ಬೀದರ್‌ | ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮೂಲ ಕಾರಣ ದಿವಂಗತ ಬಿ.ನಾರಾಯಣರಾವ್

Date:

  • ಮಾಜಿ ಶಾಸಕ ಬಿ.ನಾರಾಯಣರಾವ ಜಿಲ್ಲೆಯ ಗೊಂಡ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ಒದಗಿಸಿಕೊಟ್ಟಿದ್ದರು.
  • ಕರೋನಾ ತಗುಲಿದರೂ ಬಸವಕಲ್ಯಾಣದ ಜನತೆಯ ಒಳಿತಿಗಾಗಿ ತಮ್ಮ ಜೀವ ಮುಡುಪಾಗಿಟ್ಟು ಸೇವೆಗೈದಿದ್ದರು.

ಸದಾ ಬಡವರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿದ್ದ ಬಸವಕಲ್ಯಾಣದ ಮಾಜಿ ಶಾಸಕ ದಿವಂಗತ ಬಿ. ನಾರಾಯಣರಾವ ಕೇವಲ ತಮ್ಮ ಜಾತಿಗೆ ಸೀಮಿತರಾಗದೆ ಇತರೆ ಜಾತಿಗಳ ನಡುವಿನ ಸಮಸ್ಯೆಗಳ ಬಗ್ಗೆ ಹೆಚ್ಚಿನ ಕಾಳಜಿ ತೋರುತ್ತಿದ್ದರು ಎಂದು ಎಲ್‌ಐಸಿ ಅಧಿಕಾರಿ ಈಶ್ವರ ಮಲ್ಕಾಪೂರೆ ಹೇಳಿದರು.

- Advertisement -

ಬೀದರ ನಗರದ ಕರುನಾಡು ಸಾಂಸ್ಕೃತಿಕ ಸಭಾಂಗಣದಲ್ಲಿ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದಿಂದ ಆಯೋಜಿಸಿದ್ದ ʼಮಾಜಿ ಶಾಸಕ ದಿ. ಬಿ. ನಾರಾಯಣರಾವ ಅವರ ಸವಿ ನೆನಪುʼ ಕಾರ್ಯಕ್ರಮದಲ್ಲಿ ಮಾತನಾಡಿ, “ಮಾಜಿ ಶಾಸಕ ದಿ. ಬಿ.ನಾರಾಯಣರಾವ ತಮ್ಮ ಅವಿರತ ಹೋರಾಟದ ಮುಖಾಂತರ ಬೀದರ ಜಿಲ್ಲೆಯ ಗೊಂಡ ಸಮುದಾಯದ ಜನರಿಗೆ ಗೊಂಡ ಜಾತಿ ಪ್ರಮಾಣ ಪತ್ರ ನೀಡುವಂತೆ ಮಾಡಿಕೊಟ್ಟು ಸಮುದಾಯಕ್ಕೆ ನ್ಯಾಯ ಒದಗಿಸಿಕೊಟ್ಟಿದ್ದರು.ಇದಲ್ಲದೆ ಅನೇಕ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ವಸತಿ ಸೌಲಭ್ಯಗಳನ್ನು ಕೊಡಿಸಿದ ಹೆಗ್ಗಳಿಕೆಯೂ ಬಿ. ನಾರಾಯಣರಾವರಿಗೆ ಸಲ್ಲುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ನಮ್ಮ ಸಮಾಜದ ಕೆಲವರ ಅಸೂಯೆಯಿಂದಾಗಿ ದಿ. ಬಿ.ನಾರಾಯಣರಾವ್‌ ಅವರ ರಾಜಕೀಯ ಜೀವನ ಬೀದರನಿಂದ ಬಸವಕಲ್ಯಾಣಕ್ಕೆ ವರ್ಗಾಯಿಸುವಂತಾಯಿತು. ಅವರು ಕಟ್ಟಿ ಬೆಳೆಸಿದ ಕೆಲವು ಶಿಕ್ಷಣ ಸಂಸ್ಥೆಗಳನ್ನು ಸಹ ಅವರಿಂದ ಕಸಿದುಕೊಳ್ಳಲಾಯಿತು. ಆದರೆ ಈ ಬಗ್ಗೆ ಚಕಾರವೆತ್ತದೆ ತಮ್ಮ ಸಂಸ್ಥೆಯನ್ನು ಬಿಟ್ಟುಕೊಟ್ಟಿದ್ದು ಅವರ ದೊಡ್ಡ ಗುಣ. ಅವರಿಗೆ ಅನ್ಯಾಯವಾದರೂ ಸಹ ಸದಾ ಗೊಂಡ ಸಮುದಾಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿದ್ದರು. ಅವರ ಹೆಸರು ಉಳಿಸಬೇಕೆಂದರೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು. ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪಕ್ಕೆ ದಿ ಬಿ.ನಾರಾಯಣರಾವ ಕಾರಣರಾಗಿದ್ದಾರೆ” ಎಂದು ಅಭಿಪ್ರಾಯಪಟ್ಟರು.

