ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸದ ಗ್ರಾಪಂ ಪಿಡಿಒಗಳ ವಿರುದ್ದ ಕಾನೂನು ಕ್ರಮ :-ಶಾಸಕ ಎಸ್. ಎನ್.ಸುಬ್ಬಾರೆಡ್ಡಿ

Date:

ಬಾಗೇಪಲ್ಲಿ:-ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸದ ಗ್ರಾಮ ಪಂಚಾಯತಿ ಪಿಡಿಒಗಳ ವಿರುದ್ದ ಕಾನೂನು ಕ್ರಮ ಜರುಗಿಸದಿದ್ದರೆ ಜಿಲ್ಲಾ ಪಂಚಾಯತಿ ಕಚೇರಿ ಮುಂದೆ ಕುಳಿತುಕೊಳ್ಳುತ್ತೇನೆಂದು ಈಗಾಗಲೇ ಜಿ.ಪಂ ಸಿಇಒಗೆ ಸೂಚಿಸಿದ್ದೇನೆಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪಿಡಿಒಗಳಿಗೆ ಎಚ್ಚರಿಕೆ ನೀಡಿದರು.

- Advertisement -

ಬಾಗೇಪಲ್ಲಿ ಪಟ್ಟಣದ ತಾಲೂಕು ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಚೇಳೂರು, ಗುಡಿಬಂಡೆ ಹಾಗೂ ಬಾಗೇಪಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಹಾಗೂ ಗ್ರಾಮ ಪಂಚಾಯತಿ ಅಡಳಿತ ಅಧಿಕಾರಿಗಳ ಮತ್ತು ಪಿಡಿಒಗಳ ಸಭೆ ನಡೆಸಿ ಕುಡಿಯುವ ನೀರಿನ ಸಮಸ್ಯೆ ಕುರಿತು ಚರ್ಚಿಸಿ ತ್ವರಿತವಾಗಿ ಪರಿಹಾರಕ್ಕೆ ಮುಂದಾಗುವಂತೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಅಡಳಿತ ಅವಧಿ ಮುಗಿದಿದ್ದು ಅಡಳಿತ ಅಧಿಕಾರಿಗಳನ್ನು ನೇಮಕ ಮಾಡಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಮೂಲ ಭೂತ ಸೌಲಭ್ಯಗಳು ಕಲ್ಪಿಸುವ ಜವಾಬ್ದಾರಿ ಆಡಳಿತ ಅಧಿಕಾರಿಗಳ ಹೊಣೆ ಆಗಿದೆ. ಕುಡಿಯುವ ನೀರಿನ ಸಮಸ್ಯೆ ಜತೆಗೆ, ಕೊಳೆವೆಬಾವಿಗಳ ಹಾಗೂ ನೀರು ಶುದ್ದೀಕರಣ ಘಟಕಗಳ ನಿರ್ವಹಣೆ ಬಗ್ಗೆ ಅಧಿಕಾರಿಗಳಿಂದ ಈಗಾಗಲೇ ಮಾಹಿತಿ ಪಡೆದುಕೊಂಡಿದ್ದೇವೆ. ಬಾಗೇಪಲ್ಲಿ, ಚೇಳೂರು, ಗುಡಿಬಂಡೆ ತಾಲೂಕು ವ್ಯಾಪ್ತಿಯ 23 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು ನೀರಿನ ಸಮಸ್ಯೆಯ ಇತ್ಯರ್ಥಕ್ಕೆ ಆಗತ್ಯ ಕ್ರಮಗಳು ತೆಗೆದುಕೊಳ್ಳಬೇಕಾಗಿದೆ. ಕಟ್ಟಡಗಳು ನಿರ್ಮಾಣ ಮಾಡದ ಲೇಔಟ್‌ಗಳಲ್ಲಿರುವ ಕೊಳವೆ ಬಾವಿಗಳ ನೀರನ್ನು ತಾತ್ಕಲಿಕವಾಗಿ ಗ್ರಾಮಗಳಿಗೆ ಬಳಕೆ ಮಾಡಿಕೊಳ್ಳುವ ವ್ಯವಸ್ಥೆಯ ಜತೆಗೆ ಸಾರ್ವಜನಿಕ ಕೊಳವೆಬಾವಿಯ ನೀರು ಪೋಲಾಗದಂತೆ ಪಿಡಿಒಗಳು ಅಗತ್ಯ ಕ್ರಮ ಕೈಗೊಳ್ಳಿ, ನೀರಿನ ಪ್ರಮಾಣ ಕಡಿಮೆ ಆಗಿರುವ ಕೊಳವೆಬಾವಿಗಳನ್ನು ಪಟ್ಟಿ ಮಾಡಿ ರೀ ಡ್ರಿಲ್ ಮಾಡುವ ವ್ಯವಸ್ಥೆಗೆ ಶಿಪಾರಸ್ಸು ಮಾಡಿ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಿ ಎಂದರು.

