ಜಮೀನಿನ ಮೌಲ್ಯ ಪರಿಷ್ಕರಣೆಗೆ ಸರ್ಕಾರದ ಚಿಂತನೆ: ಸಚಿವ ಕೃಷ್ಣಭೈರೇಗೌಡ

Date:

  • ವಿರೋಧ ಪಕ್ಷದ ಸದಸ್ಯ ಮುನಿರಾಜೇಗೌಡ ಪ್ರಶ್ನೆಗೆ ಉತ್ತರ
  • ‘ರೈತರ ಭೂಮಿಗೆ ಮಾರುಕಟ್ಟೆ ಮೌಲ್ಯ ನಿಗದಿಗೆ ಅನುಕೂಲ’

ಸರ್ಕಾರಕ್ಕೆ ಮುದ್ರಾಂಕ ಶುಲ್ಕ ಪರಿಷ್ಕರಿಸುವ ಆಲೋಚನೆ ಇಲ್ಲ. ಆದರೆ, ರೈತರಿಗಾಗುತ್ತಿರುವ ಅನ್ಯಾಯ ತಡೆಯುವ ನಿಟ್ಟಿನಲ್ಲಿ ಜಮೀನಿನ ಮೌಲ್ಯ ಪರಿಷ್ಕರಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ವಿಧಾನ ಪರಿಷತ್‌ಗೆ ಮಾಹಿತಿ ನೀಡಿದರು.

- Advertisement -

ಬುಧವಾರದ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ವಿರೋಧ ಪಕ್ಷದ ಸದಸ್ಯ ಮುನಿರಾಜೇಗೌಡ ಅವರು, ಮುದ್ರಾಂಕ ಶುಲ್ಕ ಪರಿಷ್ಕರಣೆ ಬಗ್ಗೆ ಪ್ರಶ್ನಿಸಿದಾಗ ಸಚಿವರು ಉತ್ತರಿಸಿ, “ಮುದ್ರಾಂಕ ಶುಲ್ಕವನ್ನು ಪರಿಷ್ಕರಿಸುವ ಬಗ್ಗೆ ಸರ್ಕಾರಕ್ಕೆ ಯಾವುದೇ ಯೋಚನೆ ಇಲ್ಲ. ಆದರೆ ಜಮೀನಿನ ಮೌಲ್ಯ ಪರಿಷ್ಕರಣೆ ನಡೆಸಿ ಕನಿಷ್ಠ ನಾಲ್ಕು ವರ್ಷವಾಗಿದೆ. ಹೀಗಾಗಿ ಜಮೀನು ಮೌಲ್ಯ ಪರಿಷ್ಕರಣೆ ನಡೆಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮುಂದುವರೆದು, “ಜಮೀನಿನ ಮೌಲ್ಯ ಪರಿಷ್ಕರಣೆಯ ಆಧಾರದಲ್ಲಿ ರೈತರ ಭೂಮಿಗಳಿಗೆ ಮಾರುಕಟ್ಟೆ ಮೌಲ್ಯ ನಿಗದಿಯಾಗುತ್ತದೆ‌. ಆದರೆ, ಕಳೆದ ನಾಲ್ಕು ವರ್ಷದಿಂದ ಮೌಲ್ಯ ಪರಿಷ್ಕರಣೆಯಾಗದ ಕಾರಣ ರೈತರಿಗೆ ಅನ್ಯಾಯವಾಗುತ್ತಿದೆ. ರೈತರು ಜಮೀನು ಮಾರಾಟಕ್ಕೆ ಮುಂದಾಗುವಾಗ ಅವರಿಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ಅಲ್ಲದೆ, ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಹಣದ ವಹಿವಾಟು ಅಧಿಕವಾಗಿದ್ದು ಕಪ್ಪು ಹಣ ಪರಿವರ್ತನೆಗೂ ಕಾರಣವಾಗಿದೆ. ಹೀಗಾಗಿ ಜಮೀನಿನ ಮೌಲ್ಯವನ್ನು ಶೀಘ್ರದಲ್ಲೇ ಪರಿಷ್ಕರಿಸಲಾಗುವುದು” ಎಂದು ಸ್ಪಷ್ಟನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಅಧಿವೇಶನ | ನೀರಾವರಿ ಇಲಾಖೆಯಿಂದ 4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ: ಡಿಕೆ ಶಿವಕುಮಾರ್

ಇದೇ ಸಂದರ್ಭದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದು, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ ಎಂದೂ ಪರಿಷತ್ ಸದಸ್ಯ ಮುನಿರಾಜೇಗೌಡ ಸದನದ ಗಮನ ಸೆಳೆದರು.

ಈ ಪ್ರಶ್ನೆಗೂ ಸೂಕ್ತ ಉತ್ತರ ನೀಡಿದ ಸಚಿವರು, “ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಅಧಿಕ ಸಂಖ್ಯೆಯಲ್ಲಿ ಜನ ಬರುವ ಕಾರಣ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ನಿರ್ವಹಣೆ ಸವಾಲಿನ ಕೆಲಸವಾಗಿದೆ. ಆದರೆ ಮುಂದಿನ ಒಂದು ವರ್ಷದಲ್ಲಿ ಎಲ್ಲ ಕಚೇರಿಗಳಲ್ಲೂ ಉತ್ತಮ ಜನಸ್ನೇಹಿ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಪಾಸ್‌ಪೋರ್ಟ್ ಕಚೇರಿಗಳ ಮಾದರಿಯಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲೂ ಉತ್ತಮ ಮೂಲಭೂತ ಸೌಲಭ್ಯ ನೀಡಲಾಗುವುದು” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...