ಬೀದರ್‌ | ಎದೆಗಿಳಿಯುವ ಸಾಹಿತ್ಯ ರಚನೆಯಾಗಲಿ : ಶಿವಕುಮಾರ ಶೀಲವಂತ

Date:

ಇಂದಿನ ಯುವಕರು ಯಾಂತ್ರಿಕ ಬದುಕಿನ ಕಡೆಗೆ ಹೆಚ್ಚು ವಾಲುತ್ತಿದ್ದಾರೆ. ತಾಳ್ಮೆ ಕಳೆದುಕೊಂಡು ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಯನ್ನು ಮರೆಯುತ್ತಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಕಳವಳ ವ್ಯಕ್ತಪಡಿಸಿದರು.

- Advertisement -

ಕರ್ನಾಟಕ ಸಾಹಿತ್ಯ ಸಂಘ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೀದರ್ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಭವನದಲ್ಲಿ ಜರುಗಿದ ಬಹುಭಾಷಾ ಕವಿಗೋಷ್ಠಿ ಉದ್ಘಾಟನೆ ನೆರವೇರಿಸಿ ಮಾತನಾಡಿ, ʼನಾವು ರಚಿಸುವ ಸಾಹಿತ್ಯ ವ್ಯಕ್ತಿಯ ಎದೆಗಿಳಿದು ಬದುಕು ಪರಿವರ್ತನೆ ಆಗುವಂತಿರಬೇಕು. ಇಂದಿನ ಕವಿಗೋಷ್ಠಿಗಳಲ್ಲಿ ಅಂತಹ ಸಾಹಿತ್ಯ ಮಾರ್ದನಿಸಿದ್ದು ಶ್ಲಾಘನೀಯʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ʼಇಂದಿನ ಕವಿಗೋಷ್ಠಿಯಲ್ಲಿ ಬದುಕು, ಕೇರಳದ ವಯನಾಡಿನ ಮಳೆಯ ರೌದ್ರನರ್ತನ, ಪರಿಸರ, ಸ್ವಾತಂತ್ರ್ಯ ಮುಂತಾದ ವಿಷಯಗಳ ಮೇಲೆ ಬೆಳಕು ಚೆಲ್ಲುವ ಗಟ್ಟಿ ಕವಿತೆಗಳು ಮೂಡಿ ಬಂದಿದ್ದವು ಎಂದರು. 18 ವರ್ಷ ಮೇಲ್ಪಟ್ಟ ಯುವಕ, ಯುವತಿಯರು ಗುರುತಿನ ಚೀಟಿ ನೋಂದಣಿ ಮಾಡಿಸಿಕೊಳ್ಳಬೇಕುʼ ಎಂದು ಸಲಹೆ ನೀಡಿದರು.

ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಡಾ.ಜಗನ್ನಾಥ ಹೆಬ್ಬಾಳೆ ಪ್ರಾಸ್ತಾವಿಕವಾಗಿ ಮಾತನಾಡಿ, ʼಮನುಷ್ಯ ಮನುಷ್ಯನಂತೆ ಬದುಕಲು ಸಾಹಿತ್ಯ ಸಹಕಾರಿಯಾಗಿದೆ. ಮೊಬೈಲ್‌ಗಳಲ್ಲಿ ಮಗ್ನರಾದ ಇಂದಿನ ಯುವಕರು ಸಾಹಿತ್ಯದ ಅಭಿರುಚಿ ಕಳೆದುಕೊಳ್ಳುತ್ತಿದ್ದಾರೆ. ಆದರೆ ಸಾಹಿತ್ಯ ರಚನೆಯಿಂದ ಸಹಕಾರ, ಸಹಾನುಭೂತಿ, ಸಹಯೋಗ ಮತ್ತು ಪ್ರೀತಿ, ವಾತ್ಸಲ್ಯ ಮೂಡುತ್ತದೆ. ಕವಿತೆಗಳು ವಾಸ್ತವತೆಯನ್ನು ಜನರ ಮುಂದಿಡುತ್ತವೆ, ಸಮಾಜವ ತಿದ್ದುವ ಕೆಲಸ ಮಾಡುತ್ತವೆ. ಯುವಕರಿಗೆ ಸಾಹಿತ್ಯ ಕುರಿತು ಒಲವು ಹೆಚ್ಚಾಗಲಿ ಎನ್ನುವ ಉದ್ದೇಶದಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕವಿಗೋಷ್ಠಿ ಆಯೋಜಿಸಲಾಗಿದೆʼ ಎಂದರು.

