ಕಡಬ ತಾಲ್ಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಗುಡ್ಡ ಕುಸಿದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ
ಇಂದು ಬೆಳಗಿನ ಜಾವ 3 ರಿಂದ 4 ಗಂಟೆಗೆ ಹೆದ್ದಾರಿಗೆ ಮಣ್ಣು ಬಿದ್ದು ಮಂಗಳೂರು-ಬೆಂಗಳೂರು ಹೆದ್ದಾರಿ ಬಂದ್ ಆಗಿದೆ. ಇದುವರೆಗೂ ಮಣ್ಣು ತೆರವು ಕಾರ್ಯ ಆರಂಭವಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಪದೇ ಪದೇ ಹೆದ್ದಾರಿಗೆ ಮಣ್ಣು ಬೀಳುತ್ತಿದ್ದರೂ, ಯಾವುದೇ ಶಾಶ್ವತ ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರು, ವಾಹನ ಸವಾರರು ಆಕೋಶ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ: ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ದ.ಕ ಜಿಲ್ಲಾ ಸಮ್ಮೇಳನ
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳು ಮುಂದೆ ಹೋಗಲಾಗದೆ, ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಳೆದ ವಾರವೂ ಈ ಸ್ಥಳದಲ್ಲಿ ಮಣ್ಣು ಕುಸಿದು ಮೂರು ಗಂಟೆ ಕಾಲ ಹೆದ್ದಾರಿ ಬಂದ್ ಆಗಿತ್ತು. ಮಳೆಗಾಲ ಆರಂಭಗೊಂಡ ಮೇಲೆ ಐದನೇ ಬಾರಿ ಮಣ್ಣು ಕುಸಿದಿದೆ.
ಪ್ರತಿಬಾರಿಯೂ ಮಳೆಗಾಲ ಪ್ರಾರಂಭವಾದರೇ ಇದೇ ಸಮಸ್ಯೆ ಎದುರಾಗುತ್ತದೆ. ಅಧಿಕಾರಿಗಳು ನೆಪಕ್ಕೆ ಸ್ಥಳಕ್ಕೆ ಭೇಟಿ ನೀಡಿ ಎಲ್ಲವೂ ಸರಿ ಪಡಿಸುತ್ತೇವೆ ಎಂದು ಭರವಸೆ ನೀಡುತ್ತಾರೆ. ಆದರೆ ಯಾವುದು ಸರಿಯಾಗುವುದಿಲ್ಲ ಎಂದು ಸ್ಥಳೀಯರೊಬ್ಬರು ದೂರಿದರು.