ಜಿಲ್ಲಾ ಪಂಚಾಯತಿ ಸಿಇಒ ನವೀನ್ ಭಟ್ ಮಾತನಾಡಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ತಾಲೂಕುಗಳ ವ್ಯಾಪ್ತಿಯಲ್ಲಿರುವ ಗ್ರಾಮಗಳಿಗೆ ಸಮರ್ಪಕವಾಗಿ ಕುಡಿಯುವ ನೀರುವ ಪೂರೈಸುವ ಗುರಿ ಹೊಂದಿದ್ದೇವೆ. ಇದರ ಭಾಗವಾಗಿ ತೊಂದರೆಗೆ ಗುರಿಯಾಗಿರುವ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳಿಂದ ಅಥವಾ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡುವ ತೀರ್ಮಾನ ತೆಗೆದುಕೊಂಡಿದ್ದೇವೆ, ನೀರಿನ ಆಸರೆ ಇಲ್ಲದ ಗ್ರಾಮಗಳಲ್ಲಿ ಹೊಸದಾಗಿ ಕೊಳವೆಬಾವಿ ಕೊರೆಯತ್ತೇವೆ. ಕೆಟ್ಟಿರುವ ನೀರು ಶುದ್ದೀಕರಣ ಘಟಕಗಳ ದುರಸ್ಥಿಗೆ ಅಗತ್ಯ ಕ್ರಮಗಳು ಜರುಗಿಸಿ ಜನತೆಗೆ ಸಕಾಲಕ್ಕೆ ನೀರು ಸರಬರಾಜು ಮಾಡುವ ವ್ಯವಸ್ಥೆಯನ್ನು ಕಲ್ಪಿಸಲು ಜಿಲ್ಲಾಡಳಿತ ಸನ್ನದ್ದವಾಗಿದ್ದು ಗ್ರಾಮ ಪಂಚಾಯತಿ ಪಿಡಿಒಗಳು ಕಾಲ ಕಾಲಕ್ಕೆ ಮಾಹಿತಿ ಓದಗಿಸಿ ಪರಿಹಾರ ಕ್ರಮಕ್ಕೆ ಮುಂದಾಗುವಂತೆ ಸೂಚಿಸಿದ್ದೆವೆ ಎಂದರು.

ಇದನ್ನು ಓದಿದ್ದೀರಾ..? ರೈತ ಮುಖಂಡ ಟಿ.ಎಂ ವೆಂಕಟೇಶ್ ಕುಟುಂಬಕ್ಕೆ ಪರಿಹಾರ ನೀಡಲು ಮನವಿ

ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಅಭಿಯಂತರ ರಾಮಕೃಷ್ಣ, ಬಾಗೇಪಲ್ಲಿ ತಹಶೀಲ್ದಾರ್ ಮನೀಷಾಪತ್ರಿ, ಚೇಳೂರು ತಹಶೀಲ್ದಾರ್ ಶ್ವೇತ, ಬಾಗೇಪಲ್ಲಿ ತಾ.ಪಂ. ಇಒ ರಮೇಶ್, ಗುಡಿಬಂಡೆ ತಾ.ಪಂ ಇಒ ನಾಗಮಣಿ, ಎಇಇ ರಾಮಚಂದ್ರ, ಅನಿಲ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ ಮತ್ತಿರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆಗೆ ಶರಣು

ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ...

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...