕೆ ಕರೆದೊಯ್ದು ಹಾಡಿಯಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಭೋವಿ ಸಮುದಾಯಕ್ಕೆ ಸೇರಿದವರೆಂದು ತಿಳಿದು ಬಂದಿದೆ.

ಆರೋಪಿ ಅಲ್ತಾಫ್ ಹಾಗೂ ಸಂತ್ರಸ್ತ ಯುವತಿ ಮೂರು ತಿಂಗಳ ಹಿಂದೆ ಇನ್ಸ್‌ಟಾಗ್ರಾಮ್ ಮೂಲಕ ಪರಿಚಯವಾಗಿರುವುದಾಗಿ ಉಡುಪಿ ಎಸ್‌ಪಿ ಅರುಣ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅಲ್ತಾಫ್ ಬಂಗ್ಲೆಗುಡ್ಡೆ ನಿವಾಸಿಯಾಗಿದ್ದು, ಮದುವೆಯಾಗಿದ್ದ ಎಂದು ತಿಳಿದು ಬಂದಿದೆ.

ಇದನ್ನು ಓದಿದ್ದೀರಾ? ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ಚಿಕ್ಕಮಗಳೂರಿನ ‘ಕುನ್ನಿಹಳ್ಳ’ಕ್ಕೆ ಭೇಟಿ; ಪರಿಹಾರದ ಭರವಸೆ

ಆರೋಪಿಗಳ ಪೈಕಿ ಓರ್ವ ಯುವಕ ಮುಸ್ಲಿಂ ಸಮುದಾಯಕ್ಕೆ ಸೇರಿದವ ಎಂದು ಸುದ್ದಿ ಹರಿದಾಡಿದ್ದರಿಂದ ಆಸ್ಪತ್ರೆ ಎದುರು ಸಂಘಪರಿವಾರದ ಕಾರ್ಯಕರ್ತರು, ಭೋವಿ ಸಮುದಾಯದವರು ಜಮಾಯಿಸಿ ಈ ಘಟನೆಯನ್ನು ಖಂಡಿಸಿದ್ದಾರೆ. ಕೂಡಲೇ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದರೆ ತೀವ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X