ಹಿರಿಯ ಮುಖಂಡ ಬಕ್ಕಪ್ಪ ಶೇರಿಕಾರ ಮಾತನಾಡಿ, “ದಿ. ಬಿ. ನಾರಾಯಣರಾವ ಇಂದು ಬದುಕಿದ್ದರೆ ರಾಜ್ಯ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆ ಮಂತ್ರಿಯಾಗುತ್ತಿದ್ದರು. ಅಂದು ಕರೋನಾ ಮಹಾಮಾರಿ ತಗುಲಿದರೂ ಬಸವಕಲ್ಯಾಣದ ಜನತೆಯ ಒಳಿತಿಗಾಗಿ ತಮ್ಮ ಪ್ರಾಣ ಮುಡುಪಾಗಿಟ್ಟು ಅನೇಕ ಬಡ ಕುಟುಂಬಗಳಿಗೆ ಅಹಾರ ಸಾಮಾಗ್ರಿ ಒದಗಿಸುವುದಲ್ಲದೆ ಇತರೆ ರಾಜ್ಯಗಳಿಗೆ ಗುಳೆ ಹೋಗಿದ್ದ ಕ್ಷೇತ್ರದ ಜನತೆಗೆ ಸ್ವಂತ ಖರ್ಚಿನಲ್ಲಿ ತವರಿಗೆ ಕರೆಸಿಕೊಂಡು ಜೀವ ಕಾಪಾಡಿಕೊಳ್ಳುವಂತೆ ಸಲಹೆ ನೀಡುತ್ತಿದ್ದರು” ಎಂದು ಸ್ಮರಿಸಿದ್ದರು.

ಈ ವೇಳೆ ಬಿ. ನಾರಾಯಣರಾವ ಸಹೋದರ ಬಿ. ಸೋಮನಾಥರಾವ ಹಾಗೂ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ ಜೋಳದಾಪಕೆ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರ ಸಹಿತ ಹಲವರ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ

ಕಾರ್ಯಕ್ರಮದಲ್ಲಿ ಬೀದರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿವೃತ್ತ ಅಧಿಕಾರಿ ಮಲ್ಲಿಕಾರ್ಜುನ ಸದಾಶಿವ, ಜಿಲ್ಲಾ ಕಸಾಪ ಮಾಜಿ ಕಾರ್ಯದರ್ಶಿ ನಾಗಶೇಟ್ಟಿ ಜ್ಯೋತೆಪ್ಪನೋರ, ಸಾಹಿತಿಗಳಾದ ಡಾ.ಸಂಜೀವಕುಮಾರ ಅತಿವಾಳೆ, ಆತ್ಮನಂದ ಬಂಬುಳಗಿ ಸೇರಿಂದತೆ ಪ್ರಮುಖರಾದ ಎಂ.ಪಿ. ವೈಜಿನಾಥ, ಶ್ರೀಕಾಂತ ಗೋರನಳ್ಳಿ, ಜಾಲಿಂದರ ಕಮಠಾಣೆ, ಬಸವರಾಜ, ಶ್ರೀಕಾಂತ ಬಿ. ಕೋಲಿ, ದತ್ತು ಕಮಠಾಣೆ ಹಾಗೂ ಬಿ. ನಾರಾಯಣರಾವ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...