ಕಾನೂನಿನ ಚೌಕಟ್ಟು, ಮಾನವೀಯ ಮೌಲ್ಯಗಳೊಂದಿಗೆ ವಕಾಲತ್ತು ನಡೆಸಿ ಕಕ್ಷಿದಾರರಿಗೆ ನ್ಯಾಯ ಒದಗಿಸುವುದು ಮತ್ತು ನ್ಯಾಯಪರವಾಗಿ ನಿಲ್ಲುವುದು ವಕೀಲರ ಜವಾಬ್ದಾರಿಯಾಗಿದೆ ಎಂದು ಬಾಗೇಪಲ್ಲಿ ತಾಲ್ಲೂಕು ಜೆಎಂಎಫ್‌ಸಿ ನ್ಯಾಯಾಲಯ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್ ಚಾರಿ ಸಲಹೆ ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕು ನ್ಯಾಯಾಲಯದ ಆವರಣದಲ್ಲಿ ಸೋಮವಾರ ವಕೀಲರ ಸಂಘ ಆಯೋಜಿಸಿದ್ದ ನೂತನ ನ್ಯಾಯಾಧೀಶರಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು.
ವಕೀಲರು ಹಾಗೂ ನ್ಯಾಯಾಧೀಶರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇಬ್ಬರೂ ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ, ಪ್ರಕರಣಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಸಾಧ್ಯ. ವಕೀಲರು ಪ್ರಾಮಾಣಿಕ ಹಾಗೂ ಸತ್ಯದ ಧೋರಣೆಯೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?
ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಎ.ನಂಜುಂಡಪ್ಪ, ಕರುಣಾಸಾಗರ ರೆಡ್ಡಿ, ಅಪ್ಪಿಸ್ವಾಮಿ ರೆಡ್ಡಿ, ನಂಜಪ್ಪ, ಅಲ್ಲಾ ಬಕಾಷ್, ನಾಗಭೂಷಣ, ಸುಧಾಕರ್, ಬಾಲು ನಾಯಕ್ ಮುಂತಾದ ಪ್ರಮುಖರು ಹಾಜರಿದ್ದರು.