ಕೇಂದ್ರ ಸರ್ಕಾರ ಸಂವಿಧಾನದ ಒಕ್ಕೂಟ ತತ್ವಗಳಿಗೆ ಬದ್ಧವಾಗಿ ನಡೆದುಕೊಳ್ಳಲಿ: ಸಮಾನ ಮನಸ್ಕರ ಒಕ್ಕೂಟ ಆಗ್ರಹ

Date:

  • ‘ಹಸಿವು ಮುಕ್ತಗೊಳಿಸಲು ಮೊದಲ ಹೆಜ್ಜೆ ಇರಿಸಿರುವ ಕರ್ನಾಟಕ ಸರ್ಕಾರವನ್ನು ಅಭಿನಂದಿಸಿ’
  • ‘ವಿಶ್ವ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಕೈಜೋಡಿಸಬೇಕು’

ಕೇಂದ್ರ ಸರ್ಕಾರವು ಸಂವಿಧಾನದ ಗಣತಂತ್ರ ಮತ್ತು ಒಕ್ಕೂಟ ವ್ಯವಸ್ಥೆಯ ತತ್ವಗಳಿಗೆ ಅನುಗುಣವಾಗಿ ನಡೆದುಕೊಳ್ಳಬೇಕು. ಹಸಿವು ಮುಕ್ತಗೊಳಿಸಲು ಮೊದಲ ಹೆಜ್ಜೆ ಇರಿಸಿರುವ ಕರ್ನಾಟಕ ಸರ್ಕಾರವನ್ನು ಅಭಿನಂದಿಸಿ, ಅಕ್ಕಿಗಾಗಿ ಮಾಡಿರುವ ಮನವಿ ಈಡೇರಿಸುವ ಮೂಲಕ ವಿಶ್ವ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಜಾರಿಗೊಳಿಸಲು ಕೇಂದ್ರ ಕೈಜೋಡಿಸಬೇಕು ಎಂದು ʼಸಮಾನ ಮನಸ್ಕರ ಒಕ್ಕೂಟ-ಕರ್ನಾಟಕʼ ಆಗ್ರಹಿಸಿದೆ.

- Advertisement -

ʼಸಮಾನ ಮನಸ್ಕರ ಒಕ್ಕೂಟದ ಅಡಾ. ಕೆ ಎಂ ಮರುಳಸಿದ್ದಪ್ಪ, ಪ್ರೊ. ಎಸ್ ಜಿ ಸಿದ್ದರಾಮಯ್ಯ, ಡಾ. ನಿರಂಜನಾರಾಧ್ಯ ವಿ ಪಿ, ದಿನೇಶ್ ಅಮಿನಮಟ್ಟು, ಎಲ್ ಎನ್ ಮುಕುಂದರಾಜ್, ಡಾ. ಬಂಜಗೆರೆ ಜಯಪ್ರಕಾಶ್, ಡಾ. ವಸುಂಧರಾ ಭೂಪತಿ, ಡಾ. ಲೀಲಾ ಸಂಪಿಗೆ ಸೇರಿದಂತೆ 18 ಜನರು ಸಹಿ ಮಾಡಿ ಸೋಮವಾರ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಆಹಾರ ಅಭದ್ರತೆಯ ಪರಿಣಾಮಗಳ ಬೆಳಕಿನಲ್ಲಿ, ಪ್ರತಿಯೊಬ್ಬರ ಮೇಲೆ, ವಿಶೇಷವಾಗಿ ಬಡವರು ಮತ್ತು ಅತ್ಯಂತ ದುರ್ಬಲರ ಮೇಲೆ ಗಣನೀಯ ಪರಿಣಾಮ ಬೀರುವ ದೊಡ್ಡ ಆಘಾತಗಳ ಅಪಾಯ ತಗ್ಗಿಸಲು ಆಹಾರ ಪೂರೈಕೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ತ್ವರಿತ ಕ್ರಮಗಳ ಅಗತ್ಯವಿದೆ ಎಂದು ವಿಶ್ವ ಸಂಸ್ಥೆ ಹೇಳುತ್ತದೆ” ಎಂದು ಹೇಳಿದ್ದಾರೆ.

“ವಿಶ್ವ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ-2, 2030ರ ಹೊತ್ತಿಗೆ ಹಸಿವು ಮುಕ್ತ ಜಗತ್ತನ್ನು ಸೃಷ್ಟಿಸುವ ಗುರಿ ಹೊಂದಿದೆ. 2020ರ ಅಂಕಿ ಅಂಶಗಳ ಅನ್ವಯ, ಪ್ರಪಂಚದಾದ್ಯಂತ 720 ಮಿಲಿಯನ್ ಮತ್ತು 811 ಮಿಲಿಯನ್ ಜನರು ಹಸಿವಿನಿಂದ ಬಳಲುತ್ತಿದ್ದಾರೆ. ಹಾಗೆಯೇ ಸುಮಾರು 2.4 ಶತಕೋಟಿ ಜನರು ಅಥವಾ ಪ್ರಪಂಚದ ಜನಸಂಖ್ಯೆಯ ಶೇ. 30ಕ್ಕಿಂತ ಹೆಚ್ಚು ಜನರು ತೀವ್ರವಾಗಿ ಆಹಾರ-ಅಭದ್ರತೆಯಿಂದ ಬಳಲುತ್ತಿದ್ದಾರೆ” ಎಂದು ವಿವರಿಸಿದ್ದಾರೆ.

“ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ ಹಸಿವಿನಿಂದ ಮತ್ತು ಆಹಾರದ ಅಭದ್ರತೆಯಿಂದ ಬಳಲುತ್ತಿರುವವರ ಸಂಖ್ಯೆ ಕ್ರಮೇಣ ಹೆಚ್ಚುತ್ತಿದೆ.
ಕೋವಿಡ್- 19 ಬಿಕ್ಕಟ್ಟು ಹಸಿವಿನ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಿದೆ ಮತ್ತು ಎಲ್ಲ ರೀತಿಯ ಅಪೌಷ್ಟಿಕತೆ ಉಲ್ಬಣಗೊಳಿಸಿದೆ. ಎರಡನೆಯ ಮಹಾಯುದ್ಧದ ನಂತರ ಅತಿದೊಡ್ಡ ಜಾಗತಿಕ ಆಹಾರ ಬಿಕ್ಕಟ್ಟನ್ನು ಸೃಷ್ಟಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರವು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ ವಿತರಣೆಗೆ ಮುಂದಾಗಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಂಡವಾಳಶಾಹಿ ಸ್ನೇಹಿತರ ಲಾಭಕ್ಕೆ ಪಿಎಸ್‌ಯುಗಳಿಂದ 2 ಲಕ್ಷ ಉದ್ಯೋಗ ಕಡಿತ: ರಾಹುಲ್‌ ಗಾಂಧಿ ಆಕ್ರೋಶ

“ಅನ್ನಭಾಗ್ಯ ಈ ಕಾರ್ಯಕ್ರಮದ ಪರಿಣಾಮಕಾರಿ ಜಾರಿಗೆ ಕೇಂದ್ರದ ನೆರವನ್ನು ಕೋರಿ ರಾಜ್ಯ ಸರ್ಕಾರ ಪತ್ರ ಬರೆದಿತ್ತು. ಇದೇ ಸಂದರ್ಭದಲ್ಲಿ ಗಮನಿಸಬೇಕಾದ ಮತ್ತೊಂದು ಮುಖ್ಯ ಅಂಶವೆಂದರೆ, ಎಫ್‌ಸಿಐ ಗೋದಾಮುಗಳಲ್ಲಿ 185.58 ಲಕ್ಷ ಟನ್ ಧಾನ್ಯಗಳ ಹೆಚ್ಚುವರಿ ದಾಸ್ತಾನು ಇದೆ. ಇದರಿಂದ ರಾಜ್ಯಕ್ಕೆ ಅಗತ್ಯವಿರುವ 1.66 ಲಕ್ಷ ಟನ್ ಹೆಚ್ಚುವರಿ ಅಕ್ಕಿ ಕೊಡಲು ಕಷ್ಟವೇನಿಲ್ಲ. ಆದರೂ, ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನಿರಾಕರಿಸುತ್ತಿದೆ. ಇದು ಒಕ್ಕೂಟ ವ್ಯವಸ್ಥೆಯನ್ನು ಅವಮಾನಿಸಿದಂತೆ” ಎಂದು ಆರೋಪಿಸಿದ್ದಾರೆ.

“ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಪ್ರಕಾರ ರಾಜ್ಯಗಳಿಗೆ ಅಗತ್ಯವಿರುವ ಹೆಚ್ಚುವರಿ ಧಾನ್ಯವನ್ನು ಹಂಚಿಕೆ ಮಾಡಬೇಕು.
ಬದಲಾಗಿ, ಕೇಂದ್ರ ಸರ್ಕಾರವು ಈ ವಿಷಯವನ್ನು ರಾಜಕೀಯಕರಣಗೊಳಿಸಿ, ಕರ್ನಾಟಕ ಸರ್ಕಾರ ಸಲ್ಲಿಸಿರುವ ಹೆಚ್ಚುವರಿ ಅಕ್ಕಿಯನ್ನು ಬಿಡುಗಡೆ ಮಾಡಲು ನಿರಾಕರಿಸಿರುವ ಕ್ರಮವನ್ನು ‘ಸಮಾನ ಮನಸ್ಕರ ಒಕ್ಕೂಟ’ ಬಲವಾಗಿ ಖಂಡಿಸುತ್ತದೆ” ಎಂದು ಹೇಳಿದ್ದಾರೆ.

“ಈಗಲಾದರೂ ಕೇಂದ್ರ ಸರ್ಕಾರ ಸಂವಿಧಾನದ ಒಕ್ಕೂಟ ತತ್ವಗಳಿಗೆ ಅನುಗುಣವಾಗಿ, ರಾಜ್ಯ ಸರ್ಕಾರಗಳು ಸಲ್ಲಿಸುವ ಮನವಿಗಳಿಗೆ ಪೂರಕವಾಗಿ ಸ್ಪಂದಿಸಬೇಂದು ಒತ್ತಾಯಿಸುತ್ತದೆ. ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ ಕರ್ನಾಟಕಕ್ಕೆ ಅಗತ್ಯ ಅಕ್ಕಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುತ್ತದೆ” ಎಂದು ಕೋರಿದ್ದಾರೆ.

ಕೇಂದ್ರ ಸರ್ಕಾರ ಸಂವಿಧಾನದ ಒಕ್ಕೂಟ ತತ್ವಗಳಿಗೆ ಅನುಗುಣವಾಗಿ ನಡೆದುಕೊಳ್ಳಲಿ: ಸಮಾನ ಮನಸ್ಕರ ಒಕ್ಕೂಟ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...