ಬಿ ಎಲ್ ಸಂತೋಷ್ ಮೊದಲು ತಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲಿ: ಜಗದೀಶ್ ಶೆಟ್ಟರ್‌ ತಿರುಗೇಟು

Date:

Advertisements
  • ‘ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡುವುದೇ ಬಿಜೆಪಿ ಕೆಲಸ’
  • ‘ಜನರು ಯಾಕೆ ಮೂಲೆಗುಂಪು ಮಾಡಿದ್ದಾರೆಂದು ಅರ್ಥಮಾಡಿಕೊಳ್ಳಲಿ’

ಬಿ ಎಲ್ ಸಂತೋಷ್ ಅವರು ಬೇರೆ ಪಕ್ಷದವರನ್ನು ಕರೆತಂದು ಹೊಸ ಸರ್ಕಾರ ರಚನೆ ಮಾಡುವುದು ದೂರದ ಮಾತು. ಮೊದಲು ತಮ್ಮ ಪಕ್ಷದಲ್ಲಿ ಇರುವವರನ್ನು ಮತ್ತು ಪಕ್ಷದ ಅಸ್ತಿತ್ವವನ್ನು ಉಳಿಸಿಕೊಳ್ಳಲಿ ಎಂದು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್‌ ಸದಸ್ಯ ಜಗದೀಶ್ ಶೆಟ್ಟರ್‌ ತಿರುಗೇಟು ನೀಡಿದ್ದಾರೆ.‌

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡುವುದೇ ಬಿಜೆಪಿ ಕೆಲಸ. ಇಡೀ ರಾಷ್ಟ್ರದಲ್ಲಿ ಆಪರೇಶನ್ ಮಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬಂದಿಲ್ಲ. ಈ ಬಾರಿ ಜನರು ಯಾಕೆ ಮೂಲೆಗುಂಪು ಮಾಡಿದ್ದಾರೆ ಎಂಬುವುದನ್ನು ಅರ್ಥಮಾಡಿಕೊಳ್ಳಲಿ” ಎಂದು ಕುಟುಕಿದ್ದಾರೆ.

“ತಮ್ಮ ಸಂಪರ್ಕದಲ್ಲಿ ಶಾಸಕರು ಇದ್ದರೆ ನಾಳೆಯಿಂದಲೇ ಆಪರೇಶನ್ ಶುರು ಮಾಡಲಿ. ಪಕ್ಷದಲ್ಲಿರುವ ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರುವುದು ನಿಮ್ಮ ಕೆಲಸ, ಬೆಳಗ್ಗೆಯಿಂದ ಸಾಯಂಕಾಲದವರೆಗೂ ಆಪರೇಶನ್ ಮಾಡುವುದೇ ಕೆಲಸವಾಗಿದೆ” ಎಂದು ಹರಿಹಾಯ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?

“ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇದಕ್ಕೆ ಕಾರಣ ಯಾರು ಎಂದು ಹೇಳಿದ್ದೇನೆ. ಹಿಂದೆಯೂ ಅವರ ಬಗ್ಗೆ ಮಾತನಾಡಿದ್ದೇನೆ. ಅಂತಹವರ ಬಗ್ಗೆ ದೆಹಲಿಯಲ್ಲಿ ಕುಳಿತಿರುವ ಬಿಜೆಪಿ ನಾಯಕರು ಯೋಚನೆ ಮಾಡಬೇಕು. ಬಿಜೆಪಿ ಪಕ್ಷವು ಕೆಲವೇ ಜನರ ಕೈಯಲ್ಲಿರುವ ಕಾರಣ ಈ ಸ್ಥಿತಿ ಒದಗಿ ಬಂದಿದೆ, ರಾಜ್ಯ ಬಿಜೆಪಿ ನಾಯಕರ ಪರಿಸ್ಥಿತಿ ಇಡೀ ಜಗತ್ತಿಗೆ ಗೊತ್ತಾಗಿದೆ” ಎಂದರು.

“ಜನರ ಮನಸ್ಸನ್ನು ಗೆದ್ದು ಅಧಿಕಾರಕ್ಕೆ ಬರುವತ್ತ ಬಿಜೆಪಿ ಚಿಂತನೆ ಮಾಡುವುದು ಬಿಟ್ಟು ವಾಮಮಾರ್ಗದ ಬಗ್ಗೆ ಹೆಚ್ಚು ಯೋಚನೆ ಮಾಡುತ್ತದೆ. ಬಿಜೆಪಿ ಮುಳುಗುತ್ತಿರುವ ಹಡಗು. ಅವರ ಪಕ್ಷದ ಬಗ್ಗೆ ಮಾತನಾಡುವುದು ನಿಷ್ಪ್ರಯೋಜಕ” ಎಂದು ಹೇಳಿದರು.

“ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಜೊತೆ ನಾನು ಮಾತಾಡಿಲ್ಲ. ಹೈಕಮಾಂಡ್ ಕೂಡಾ ನನಗೆ ಏನೂ ಹೇಳಿಲ್ಲ” ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X