WhatsApp Image 2024 08 13 at 7.37.12 PM

ಕವಿಗೋಷ್ಠಿಯಲ್ಲಿ ಮಹಿಳೆ, ಕೇರಳದ ವಯನಾಡಿನ ಅತಿವೃಷ್ಠಿ, ಆಗಸ್ಟ್ ಪಂದ್ರಾ, ನಮ್ಮನ್ನು ನಾವು ಪ್ರೀತಿಸಬೇಕು, ಆರ್.ವಿ.ಬಿಡಪ್ ಸಾಧನೆಗಳು, ಹೊಸ ನಿರ್ಭಯಾ ಎಂಬ ಕವಿತೆಗಳು ಮಾರ್ದನಿಸಿದವು. ಕವಿಗಳಾದ ಪ್ರೊ.ಎಸ್.ವಿ.ಕಲ್ಮಠ, ಭಾರತಿ ವಸ್ತ್ರದ್, ಡಾ. ಶ್ರೇಯಾ ಮಹಿಂದ್ರಕರ್, ರೂಪಾ ಪಾಟೀಲ, ಪುಷ್ಪ ಕನಕ, ಜಗದೇವಿ ದುಬಲಗುಂಡಿ, ಮಹಾರುದ್ರ ಡಾಕುಳಗಿ, ಅಸೃತ್ ಖಾದ್ರಿ, ಮಾರುತಿ ಭೀಮಣ್ಣ, ವೀರಶೆಟ್ಟಿ ಚೌಕನಪಳ್ಳಿ, ಡಾ. ಮಹಾದೇವಿ ಹೆಬ್ಬಾಳೆ, ಹಂಸಕವಿ, ಡಾ.ರಾಮಚಂದ್ರ ಗಣಾಪುರ, ಡಾ.ಮುಸ್ತಾಕಂ, ಮಲ್ಲಮ್ಮ ಸಂತಾಜಿ, ಡಾ.ಸಾವಿತ್ರಿ ಹೆಬ್ಬಾಳೆ ಸೇರಿದಂತೆ ಇನ್ನಿತರರು ಸ್ವರಚಿತ ಕವನ ವಾಚಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಒಳ್ಳೆಯ ಮನುಷ್ಯನಾಗಲು ಓದಿನ ಅಗತ್ಯವಿದೆ : ಡಾ.ಶಿವಾಜಿ ಮೇತ್ರೆ

ಸಮಾರಂಭದಲ್ಲಿ ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣವರ್, ಕರ್ನಾಟಕ ಸಾಹಿತ್ಯ ಸಂಘದ ಟ್ರಸ್ಟ್ ಅಧ್ಯಕ್ಷ ಶಂಕ್ರೆಪ್ಪ ಹೊನ್ನಾ, ಕಾರ್ಯಕ್ರಮದ ದಾಸೋಹಿ ಅಶೋಕ ಹೆಬ್ಬಾಳೆ, ಪ್ರಕಾಶ ಕನ್ನಾಳೆ ಉಪಸ್ಥಿತರಿದ್ದರು. ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತಿನ ಕಾರ್ಯದರ್ಶಿ ಡಾ.ರಾಜಕುಮಾರ ಹೆಬ್ಬಾಳೆ ಸ್ವಾಗತಿಸಿದರು. ಎಸ್.ಬಿ.ಕುಚಬಾಳ ನಿರೂಪಿಸಿದರು. ನಿಜಲಿಂಗಪ್ಪ ತಗಾರೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...