ಗದಗ | ಸಾರ್ವಜನಿಕ ಮಹಿಳಾ ಶೌಚಾಲಯ ನಿರ್ಮಾಣಕ್ಕೆ ರೈತಪರ ಹೋರಾಟಗಾರರ ಆಗ್ರಹ

Date:

Advertisements

ಸಾರ್ವಜನಿಕ ಮಹಿಳಾ ಶೌಚಾಲಯ ನಿರ್ಮಾಣಕ್ಕೆ ಆಗ್ರಹಿಸಿ ಸಾಮಾಜಿಕ ಹಾಗೂ ರೈತಪರ ಹೋರಾಟಗಾರರು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕೋಗನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಉಪಸ್ಥಿತಿ ಇಲ್ಲದ ಕಾರಣ ಪಂಚಾಯಿತಿ ಸಿಬ್ಬಂದಿ ವರ್ಗದ ಕೊಟ್ರೇಶ್ ಬೂದನೂರು ಅವರಿಗೆ ಮನವಿ ಪತ್ರ ನೀಡಿ ಸ್ವಿಕೃತಿ ತೆಗೆದುಕೊಳ್ಳಲಾಗಿದೆ.

“ಕೋಗನೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಐದು ಹಳ್ಳಿಗಳಾದ ಕೋಗನೂರು, ತಂಗೋಡ, ಗೋವಿನಕೊಪ್ಪ, ಅಂಕಲಿ, ನಾಗರಮಡವು ಈ ಹಳ್ಳಿಗಳಲ್ಲಿ ಮಹಿಳೆಯರು ಬಯಲು ಶೌಚಾಲಯವನ್ನು ಅವಲಂಬಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ದಲಿತ ಕೇರಿಗಳಲ್ಲಿ ಶೌಚಾಲಯಗಳಲ್ಲಿದೆ ಮಹಿಳೆಯರು ತುಂಬಾ ತೊಂದರೆ ಅನುಭವಿಸುತ್ತಿದ್ದು, ಮಳೆಗಾಲದಲ್ಲಿ ತುಂಬಾ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಚ್ಚುಕಟ್ಟಾದ ಸಾರ್ವಜನಿಕ ಮಹಿಳಾ ಶೌಚಾಲಯವನ್ನು ನಿರ್ಮಿಸಿಕೊಡಬೇಕು.ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ಹಿಂದೇಟಾಕದೆ ಈ ಸಮಸ್ಯೆಗೆ ಸ್ಪಂದಿಸಬೇಕು” ಎಂದು ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ಕೊಪ್ಪ | ಶಾಲಾ ಮಕ್ಕಳಿಗೆ, ಶಿಕ್ಷಕರಿಗೆ ಅನ್ಯಾಯ; ಅಮೃತ ಸಿಂಚನ ಟ್ರಸ್ಟ್ ವಿರುದ್ಧ ಪ್ರತಿಭಟನೆ

ಈ ಸಂದರ್ಭದಲ್ಲಿ ಸಾಮಾಜಿಕ, ರೈತಪರ ಹೋರಾಟಗಾರರಾದ ರಾಕೇಶ್ ಬಿ, ರಾಜು ಎಚ್‌, ಅಂಕಲಿ ಹಿರಿಯ ಮುಖಂಡರಾದ ಮಲ್ಲಪ್ಪ ಎಂ, ಸ್ಥಳೀಯರಾದ ಮಹಾಂತೇಶ್, ಪ್ರವೀಣ್ ಕೂರಗುಂದ, ಶರಣಪ್ಪ ಎನ್‌ ಸಿ ಸೇರಿದಂತೆ ಇತರೆ ಸ್ಥಳೀಯರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X