ಬೀದರ್‌ | ಸ್ವಾತಂತ್ರ್ಯ ಅಮೃತ ಮಹೋತ್ಸವ ನೆನಪಿಗೆ 75 ಸಾವಿರ ವಿದ್ಯಾರ್ಥಿಗಳಿಗೆ ಉಪನ್ಯಾಸ

Date:

  • ಜಿಲ್ಲೆಯ‌ ಶಾಲಾ-ಕಾಲೇಜಿನ 75 ಸಾವಿರ ವಿದ್ಯಾರ್ಥಿಗಳಿಗೆ ದೇಶಾಭಿಮಾನದ ಉಪನ್ಯಾಸ.
  • ದೇಶದ ನೈಜ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ತುಂಬಾ ಅಗತ್ಯ.

ಇಂದಿನ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಕಡಿಮೆಯಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಮಹಾತ್ಮರ ಜೀವನ ಮತ್ತು ಸಾಧನೆಗಳನ್ನು ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಹೀಗಾಗಿ ನನ್ನ ವೃತ್ತಿಯ ಬಿಡುವಿನ ವೇಳೆ ಹಾಗೂ ರಜಾ ದಿನಗಳಲ್ಲಿ ಜಿಲ್ಲೆಯ‌ ವಿವಿಧ ಶಾಲಾ-ಕಾಲೇಜಿನ 75 ಸಾವಿರ ವಿದ್ಯಾರ್ಥಿಗಳಿಗೆ ದೇಶಾಭಿಮಾನದ ಕುರಿತು ಉಪನ್ಯಾಸ ನೀಡಲು ಸಂಕಲ್ಪ ಮಾಡಿದ್ದೇನೆ ಎಂದು ಔರಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಓಂಪ್ರಕಾಶ ದಡ್ಡೆ ಹೇಳಿದರು.

- Advertisement -

ಔರಾದ ತಾಲೂಕಿನ ಧರಿ ಹನುಮಾನ್ ಸಮೀಪದ ಜ್ಞಾನಭಾರತಿ ಪ್ರೌಢ ಶಾಲೆಯಲ್ಲಿ ಭಾರತದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಸವಿ ನೆನಪಿಗಾಗಿ ಜಿಲ್ಲೆಯ 75 ಸಾವಿರ ವಿದ್ಯಾರ್ಥಿಗಳಿಗೆ ದೇಶಭಕ್ತಿ ಬಿಂಬಿಸುವ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಭಿಯಾನದ ನೇತ್ರತ್ವ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನಿವೃತ್ತ ಯೋಧ ಮಹಾದೇವ ಕೋಟೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, “ದೇಶದ ಸ್ವಾತಂತ್ರ್ಯ ಚಳವಳಿಯ ಹೋರಾಟಗಾರರನ್ನು ಸ್ಮರಿಸುವುದು ಅನಿವಾರ್ಯವಾಗಿದೆ. ವಿಶೇಷವಾಗಿ ವಿದ್ಯಾರ್ಥಿಗಳಿಗೆ- ಯುವ ಜನಾಂಗಕ್ಕೆ ಮಹಾತ್ಮರ ಆದರ್ಶಗಳನ್ನು ಮುಟ್ಟಿಸುವ ಕಾರ್ಯ ಕೈಗೊಂಡಿರುವ ಈ ಓಂಪ್ರಕಾಶ ದಡ್ಡೆ ಅವರ ಉದ್ದೇಶ ಶ್ಲಾಘನೀಯ” ಎಂದು ನುಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪತ್ರಕರ್ತ ಬಾಲಾಜಿ ಕುಂಬಾರ್ ಮಾತನಾಡಿ, ” ಅಂದು ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹಾತ್ಮರು ತ್ಯಾಗ ಬಲಿದಾನಗೈದಿದ್ದಾರೆ. ಇಂದು ಅದೇ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ, ದೇಶದ ನೈಜ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳಿಗೆ ತಿಳಿಸುವುದು ತುಂಬಾ ಅಗತ್ಯವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಕ್ರಮ ಆಸ್ತಿ ಆರೋಪ; ಕಾನ್ಸ್‌ಟೇಬಲ್‌ ಮನೆ ಮೇಲೆ ಲೋಕಾಯುಕ್ತ ದಾಳಿ

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಗಳಾದ ಮಧುಕರ ಬಂಗಾರೆ, ಚಿರಂಜೀವಿ ಪಾಟೀಲ, ಶಿವಾನಂದ ಕೋಟೆ, ಕಲ್ಲಪ್ಪ ಪಾಂಚಾಳ ಸೇರಿದಂತೆ ಶಾಲಾ ವಿದ್ಯಾರ್ಥಿಗಳು , ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಬಸವಕಲ್ಯಾಣ | ಬೌದ್ಧ ಧರ್ಮ ಚಾರಿಕಾ ಕಾರ್ಯಕ್ರಮ

ಮಾತಾ ರಮಾಬಾಯಿ ಅಂಬೇಡ್ಕರ್ ಮಹಿಳಾ ಟ್ರಸ್ಟ್ ಹಾಗೂ ಸರ್ವೋದಯ ಸಿದ್ಧಾರ್ಥ ಕ್ಲಬ್...