ಮರೀಚಿಕೆಯಾಗುತ್ತಿರುವ ಕಾನೂನುಗಳು, ನಿಲ್ಲದ ಕಾರ್ಮಿಕ ಶೋಷಣೆ : ಹೊನ್ನೇನಹಳ್ಳಿ ಯಲ್ಲಪ್ಪ

Date:

ಕೋಲಾರ: ದೇಶದಲ್ಲಿ ಆಳುವ ಸರ್ಕಾರದ ನೀತಿಗಳಿಂದಾಗಿ ಕಾರ್ಮಿಕರ ಭದ್ರತೆಗಾಗಿ ಇರುವ ಕಾನೂನುಗಳು ಹಂತಹಂತವಾಗಿ ಮರೀಚಿಕೆಯಾಗುತ್ತಿವೆ, ಕಾರ್ಮಿಕರ ಮೇಲಾಗುತ್ತಿರುವ ಅನ್ಯಾಯ, ದಬ್ಬಾಳಿಕೆ ಶೋಷಣೆ ನಿಂತಿಲ್ಲ, ಕಾರ್ಮಿಕರ ಹಕ್ಕುಗಳು ಸಮರ್ಪಕವಾಗಿ ಜಾರಿ ಮಾಡಲು ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದು ಐ.ಎನ್.ಟಿ.ಯು.ಸಿ ಜಿಲ್ಲಾ ಅಧ್ಯಕ್ಷ ಹೊನ್ನೇನಹಳ್ಳಿ ಯಲ್ಲಪ್ಪ ತಿಳಿಸಿದರು.

- Advertisement -

ನಗರದ ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಮುಂಭಾಗದಲ್ಲಿ ಮೇ ದಿನಾಚರಣೆಯ ಪ್ರಯುಕ್ತ ಶುಕ್ರವಾರ ಧ್ವಜಾರೋಹಣದಲ್ಲಿ ಭಾಗವಹಿಸಿ ಮಾತನಾಡಿದ ಅವರು ದೇಶದಲ್ಲಿ ಮೋದಿ ಸರ್ಕಾರ ಬಂದ ನಂತರದಲ್ಲಿ ಕಾರ್ಮಿಕರಿಗೆ ನೀಡಬೇಕಾದ ನ್ಯಾಯಯುತ ಸೌಲಭ್ಯಗಳನ್ನು ನೀಡುತ್ತಿಲ್ಲ ಕಂಪನಿಗಳ ಹಾಗೂ ಬಂಡವಾಳಶಾಹಿಗಳ ಕೋಟ್ಯಾಂತರ ರೂಪಾಯಿ ಸಾಲ ಮನ್ನಾ ಮಾಡಿದ್ದಾರೆ ದೇಶದಲ್ಲಿ ಇಂದಿಗೂ ಬಡತನ, ನಿರುದ್ಯೋಗ ಅಂತಹ ಗಂಭೀರವಾದ ಸಮಸ್ಯೆಗಳಿವೆ. ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹೋರಾಟಕ್ಕೆ ನಾವು ಎಲ್ಲರೂ ಸಜ್ಜಾಗಬೇಕಿದೆ ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕೇಂದ್ರ ಸರ್ಕಾರವು ಬಹುರಾಷ್ಟ್ರೀಯ ಹಾಗೂ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇತ್ತಿಚೀನ ನಾಲ್ಕು ಕಾರ್ಮಿಕ ಸಂಹಿತೆಗಳೇ ನಿದರ್ಶನವಾಗಿವೆ ಕಾರ್ಮಿಕರಿಗೆ ಕನಿಷ್ಟ ವೇತನ ಜಾರಿಯಾಗಬೇಕಿದೆ ಕಾರ್ಮಿಕರಿಂದಾಗಿಯೇ ಕಾರ್ಖಾನೆ ಇದೆ ಎಂಬುದನ್ನು ಮಾಲೀಕರು ತಿಳಿಯಬೇಕಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ಕೈಗಾರಿಕೆಗೆ ರೈತರ ಜಮೀನು ಸ್ವಾಧೀನ ಜಿಲ್ಲಾಡಳಿತ ಭವನದ ಎದುರು ರೈತರು ಪೊಲೀಸರ ನಡುವೆ ಜಟಾಪಟಿ

ಈ ಸಂದರ್ಭದಲ್ಲಿ ಐ.ಎನ್.ಟಿ.ಯು.ಸಿ ಜಿಲ್ಲಾ ಕಾರ್ಯದರ್ಶಿ ಮುರಳೀಧರ್, ತಾಲೂಕು ಅಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ನಾಗರಾಜ್, ಖಜಾಂಚಿ ಲಕ್ಷ್ಮಿಕಾಂತಮ್ಮ, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಮಾಲಾ, ತಾಲೂಕು ಸಮಿತಿ ಸದಸ್ಯರಾದ ಮುನಿಯಮ್ಮ, ಶಿವಣ್ಣ, ಅನಿಲ್, ಮಾಲಮ್ಮ, ಶಂಕರಪ್ಪ, ಮುರಳಿಧರ್, ಕುಮಾರ್, ಜಡೇರಿ ನಾರಾಯಣಸ್ವಾಮಿ, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...