ಜಮೀನು ವಿವಾದ ಹಿನ್ನೆಲೆ ಮನೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಪೋಶೆಟ್ಟಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಲಕ್ಷ್ಮಿ ನರಸಪ್ಪ(60) ಕೊಲೆಯಾದ ಮೃತ ದುರ್ದೈವಿ. ನಂದೀಶ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಆರೋಪಿ.
ಇಬ್ಬರೂ ಸೋದರ ಸಂಬಂಧಿಗಳಾಗಿದ್ದು, ಎರಡೂ ಕುಟುಂಬಗಳ ನಡುವೆ ಜಮೀನು ವಿವಾದ ಇತ್ತು. ಜಮೀನಿಗಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಇದೇ ವೈಷಮ್ಯ ಹಿನ್ನೆಲೆ ನಂದೀಶ್ ಭಾನುವಾರ ಬೆಳಗ್ಗೆ ಏಕಾಏಕಿ ಮನೆಗೆ ನುಗ್ಗಿ ಲಕ್ಷ್ಮಿ ನರಸಪ್ಪ ನನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ.
ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು.